ಬೆಂಗಳೂರು: RSS ಕಂಡರೆ ನನಗೆ ಭಯ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿರುವುದು ನೂರಕ್ಕೆ ನೂರರಷ್ಟು ಸತ್ಯ. ನನಗೆ ಮಾತ್ರವಲ್ಲ ಜಾತ್ಯತೀತತೆ, ಸೌಹಾರ್ದತೆ ಮತ್ತು ಅಹಿಂಸೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಭಾರತೀಯನಿಗೂ RSS ಕಂಡರೆ ಭಯ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
#AryanRSS ಹ್ಯಾಶ್ ಟ್ಯಾಗ್ ಬಳಸಿ ಗುರುವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಭಯ ಹುಟ್ಟಿಸುವವರನ್ನು ಸಾಮಾನ್ಯ ಭಾಷೆಯಲ್ಲಿ ಭಯೋತ್ಪಾದಕರು ಎನ್ನಲಾಗುತ್ತಿದೆ. ಡಿ.ವಿ.ಸದಾನಂದಗೌಡ ಅವರು ಯಾಕೆ ತನ್ನ ಮಾತೃ ಸಂಸ್ಥೆಯ ಮೇಲೆ ಈ ರೀತಿಯ ಆರೋಪ ಮಾಡುತ್ತಿದ್ದಾರೆ ಎನ್ನುವುದನ್ನು ಅವರೇ ಹೇಳಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಗಣಿಗಾರಿಕೆ ಆರೋಪ: ಪತಿ ಮಾಡಿದ ತಪ್ಪಿಗೆ ಪತ್ನಿ ವಿರುದ್ಧ ಪ್ರಕರಣ ದಾಖಲು!
‘RSS ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ RSS ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ RSS ಬಗ್ಗೆ ಭಯ ಇದೆ’ ಎಂದು ಹೇಳಿದ್ದಾರೆ.
ಆರ್.ಎಸ್.ಎಸ್ ಬಗೆಗಿನ ಭಯದ ಕಾರಣದಿಂದಾಗಿಯೇ ಮಹಾತ್ಮ ಗಾಂಧೀಜಿಯವರ ಹತ್ಯೆಯ ನಂತರ @RSSorg ಮೇಲೆ ದೇಶದ ಮೊದಲ ಗೃಹಸಚಿವ ವಲ್ಲಭಭಾಯಿ ಪಟೇಲ್ ಅವರು ನಿಷೇಧ ಹೇರಿದ್ದು ಎನ್ನುವುದು ನೆನಪಿರಲಿ. 3/8#AryanRSS
— Siddaramaiah (@siddaramaiah) June 2, 2022
‘ಮೀಸಲಾತಿ, ಭೂಸುಧಾರಣೆಯಂತಹ ಬಹುಸಂಖ್ಯೆಯ ಹಿಂದೂಗಳೇ ಫಲಾನುಭವಿಗಳಾಗಿರುವ ಸಾಮಾಜಿಕ ನ್ಯಾಯದ ಕಾನೂನುಗಳನ್ನೇ ವಿರೋಧಿಸುವ RSS ಬಗ್ಗೆ ಭಯವಲ್ಲದೆ ಪ್ರೀತಿ ಇರಲು ಸಾಧ್ಯವೇ? ತಮ್ಮ ಮಕ್ಕಳಿಗೆ ದೇಶ-ವಿದೇಶದಲ್ಲಿ ಉನ್ನತ ಶಿಕ್ಷಣ ಕೊಡಿಸಿ, ದಲಿತ, ಹಿಂದುಳಿದ ಸಮುದಾಯದ ಬಡವರ ಮಕ್ಕಳನ್ನು ಹಿಂಸಾಚಾರಕ್ಕೆ ಇಳಿಸಿ ಜೈಲಿಗೆ ಅಟ್ಟುವ RSS ಬಗ್ಗೆ ಭಯ ಸಹಜ ಅಲ್ಲವೇ ಡಿ.ವಿ.ಸದಾನಂದಗೌಡ ಅವರೇ?’ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಸಚಿವ ಬಿ.ಸಿ.ನಾಗೇಶ್ ಮನೆಮೇಲೆ ದಾಳಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ
ಉನ್ನತ ಪದಾಧಿಕಾರದಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳಾದ ದಲಿತರು ಮತ್ತು ಹಿಂದುಳಿದ ಜಾತಿಗಳನ್ನು ದೂರ ಇಟ್ಟಿರುವ ಕಾರಣಕ್ಕಾಗಿಯೇ ಈ ಸಮುದಾಯಗಳಂತೆ ನನಗೂ @RSSorg ಬಗ್ಗೆ ಭಯ ಇದೆ. 4/8#AryanRSS
— Siddaramaiah (@siddaramaiah) June 2, 2022
ಆರ್.ಎಸ್.ಎಸ್ ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ
ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ? 8/8#AryanRSS— Siddaramaiah (@siddaramaiah) June 2, 2022
‘ಯಾವುದೇ ವ್ಯಕ್ತಿ-ಸಿದ್ದಾಂತ- ಸಂಸ್ಥೆ ಇತರರಲ್ಲಿ ಗೌರವ ಹುಟ್ಟಿಸಬೇಕೇ ಹೊರತು ಭಯ ಹುಟ್ಟಿಸುವುದಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಬೇಕಾದವರು ಭಯವನ್ನು ಉತ್ಪಾದಿಸುವವರೇ ಹೊರತು ಭಯ ಪಡುವವರಲ್ಲ. RSS ಉನ್ನತ ಪದಾಧಿಕಾರ ಯಾಕೆ ಒಂದು ಜಾತಿಗೆ ಸೀಮಿತವಾಗಿದೆ? ಯಾಕೆ ಅಲ್ಲಿ ಹಿಂದುಗಳೇ ಆಗಿರುವ ದಲಿತ ಮತ್ತು ಹಿಂದುಳಿದ ಜಾತಿಗಳಿಲ್ಲ? ಎನ್ನುವ ನನ್ನ ಸರಳ ಪ್ರಶ್ನೆಗೆ ಯಾಕೆ, ಯಾರೂ ಉತ್ತರಿಸುತ್ತಿಲ್ಲ?’ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.