ಚಿತ್ರದುರ್ಗ: ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಕಾರು ಅಪಘಾತದಲ್ಲಿ ಸಾವನ್ನಪಿದ್ದಾರೆ. ಬೆಳಗಲ್ಲು ವೀರಣ್ಣ ತಮ್ಮ ಮಗನ ಜೊತೆ ಬಳ್ಳಾರಿಯಿಂದ ಚಿಕ್ಕಮಗಳೂರಿಗೆ ಕಾರಿನಲ್ಲಿ ತೆರಳುವ ವೇಳೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಅಪಘಾತ ನಡೆದಿದೆ. ದುರಾದೃಷ್ಟವಶಾತ್ ಹಿರೇಹಳ್ಳಿ ಪಟ್ಟಣದ ಬಳಿ ಏಕಾಏಕಿ ಕಾರಿನ ವೀಲ್ ಎಕ್ಸಲ್ ಕಳಚಿ ಬಿಟ್ಟಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ನಿಯಂತ್ರಣ ಕಳೆದುಕೊಂಡು ಭೀಕರ ಅಪಘಾತ ಸಂಭವಿಸಿದೆ.
ಬಳ್ಳಾರಿ ಮೂಲದ ಬೆಳಗಲ್ಲು ವೀರಣ್ಣ ನಾಡೋಜ ಪ್ರಶಸ್ತಿ ಪುರಸ್ಕೃತರಾಗಿದ್ದರು. ನಾಡೋಜ ಬೆಳಗಲ್ಲು ವೀರಣ್ಣ ಅವರು ಅಮೆರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ತೊಗಲುಗೊಂಬೆ ಪ್ರದರ್ಶನ ನೀಡಿ ಭಾರತೀಯ ಹಿರಿಮೆಗೆ ಕಾರಣರಾಗಿದ್ದರು. ಮೂಲತಃ ತೊಗಲು ಗೊಂಬೆಯಾಟದ ಕಲಾವಿದರಾದ ಇವರು ತೊಗಲು ಗೊಂಬೆಯಾಟದ ಗತ್ತುನ್ನು ದೇಶ ವಿದೇಶಗಳಲ್ಲೂ ಪರಿಚಯಿಸಿದ್ದರು.
ಇದನ್ನೂ ಓದಿ: FIR Against Minister :ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಸಚಿವರ ವಿರುದ್ದ ಎಫ್ಐಆರ್
ಶ್ರೀರಾಮಾಂಜನೇಯ ತೊಗಲು ಗೊಂಬೆ ಕಲಾ ಮೇಳವನ್ನುಕಟ್ಟಿ ಊರೂರು, ರಾಜ್ಯ, ದೇಶ, ವಿದೇಶ ಸುತ್ತಿ ತಮ್ಮ ಪ್ರತಿಭೆಯನ್ನು ತೋರಿಸಿದ್ದರು. ವೀರಣ್ಣನವರು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಕುಟುಂಬಸ್ಥರನ್ನು ಬಿಟ್ಟು ಅಗಲಿದ್ದಾರೆ. ಇವರ ಸಾವಿಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಬೆಳಗಲ್ಲು ವೀರಣ್ಣನವರ ಪುತ್ರ ಹನುಮಂತಪ್ಪಕೂಡ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ 21 ವರ್ಷದ ತ್ರಿವೇಣಿ ಬಳ್ಳಾರಿ ಮೇಯರ್ ಆಗಿ ಆಯ್ಕೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.