ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಭಾಷಿಕ ಪುಂಡರು

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Yashaswini V | Last Updated : Nov 25, 2022, 10:40 AM IST
  • ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಪುಂಡರು
  • ಮಹಾರಾಷ್ಟ್ರದಲ್ಲಿ ಮತ್ತೆ ಪುಂಡಾಟಿಕೆ ಶುರು ಮಾಡಿದ ಮರಾಠಿ ಭಾಷಿಕ ಪುಂಡರು
  • ದೌಂಡ್ ಗ್ರಾಮದ ಬಳಿಕ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳೆದು ಪುಂಡಾಟಿಕೆ
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಭಾಷಿಕ ಪುಂಡರು title=
Karnataka Maharashtra Border Dispute

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕ ಪುಂಡರ ಅಟ್ಟಹಾಸ ಮುಂದುವರೆದಿದ್ದು, ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದು ಕೆಲವು ಮರಾಠಿ ಭಾಷಿಕರು ಮತ್ತೆ ತಮ್ಮ ಪುಂಡಾಟಿಕೆ ಮೆರೆದಿದ್ದಾರೆ. 

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ದೌಂಡ್ ಗ್ರಾಮದಲ್ಲಿ ನಿಪ್ಪಾಣಿ ಘಟಕಕ್ಕೆ ಸೇರಿದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರಿಂದ ಮಸಿ ಬಳಿದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ- ಕಾಂಗ್ರೆಸ್ ಟಿಕೆಟ್ ಅರ್ಜಿ ಸ್ವೀಕಾರದಿಂದ 21.19 ಕೋಟಿ ದಾಖಲೆ ಮೊತ್ತ ಸಂಗ್ರಹ

ಕಳೆದ ಕೆಲವು ದಿನಗಳ ಹಿಂದೆ ಜತ್ತ ತಾಲೂಕಿನ 40 ಗ್ರಾಮ ಕರ್ನಾಟಕಕ್ಕೆ ಸೇರಬೇಕೆಂದು ಠರಾವು ಹೊರಡಿಸಿದ್ದರು ಎಂಬ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಕರುನಾಡಿನ ಬಸ್ಸಿನ ಮೇಲೆ ಜೈ ಮಹಾರಾಷ್ಟ್ರ ಎಂದು ಬರವಣಿಗೆ ಬರೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಇದನ್ನೂ ಓದಿ- "ಈ ಸರ್ಕಾರಕ್ಕೆ ಕಣ್ಣು, ಕಿವಿ, ಹೃದಯವಿಲ್ಲ"

ಮಹಾರಾಷ್ಟ್ರ ನಮ್ಮ ಹಕ್ಕು  ಯಾರಪ್ಪನದಲ್ಲ:
ನಿಪ್ಪಾಣಿ - ಔರಂಗಾಬಾದ್ ಮಧ್ಯೆ ಸಂಚರಿಸುವ ನಿಪ್ಪಾಣಿ ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ಗೆ ಮಸಿ ಬಳೆದು ಪುಂಡಾಟ ಮೆರೆದಿರುವ ಅಖಿಲ ಭಾರತೀಯ ಮರಾಠಾ ಸಂಘದ ಕಾರ್ಯಕರ್ತರು ಬೆಳಗಾವಿ, ನಿಪ್ಪಾಣಿ, ಖಾನಾಪುರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರಕ್ಕೆ ಸೇರಬೇಕು. ಮಹಾರಾಷ್ಟ್ರ ನಮ್ಮ ಹಕ್ಕು  ಯಾರಪ್ಪನದಲ್ಲ ಎಂಬ ಘೋಷಣೆಗಳನ್ನೂ ಕೂಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News