ಬೆಂಗಳೂರು: ಕಟ್ಟಡ ನಕ್ಷೆ ಮಂಜೂರಾತಿ ವಿಚಾರದಲ್ಲಿ ಬೆಂಗಳೂರು ನಗರದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ. ಜನರೇ ತಮ್ಮ ಕಟ್ಟಡ ನಕ್ಷೆಯನ್ನು ಅನುಮೋದಿತ ಕಟ್ಟಡ ವಿನ್ಯಾಸಕಾರರು ಅಥವಾ ಎಂಜಿನಿಯರ್ ಗಳ ಬಳಿ ಅನುಮೋದಿಸಿಕೊಂಡು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಮಂಜೂರಾತಿ ಪಡೆದುಕೊಳ್ಳುವ ಯೋಜನೆ ಇದಾಗಿದೆ. 50/80 ವಿಸ್ತೀರ್ಣದ ವರೆಗಿನ ನಿವೇಶನಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಬಿಡಿಎ, ಗೃಹನಿರ್ಮಾಣ ಸಂಘದವರು 50/80 ವಿಸ್ತೀರ್ಣದ ವರೆಗಿನ ನಿವೇಶನಗಳನ್ನೇ ಹೆಚ್ಚಾಗಿ ಅಭಿವೃದ್ಧಿಪಡಿಸಿರುತ್ತಾರೆ. ಇಷ್ಟು ವಿಸ್ತೀರ್ಣದ ನಿವೇಶನದಲ್ಲಿ ಮನೆ ನಿರ್ಮಾಣ ಹಾಗೂ ನವೀಕರಣಕ್ಕೆ ಜನರು ಯಾವುದೇ ತೊಂದರೆಯಿಲ್ಲದೇ ಮುಂದಾಗಬಹುದು. ಅನುಮೋದಿತ ಲೆಕ್ಕ ಪರಿಶೋದಕರಂತೆ ಅನುಮೋದಿತ ಎಂಜಿನಿಯರ್ ಗಳು ಹಾಗೂ ಕಟ್ಟಡ ವಿನ್ಯಾಸಕಾರರ ಮೂಲಕ ತಾತ್ಕಾಲಿಕ ಕಟ್ಟಡ ನಕ್ಷೆಗೆ ಅನುಮತಿ ನೀಡಲಾಗುವುದು. ನಂತರ ಪಾಲಿಕೆಯ ಎಂಜಿನಿಯರ್ ಗಳು ಪರಿಶೀಲನೆ ನಡೆಸುತ್ತಾರೆ ಎಂದರು.
ಇದನ್ನೂ ಓದಿ: ಜನರ ಆಶೀರ್ವಾದದಿಂದ ರಾಜ್ಯದಲ್ಲಿ ಬಿಜೆಪಿ ಎಂದಿಗೂ ಅಧಿಕಾರಕ್ಕೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ
ಮೊದಲು ಬಿಬಿಎಂಪಿಯ 2 ವಲಯಗಳಲ್ಲಿ ಪ್ರಾಯೋಗಿಕವಾಗಿ ಈ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಯಶಸ್ವಿಯಾಗಿ ಜಾರಿಯಾದ ಈ ಯೋಜನೆಯ ಸಾಧಕ ಭಾದಕಗಳನ್ನು ಸರಿಪಡಿಸಿ ಪ್ರಸ್ತುತ ಬಿಬಿಎಂಪಿಯ ಎಲ್ಲಾ ವಲಯಗಳಿಗೆ ವಿಸ್ತರಿಸಲಾಗುತ್ತಿದೆ. ಇದರಿಂದ ಜನರು ಪಾಲಿಕೆಗೆ ಅಲೆಯುವುದು ತಪ್ಪುತ್ತದೆ ಎಂದು ಹೇಳಿದರು.
ಬಿಬಿಎಂಪಿ ವಲಯದಲ್ಲಿ 2,795 ರಸ್ತೆಗುಂಡಿಗಳನ್ನು ಗುರುತಿಸಲಾಗಿದೆ ಎಲ್ಲಾ ರಸ್ತೆ ಗುಂಡಿಗಳನ್ನು ಮುಂದಿನ 15 ದಿನಗಳಲ್ಲಿ ಸಂಪೂರ್ಣವಾಗಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರೂ. 660 ಕೋಟಿ ವೆಚ್ಚದಲ್ಲಿ ಪ್ರಮುಖ ರಸ್ತೆಗಳನ್ನು ದುರಸ್ತಿ ಕೆಲಸ ಕೈಗೆತ್ತಿಕೊಳ್ಳಲಾಗುವುದು ಎಂದರು.
ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದಾಗ ಮುಖ್ಯರಸ್ತೆಗಳನ್ನು ಬಿಟ್ಟು ಒಳ ರಸ್ತೆಗಳಲ್ಲಿ ಓಡಾಡಿದೆ. ಅವರಿಗಿಂತ ನಾವೇ ಎಷ್ಟೋ ಮುಂದಿದ್ದೇವೆ. ಅವರನ್ನು ಟೀಕೆ ಮಾಡುತ್ತಿಲ್ಲ, ಅಲ್ಲಿನ ಪರಿಸ್ಥಿತಿ ಬೇರೆ ಇರಬಹುದು ಎಂದರು.
