ಉಭಯ ಪಕ್ಷಗಳ ನಾಯಕರ ಸಭೆ: ಫಲಿತಾಂಶದ ಕುರಿತು ಪರಾಮರ್ಶೆ

ಕುಮಾರಕೃಪ ಅತಿಥಿ ಗೃಹದಲ್ಲಿ ಇಂದು ಕರೆದಿದ್ದ ಉಭಯ ಪಕ್ಷಗಳ ನಾಯಕರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಕೆ.ಸಿ. ವೇಣುಗೋಪಾಲ್, ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಡಿ.ಕೆ. ಶಿವಕುಮಾರ್‌, ಎಂ.ಬಿ. ಪಾಟೀಲ್ ಪಾಲ್ಗೊಂಡಿದ್ದರು.

Last Updated : May 29, 2019, 04:23 PM IST
ಉಭಯ ಪಕ್ಷಗಳ ನಾಯಕರ ಸಭೆ: ಫಲಿತಾಂಶದ ಕುರಿತು ಪರಾಮರ್ಶೆ title=

ಬೆಂಗಳೂರು: ನಗರದ ಕುಮಾರಕೃಪ ಅತಿಥಿ ಗೃಹದಲ್ಲಿಂದು ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ ನಡೆಯಿತು.

ಇಂದು ಕರೆದಿದ್ದ ಉಭಯ ಪಕ್ಷಗಳ ನಾಯಕರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ, ಕೆ.ಸಿ. ವೇಣುಗೋಪಾಲ್, ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌, ಡಿ.ಕೆ. ಶಿವಕುಮಾರ್‌, ಎಂ.ಬಿ. ಪಾಟೀಲ್ ಪಾಲ್ಗೊಂಡಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವೇನು ಎಂಬುದರ ಸಂಬಂಧ ಇಂದು ಉಭಯ ಪಕ್ಷದ ನಾಯಕರೆಲ್ಲ ಸೇರಿ ಸಭೆ ನಡೆಸಿದೆವು ಎಂದು ತಿಳಿಸಿದರು.

ಮೈತ್ರಿ ಪಕ್ಷ ಸೇರಿ ಚುನಾವಣೆ ಎದುರಿಸಿದ್ದರೂ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಎಲ್ಲಾ ನಾಯಕರು ಸಭೆ ನಡೆಸಿ, ಪರಾಮಾರ್ಶಿಸಿದೆವು. ಇದೇ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆಯೂ ಚರ್ಚೆ ನಡೆಸಿದೆವು. ಸಚಿವ ಸಂಪುಟ ವಿಸ್ತರಣೆ ಸಂಬಂಧ ಈ ಸಭೆಯಲ್ಲಿ ಚರ್ಚಿಸಿಲ್ಲ ಎಂದು ಅವರು ಹೇಳಿದರು.

Trending News