ಗ್ಯಾರಂಟಿ ಯೋಜನೆ ಟೀಕೆ ಮಾಡಿದವರಿಂದಲೇ ಗ್ಯಾರಂಟಿ ಹೆಸರಲ್ಲಿ ಪ್ರಚಾರ: ಸಂಸದ ಡಿ.ಕೆ.ಸುರೇಶ್

ವಿಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ರಾಜ್ಯ ಪ್ರವಾಸ ಮಾಡಿ ಜನರ ಸಮಸ್ಯೆ ಅರಿತು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ 5 ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದರು. ಸರ್ಕಾರ ಬಂದ ನಂತರ ಕೊಟ್ಟ ಮಾತಿನಂತೆ ಈ ಯೋಜನೆ ಜಾರಿ ಮಾಡಲಾಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

Written by - Puttaraj K Alur | Last Updated : Jan 11, 2024, 03:43 PM IST
  • ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ ಗ್ಯಾರಂಟಿ ಹೆಸರಲ್ಲಿ ಪ್ರಚಾರ ಪಡೆಯುತ್ತಿದ್ದಾರೆ
  • ಸರ್ಕಾರ ಈ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 58 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದೆ
  • ಸರ್ಕಾರ ಜನರ ಮನೆ ಬಾಗಿಲಿಗೆ ಬಂದು ಸ್ಥಳದಲ್ಲೇ ಜನರ ಸಮಸ್ಯೆಗೆ ಪರಿಹಾರ ನೀಡಲು ಕಾರ್ಯಕ್ರಮ
ಗ್ಯಾರಂಟಿ ಯೋಜನೆ ಟೀಕೆ ಮಾಡಿದವರಿಂದಲೇ ಗ್ಯಾರಂಟಿ ಹೆಸರಲ್ಲಿ ಪ್ರಚಾರ: ಸಂಸದ ಡಿ.ಕೆ.ಸುರೇಶ್ title=
ಬಿಜೆಪಿ ವಿರುದ್ಧ ಡಿಕೆ ಸುರೇಶ್ ವಾಗ್ದಾಳಿ

ಬೆಂಗಳೂರು: ರಾಜ್ಯದ ಜನರ ಸಮಸ್ಯೆಗಳಿಗೆ ಪರಿಹಾರ ಕೊಟ್ಟು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡಿದವರೇ ಇಂದು ಗ್ಯಾರಂಟಿ ಹೆಸರಲ್ಲಿ ಪ್ರಚಾರ ಪಡೆಯುತ್ತಿದ್ದಾರೆ" ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ  ಜರಗನಹಳ್ಳಿ ಸರ್ಕಾರಿ ಶಾಲಾ ಮೈದಾನದಲ್ಲಿ ಗುರುವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

"ವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಪ್ರವಾಸ ಮಾಡಿ ಜನರ ಸಮಸ್ಯೆಗಳನ್ನು ಅರಿತು ಅವರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಸರ್ಕಾರ ಬಂದ ನಂತರ ಕೊಟ್ಟ ಮಾತಿನಂತೆ ಈ ಯೋಜನೆಗಳನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಈ 5 ಯೋಜನೆಗಳು ಯಾವುದೇ ಜಾತಿ, ಧರ್ಮಕ್ಕೆ ಸೇರಿಲ್ಲ. ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲಾ ವರ್ಗದ ಜನರಿಗೆ ಶಕ್ತಿ ತುಂಬುವ ಉದ್ದೇಶದೊಂದಿಗೆ ಈ ಯೋಜನೆಗಳನ್ನು ಜಾರಿ ತರಲಾಗಿದೆ. ಸರ್ಕಾರ ಈ ಗ್ಯಾರಂಟಿ ಯೋಜನೆಗಳಿಗೆ ಪ್ರತಿ ವರ್ಷ 58 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದೆ. ಅಪಾರ್ಟ್ಮೆಂಟ್ ನಿವಾಸಿಗಳು ಗೃಹಜ್ಯೋತಿ ಯೋಜನೆಗೆ ಅರ್ಜಿ ಹಾಕಿಕೊಂಡಿದ್ದಾರೆ. ಅಂದರೆ ಅಪಾರ್ಟ್ಮೆಂಟ್ ನಿವಾಸಿಗಳು ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ ಎಂಬುದು ಅರ್ಥವಾಗುತ್ತದೆ ಅಂತಾ ಹೇಳಿದರು.

