ಬೆಂಗಳೂರು: ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಕಲಘಟಗಿ ಕುಂದಗೋಳ ಹಾಗೂ ನವಲಗುಂದ, ಹುಬ್ಬಳ್ಳಿ ತಾಲೂಕುಗಳಲ್ಲಿ ಅರೆ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬೆಳಗಾವಿಯಲ್ಲಿ ಪುಂಡಾಟಿಕೆ ಖಂಡನೀಯ: ಪುಂಡರನ್ನು ಸದೆಬಡಿಯುತ್ತೇವೆ ಎಂದ ಸಿಎಂ ಬೊಮ್ಮಾಯಿ
ಅರೆ ಕಾನೂನು ಸ್ವಯಂ ಸೇವಕ ಹುದ್ದೆಗೆ ಇರುವ ಅರ್ಹತೆಗಳೇನು?
-ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವವರು
-ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು
-ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು, ಪ್ರಾಧ್ಯಾಪಕರು
-ಕಾನೂನು ಮಹಾವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು
-ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸರ್ಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು
ನಿವೃತ್ತ ಸರ್ಕಾರಿ ನೌಕರರು, ವಿವಿಧ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಸೇವಾ ಮನೋಭಾವ ಹೊಂದಿರುವ ಪುರುಷ ಮತ್ತು ಮಹಿಳೆಯರು, ಮಂಗಳಮುಖಿಯರು, ಸನ್ನಡತೆ ಹೊಂದಿದ ಕಾರಾಗೃಹ ಬಂದಿಗಳು ಮತ್ತು ಸ್ವ-ಸಹಾಯ ಸಂಘಗಳ ಸದಸ್ಯರು ಅರ್ಜಿ (Government Job) ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿರುವುದು ಕರ್ನಾಟಕದ ಮೇಲಿನ ದಾಳಿಗೆ ಸಮ-ಎಚ್ ಡಿ.ಕುಮಾರಸ್ವಾಮಿ
ಇದೇ ಮಾರ್ಚ್ 15 ರೊಳಗಾಗಿ ಅಭ್ಯರ್ಥಿಗಳು ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕ ಕಾನೂನು ಸೇವಾ ಸಮಿತಿಗಳಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು ಸಲ್ಲಿಸಬೇಕಾಗಿ ವಿನಂತಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.