ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಂತ ಶೋಷಿತ ಸಮುದಾಯಗಳು!

ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಳಂಬ ಹಿನ್ನೆಲೆ ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿರುವ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಈಗ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದೆ.

Written by - Zee Kannada News Desk | Last Updated : May 15, 2023, 04:46 PM IST
  • ಇಡೀ ದೇಶವು ಕುತೂಹಲದಿಂದ ಕರ್ನಾಟಕವನ್ನು ಗಮನಿಸುತ್ತಿತ್ತು,
  • ಸರ್ವ ಜನಾಂಗದ ಶಾಂತಿಯ ತೋಟ ಎಂದು ಕುವೆಂಪುರವರು ಹೇಳಿದ್ದಾರೆ.
  • ಹಾಗಾಗಿ ಅಂತಹ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚಬಾರದು ಎಂದು ಇವತ್ತು ಬದಲಾವಣೆ ಮಾಡಿದ್ದಾರೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ನಿಂತ ಶೋಷಿತ ಸಮುದಾಯಗಳು! title=
file photo

ಬೆಂಗಳೂರು: ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ವಿಳಂಬ ಹಿನ್ನೆಲೆ ನಗರದ ಖಾಸಗಿ ಹೋಟೆಲ್ ವೊಂದರಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿರುವ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಈಗ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದೆ.

ಇದನ್ನೂ ಓದಿ: Puttur Assembly Constituency : ಬಿಜೆಪಿ ನಾಯಕರ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಪೋಸ್ಟರ್‌ ವೈರಲ್‌ !

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆದಿರುವ ಬೆನ್ನಲ್ಲೇ ಈಗ ಸಿದ್ದರಾಮಯ್ಯನವರ ಬೆಂಬಲಕ್ಕೆ ಶೋಷಿತ ಸಮುದಾಯಗಳು ಧಾವಿಸಿವೆ. ಇನ್ನೊಂದೆಡೆಗೆ ಒಕ್ಕಲಿಗ ಸಮುದಾಯ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಪಟ್ಟು ಹಿಡಿರುವ ಬೆನ್ನಲ್ಲೇ ಈಗ ನಡೆ ಬಂದಿದೆ.

ನಗರದ ಪರಾಗ್ ಹೋಟೆಲ್ ನಡೆದ ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯನವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಒಕ್ಕೂಟದ ಸದಸ್ಯರು ಆಗ್ರಹಿಸಿದ್ದಾರೆ.ಈ ಕುರಿತಾಗಿ ಮಾತನಾಡಿದ ಒಕ್ಕೂಟದ ಸಂಚಾಲಕ ಮಾವಳ್ಳಿ ಶಿವಶಂಕರ್ ಬದಲಾವಣೆಗೆ ಮತಹಾಕಿದ್ದಕ್ಕೆ ಮತದಾರರಿಗೆ ಅಭಿನಂದಿಸುತ್ತೇನೆ. ಇಡೀ ದೇಶವು ಕುತೂಹಲದಿಂದ ಕರ್ನಾಟಕವನ್ನು ಗಮನಿಸುತ್ತಿತ್ತು, ಸರ್ವ ಜನಾಂಗದ ಶಾಂತಿಯ ತೋಟ ಎಂದು ಕುವೆಂಪುರವರು ಹೇಳಿದ್ದಾರೆ. ಹಾಗಾಗಿ ಅಂತಹ ಶಾಂತಿಯ ತೋಟಕ್ಕೆ ಬೆಂಕಿ ಹಚ್ಚಬಾರದು ಎಂದು ಇವತ್ತು ಬದಲಾವಣೆ ಮಾಡಿದ್ದಾರೆ.ನಾವು ಕೂಡ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಪ್ರಚಾರ ಮಾಡಿದ್ವಿ.ಈಗ ಸ್ಥಿರ ಸರ್ಕಾರ ರಚನೆ ಮಾಡಬೇಕಾಗಿದೆ.ಜಾತಿ ಸಂಘರ್ಷವನ್ನು ಎಳೆದು ತರದೇ ಸರ್ಕಾರವನ್ನು ರಚನೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Mangalore Assembly Constituency: ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ!

ಸಿದ್ದರಾಮಯ್ಯ ಅವರು ಐದು ವರ್ಷ ಸುಭದ್ರ ಆಡಳಿತ ಕೊಟ್ರು ,ಹಿಂದೂಳಿದವರ, ಅಲ್ಪಸಂಖ್ಯಾತರಿಗೆ ಅನುಕೂಲ ಆಗುವಂತಹ ಯೋಜನೆಗಳನ್ನ ಮಾಡಿದ್ದಾರೆ ಮತ್ತು ಅವರ ಆಡಳಿತದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ.ಹಾಗಾಗಿ ರಾಜ್ಯ ಸಿದ್ದರಾಮಯ್ಯ ಆಡಳಿತವನ್ನ ಮತ್ತೆ ಬಯಸುತ್ತಾ ಇದೆ.ಹೈಕಮಾಂಡ್ ಗಮನ ಹರಿಸಿ ಶೋಷಿತ‌ ಸಮುದಾಯಗಳ ಹಿತವನ್ನ ಕಾಪಾಡೋದಕ್ಕೆ ಸಿದ್ದರಾಮಯ್ಯ ಅವರು ಅರ್ಹರು ಅಂತಾ ಅರಿತು ಜವಾಬ್ದಾರಿ ನೀಡಲಿ ಎಂದು ಅವರು ಹೇಳಿದರು.

ಇನ್ನೂ ಮುಂದುವರೆದು " ಬೇರೆ ಸಮುದಾಯದವರು ಅರ್ಹರಲ್ಲ ಅಂತಾ ನಾನು ಹೇಳ್ತಾ ಇಲ್ಲಾ ಆದರೆ ಎಲ್ಲ ಸಮುದಾಯದವರ ಬೆಳಕಿಗೆ ಇವರು ಕಾರಣರಾಗ್ತಾರೆ ಎಂದರೆ ತಪ್ಪಾಗಲಿಕ್ಕಿಲ್ಲ, ಹಾಗಾಗಿ ಇದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗಮನಿಸಿ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡೋದಕ್ಕೆ ಒತ್ತಾಯ ಮಾಡುತ್ತಿದ್ದೇವೆ" ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News