“ಳೆ ಬಂದ ತಕ್ಷಣ ನಗರದಾದ್ಯಂತ ಎಲ್ಲೆಲ್ಲಿ ನೀರು ನಿಲ್ಲುತ್ತಿತ್ತು, ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರಿಗೆ ತೊಂದರೆ ಉಂಟಾಗುತ್ತಿತ್ತು ಅವುಗಳನ್ನು ಭಾಗಶಃ ಸರಿ ಪಡಿಸಲಾಗಿದೆ. ಇದಕ್ಕಾಗಿ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.
ರಾಜಕಾಲುವೆಯ 50 ಮೀ. ಸುತ್ತಳತೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಮಾಡುವಂತಿಲ್ಲ ಎಂದು ಎನ್ ಜಿಟಿಯ ನಿಯಮಗಳು ಸೇರಿದಂತೆ ಒಂದಷ್ಟು ನಿಯಮಗಳಿಗೆ. ಪ್ರಸ್ತುತ 300 ಕಿ.ಮೀ ಅನ್ನು ಗುರುತಿಸಿ 30 ಅಡಿ ರಸ್ತೆ ನಿರ್ಮಾಣ ಮಾಡಲಾಗುವುದು. ಭೂಮಿ ಬಿಟ್ಟುಕೊಡುವ ಖಾಸಗಿ ಜಮೀನುಗಳ ಮಾಲೀಕರಿಗೆ ಪರಿಹಾರವಾಗಿ ಟಿಡಿಆರ್ ನೀಡಲಾಗುವುದು. ಅದನ್ನು ಅವರು ಮಾರಾಟ ಮಾಡಿಕೊಳ್ಳಬಹುದು ಎಂದರು.
ಇದನ್ನೂ ಓದಿ: ಬೀಡಿಗಾಗಿ ಅನ್ನ ಆಹಾರ ಬಿಟ್ಟು ಪ್ರತಿಭಟನೆ ! ಬೇಡಿಕೆ ಈಡೇರಿಕೆಗೆ ಹೋರಾಟದ ಹಾದಿ ಹಿಡಿದ 778 ಕೈದಿಗಳು
ಹೆಬ್ಬಾಳ, ನಾಗಾವರ, ಬೆಳ್ಳಂದೂರು ಅಕ್ಕಪಕ್ಕ, ಬೆಂಗಳೂರು ದಕ್ಷಿಣ ಭಾಗದಲ್ಲಿ ಒಂದಷ್ಟು ಕಡೆ ಭೂಮಿ ಗುರುತಿಸಲಾಗಿದೆ. ಮೊದಲ ಹಂತದಲ್ಲಿ 100 ಕಿ.ಮೀ ದೂರ ಕೆಲಸ ಮಾಡಲಾಗುವುದು. ಇದಕ್ಕಾಗಿ ರೂ. 200 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ. ಈ ವಿಚಾರವನ್ನು ಕ್ಯಾಬಿನೆಟ್, ಸಚಿವರ ಸಭೆ ಹಾಗೂ ವಿರೋಧ ಪಕ್ಷಗಳ ನಾಯಕರೊಟ್ಟಿಗೆ ನಡೆದ ಸಭೆಗಳಲ್ಲೂ ಪ್ರಾಸ್ತಪಿಸಲಾಗಿದೆ. ಈ ರಸ್ತೆಗಳಲ್ಲಿ ಬಸ್ ಓಡಾಟಕ್ಕೆ ಅವಕಾಶವಿಲ್ಲ. ಬದಲಾಗಿ ಶಾಲಾ, ನಾಗರಿಕರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡು 100 ವರ್ಷಗಳು ಸಂದಿವೆ. ಇದಕ್ಕಾಗಿ ನಗರದಾದ್ಯಂತ ಸ್ವಚ್ಚತಾ ಅಭಿಯಾನ ಹಮ್ಮಿಕೊಳ್ಳಲಾಗುವುದು. ಇದೇ ವೇಳೆ ಒಂದು ಸಾವಿರ ಶಾಲಾ ಮಕ್ಕಳು ಆನ್ ಲೈನ್ ಮೂಲಕ ಪತಿಜ್ಞಾವಿಧಿ ತೆಗೆದುಕೊಳ್ಳಲಿದ್ದಾರೆ ಎಂದರು.
ರಸ್ತೆ ಬದಿ ಹಾಗೂ ರಸ್ತೆಗಳಲ್ಲಿ ಕಸ ಎಸೆಯುವುದರ ವಿರುದ್ಧ ಜಾಗೃತಿ ಮೂಡಿಲಾಗುವುದು. ಮಕ್ಕಳಿಂದ ಕಸ ಎಸೆಯುವವರಿಗೆ ತಿಳಿಹೇಳುವ ಕೆಲಸ ಮಾಡಲಾಗುವುದು. ಅಕ್ಟೋಬರ್ 2 ರಂದು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
ಇದನ್ನೂ ಓದಿ:
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.