ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ

ಚಳಿಗಾಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮ್ಯೂಸಿಯಂ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು.  

Written by - Prashobh Devanahalli | Last Updated : Nov 26, 2024, 04:33 PM IST
  • ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ
  • ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸೂಚನೆ
  • ಸಚಿವ ಶಿವರಾಜ ತಂಗಡಗಿ ಸೂಚನೆ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಸಚಿವ ಶಿವರಾಜ ತಂಗಡಗಿ ಸೂಚನೆ  title=

ಬೆಳಗಾವಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿಗಳು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಳೆದ 3-4 ವರ್ಷಗಳಿಂದ ಮ್ಯೂಸಿಯಂ ಕಾಮಗಾರಿ ಚಾಲನೆಯಲಿದ್ದು, ಚಳಿಗಾಲ ಅಧಿವೇಶನ ಪ್ರಾರಂಭಕ್ಕೂ ಮುನ್ನ ಸಂಪೂರ್ಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮ್ಯೂಸಿಯಂ ಲೋಕಾರ್ಪಣೆಗೆ ಸಿದ್ಧಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಿಳಿಸಿದರು.

ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯದಲ್ಲಿ ಮಂಗಳವಾರ (ನ.26) ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ(ವೀರಭೂಮಿ) ಕಾಮಗಾರಿ  ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. 59 ಕೋಟಿ ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗೆಯಲ್ಲಿ ನಂದಗಡ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: ಆನೆ ಮರಿ ಬೇಟೆಗೆ ಹೊಂಚು ಹಾಕಿ ಅಮ್ಮನನ್ನು ಕಂಡು ಹೆದರಿ ಎಸ್ಕೇಪ್ ಆದ ಹುಲಿ ವಿಡಿಯೋ ವೈರಲ್..!

ನಂದಗಡ ಮ್ಯೂಸಿಯಂ ವಿವಿಧ ಕಾಮಗಾರಿಗಳ ಪ್ರಗತಿಯಲ್ಲಿದ್ದು, ಯಾವುದೇ ರೀತಿಯ ಕಾಮಗಾರಿಗಳು ಬಾಕಿ ಉಳಿಯಬಾರದು. ಮುಂದಿನ ಒಂದು ವಾರದೊಳಗೆ ಕಂಪೌಂಡ, ರಸ್ತೆ, ಕಲಾಕೃತಿಗಳು ಸೇರಿದಂತೆ ಅಗತ್ಯ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಸಿನಿಮಾ ಆ್ಯನಿಮೇಟರ್ ವಿದ್ಯುನ್ಮಾನ ತಂತ್ರಜ್ಞಾನ ಅಳವಡಿಸಲು ಕೆಲವು ಕಾಮಗಾರಿಗಳು ಬಾಕಿ ಇವೆ. ಅವುಗಳನ್ನು ಕೂಡಲೇ ಪ್ರಾರಂಭಿಸಬೇಕು. ಸರ್ಕಾರದಿಂದ ಗುತ್ತಿಗೆದಾರರ ಬಿಲ್ ಬಾಕಿ ಉಳಿಯದಂತೆ ನೋಡಿಕೊಳ್ಳಗುವುದು. ಗುತ್ತಿಗೆದಾರರು ಆತಂಕ ಪಡದೆ ಡಿಸೆಂಬರ್ 9 ರೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಸೂಚಿಸಿದರು.

ಗುತ್ತಿಗೆದಾರರ ಬಿಲ್ ಗಳನ್ನು ಸಕಾಲದಲ್ಲಿ ಪಾವತಿಸಬೇಕು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಐತಿಹಾಸಿಕ ಕುರುಹುಗಳ ಮರು ಚಿತ್ರಣದಲ್ಲಿ ವಸ್ತು ಸಂಗ್ರಹಾಲಯದಲ್ಲಿ ಯಾವುದೇ ವ್ಯತ್ಯಾಸ ಕಂಡು ಬರದಂತೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಹೇಳಿದರು.

ಈಗಾಗಲೇ 4 ವರ್ಷದಿಂದ ಮ್ಯೂಸಿಯಂನಲ್ಲಿ ಕಾಮಗಾರಿಗಳು ಚಾಲನೆಯಲ್ಲಿವೆ. ಒಟ್ಟು 261 ಕೋಟಿ ಸಂಗೊಳ್ಳಿ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿತ್ತು. ಸಂಗೊಳ್ಳಿಯಲ್ಲಿ 100 ಎಕರೆ ಭೂಮಿಯಲ್ಲಿ ಸೈನಿಕ ಶಾಲೆ, ಶೌರ್ಯ ಭೂಮಿ ಅಭಿವದ್ಧಿ ಪಡಿಸಿ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದ್ದಾರೆ.