ಇದನ್ನೂ ಓದಿ: ಕಾಮನ್ ಮ್ಯಾನ್‌ಗೆ ಮಾತ್ರವಲ್ಲ ಸಿಎಂಗೂ ತಟ್ಟಿದ ಟ್ರಾಫಿಕ್ ಬಿಸಿ

ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಸರ್ಕಾರ ಇಂತಹ ಕಾರ್ಯಕ್ರಮಗಳ ಮೂಲಕ ಜನರ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಬೆಂಗಳೂರಿಗೆ ಹೊಸ ಕಾಯಕಲ್ಪ ನೀಡಲು, ಸರ್ಕಾರ ಜನರ ಮನೆ ಬಾಗಿಲಿಗೆ ಬಂದು ಸ್ಥಳದಲ್ಲೇ ಜನರ ಸಮಸ್ಯೆಗೆ ಪರಿಹಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಡಿ.ಕೆ.ಸುರೇಶ್ ತಿಳಿಸಿದ್ದಾರೆ.

ನಾನು ಈ ಭಾಗದ ಜನಪ್ರತಿನಿಧಿಯಾಗಿ ನಿಮ್ಮ ಅಹವಾಲುಗಳು ಹಾಗು ಜ್ವಲಂತ ಸಮಸ್ಯೆಗಳನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಬಿಬಿಎಂಪಿ ಅಧಿಕಾರಿಗಳ ಗಮನಕ್ಕೆ ತರುತ್ತೇನೆ. ಸರ್ಕಾರದ ಉದ್ದೇಶ ಸಫಲವಾಗಬೇಕಾದರೆ ಅಧಿಕಾರಿಗಳು ಶ್ರಮವಹಿಸಿ ಸಾರ್ವಜನಿಕರ ಅಹವಾಲುಗಳಿಗೆ ಪರಿಹಾರ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ಹೇಳಿದರು.

ಬೆಂಗಳೂರು ಸಮಸ್ಯೆಗಳ ಸಾಗರವನ್ನೇ ಇಟ್ಟುಕೊಂಡಿದೆ. ಟ್ರಾಫಿಕ್, ರಸ್ತೆ ಗುಂಡಿ, 110 ಹಳ್ಳಿಗಳ ಮೂಲಸೌಕರ್ಯ, ಕೆರೆಗಳ ಪುನಶ್ಚೇತನ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಈ ಅಹವಾಲು ಸ್ವೀಕಾರ ನಂತರ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಕಾನೂನಾತ್ಮಕ ಪರಿಹಾರ ನೀಡಬೇಕು.  ಆಗ ಜನರ ಆಶೀರ್ವಾದದಿಂದ ಬಂದಿರುವ ಸರ್ಕಾರ ಯಶಸ್ಸು ಕಾಣಲಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಕನಕಪುರ ರಸ್ತೆಯ ಬಳಿ ಅಪಾರ್ಟ್ಮೆಂಟ್ ಗಳು ಹೆಚ್ಚಾಗಿದ್ದು, ಸಂಚಾರ ದಟ್ಟಣೆ ಹೆಚ್ಚಾಗಿದೆ. ಬೆಳಗ್ಗೆ ಹಾಗೂ ಸಂಜೆ ಒಂದೇ ತಾಸಿನಲ್ಲಿ 2 ಸಾವಿರ ಕಾರುಗಳು 1 ಗಂಟೆ ಅವಧಿಯಲ್ಲಿ ಈ ಅಪಾರ್ಟ್ಮೆಂಟ್‍ಗಳಿಂದ ಹೊರಗೆ ಹಾಗೂ ಒಳಗೆ ಸಂಚಾರ ಮಾಡುತ್ತವೆ. ಕುಡಿಯುವ ನೀರಿನ ಸಮಸ್ಯೆ ಇದೆ. ದಕ್ಷಿಣ ವಿಧಾನಸಭಾ ಕ್ಷೇತ್ರದ ಜನರಿಗೆ ಸರಾಸರಿ 8 ದಿನಕ್ಕೊಮ್ಮೆ ನೀರು ಬಿಡುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಎಲೆಕ್ಟ್ರಾನಿಕ್ ಸಿಟಿ ಹಾಗೂ ಬೇಗೂರು ಭಾಗದಲ್ಲಿನ ಸಂಚಾರ ದಟ್ಟಣೆಯ ಪರಿಹಾರ ನೀಡಬೇಕಿದೆ ಎಂದು ಅವರು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News