ಮ್ಯೂಸಿಯಂನ ಸಮಗ್ರ ಅಭಿವೃದ್ಧಿಗೆ ಸೂಚನೆ:

ಸಂಗೊಳ್ಳಿ ರಾಯಣ್ಣ ಅವರ ಪೂರ್ಣ ಪ್ರಮಾಣದ ಪರಿಚಯಕ್ಕೆ ಮ್ಯೂಸಿಯಂ ನಿರ್ಮಾಣ ಮಾಡಲಾಗುತ್ತಿದೆ. ಸಂಗೊಳ್ಳಿ ರಾಯಣ್ಣ ಅಧ್ಯಯನ ಕೇಂದ್ರ, ಗ್ರಂಥಾಲಯ ಸೇರಿದಂತೆ ಸಾಕಷ್ಟು ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಡಿಸೆಂಬರ್ ಅಂತ್ಯದೊಳಗೆ ಮ್ಯೂಸಿಯಂ ಉದ್ಘಾಟನೆ ಮಾಡಲಾಗುವುದು ಎಂದು ಸಚಿವ ತಂಗಡಗಿ ಹೇಳಿದರು.

ಇಂದಿನ ಯುವ ಪೀಳಿಗೆಗೆ ಇತಿಹಾಸ ಪರಿಚಯಿಸುವ ಪ್ರಯತ್ನ ಸರ್ಕಾರ ಮಾಡುತ್ತಿದೆ. ಮ್ಯೂಸಿಯಂ ಜೊತೆಗೆ ನಂದಗಡದ ಕೆರೆಯಲ್ಲಿ ಮೂರ್ತಿ ಸ್ಥಾಪನೆ ಮಾಡಲಾಗುವುದು. ನಂದಗಡದ ರಾಯಣ್ಣ ಸಮಾಧಿಯಿಂದ ಮ್ಯೂಸಿಯಂವರೆಗೂ ಸಿಸಿ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಸಾಧ್ಯದಲೆಲ್ಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗುವುದು.

ಶಾಲಾ ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ಇತಿಹಾಸ ಪರಿಚಯ ನಿಟ್ಟಿನಲ್ಲಿ ಸಾಕಷ್ಟು ಅಭಿವೃದ್ಧಿ ಪಡಿಸಲಾಗುವುದು. ಜನರಿಗೆ ಅನುಕೂಲವಾಗುವ ಪ್ರವೇಶ ದರ ನಿಗದಿ ಪಡಿಸಿ ಜಿಲ್ಲೆಯಲ್ಲಿ ಅತ್ಯುತ್ತಮ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದೆ. ಉನ್ನತ ಮಾದರಿ ಮ್ಯೂಸಿಯಂ ನಿರ್ಮಾಣಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ಇದನ್ನೂ ಓದಿ: ಪುಟ್ಟ ಹಳ್ಳಿಯಾದರೂ ಇರುವವರೆಲ್ಲಾ ಕುಬೇರ ವಂಶಸ್ಥರರೇ !17 ಬ್ಯಾಂಕುಗಳಲ್ಲಿ ಇಟ್ಟಿದ್ದಾರೆ 7000 ಕೋಟಿ FD! ಇದು ನಮ್ಮದೇ ದೇಶದ ಹಳ್ಳಿ 

ಸಭೆಯ ಬಳಿಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳ ಮತ್ತು ರಾಯಣ್ಣ ಕೆರೆಯಲ್ಲಿ ಪ್ರತಿಮೆ ಸ್ಥಾಪನೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
 
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ, ಖಾನಾಪೂರ ಶಾಸಕ ವಿಠ್ಠಲ ಹಲಗೇಕರ, ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶ್ ಕುಮಾರ ಮೀನಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಕೆ. ಎಚ್ ಚನ್ನೂರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹರ್ಷ, ಖಾನಾಪೂರ ತಹಶೀಲ್ದಾರ್ ಪ್ರಕಾಶ ಗಾಯಕವಾಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮ್ಯೂಸಿಯಂ ನಿರ್ಮಾಣ: ಕಾಮಗಾರಿಗಳ ಪರಿಶೀಲನೆ:

ಇದಕ್ಕೂ ಮುಂಚೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ: ಎಚ್.ಎಂ.ರೇವಣ್ಣ ಅವರು ನಂದಗಡ ಮ್ಯೂಸಿಯಂ ವೀರಭೂಮಿ, ವಸ್ತು ಸಂಗ್ರಹಾಲಯ, ಮ್ಯೂಸಿಯಂ ಮುಖ್ಯ ದ್ವಾರ, ಸಂಗೊಳ್ಳಿ ರಾಯಣ್ಣ ಸ್ಮರಣೀಯ ಪ್ರತಿಮೆಗಳು, ಸಾರ್ವಜನಿಕ ಪ್ರವೇಶದ ಟಿಕೆಟ್ ಕೌಂಟರ್, ಅಲ್ಪೋಪಹಾರ ಗೃಹ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ, ಕಂಪೌಂಡ, ದೀಪಾಲಂಕಾರ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.

ಇದನ್ನೂ ಓದಿ: 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News