"ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ"

ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ. ಪೂರಕವಾಗಿ ಪರಿಷ್ಕೃತ ಕೈಗಾರಿಕಾ ನೀತಿ, ವಿಶ್ವ ದರ್ಜೆಯ ಮೂಲಸೌಕರ್ಯ, ಡಿಜಿಟಲ್ ಸೇವಾ ವಿತರಣೆ, ನವೀನ ತಂತ್ರಜ್ಞಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

Written by - Manjunath N | Last Updated : Sep 1, 2023, 10:48 PM IST
  • ಬೆಂಗಳೂರು ಸಮೀಪ 2000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರಿಸರ್ಜ್ ಸಿಟಿ’ ಸ್ಥಾಪಿಸುವ ಉದ್ದೇಶವಿದೆ
  • ಇಲ್ಲಿ ವಿಶ್ವದರ್ಜೆಯ ವಿಶ್ವವಿದ್ಯಾಲಯ, ಆಸ್ಪತ್ರೆ, ಸಂಶೋಧನಾ ಕೇಂದ್ರಗಳಿರಲಿವೆ
  • ಈ ಯೋಜನೆ ಬೆಂಗಳೂರಿನ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಮತ್ತಷ್ಟು ಬೆಳಗಲಿದೆ
 "ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ" title=

ಬೆಂಗಳೂರು: ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ. ಪೂರಕವಾಗಿ ಪರಿಷ್ಕೃತ ಕೈಗಾರಿಕಾ ನೀತಿ, ವಿಶ್ವ ದರ್ಜೆಯ ಮೂಲಸೌಕರ್ಯ, ಡಿಜಿಟಲ್ ಸೇವಾ ವಿತರಣೆ, ನವೀನ ತಂತ್ರಜ್ಞಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ನೂತನ ಸರ್ಕಾರ ಮೊದಲ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸರ್ಕಾರದ  ಸಾಧನೆಗಳ ಕುರಿತಂತೆ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಸ್ಯಾಮ್‌ - ವಿಜಯ್‌ ಸಿನಿಮಾಗೆ ವಿಘ್ನ : ʼಖುಷಿʼ ಚಿತ್ರದ HD ವಿಡಿಯೋ ಲೀಕ್‌..! 

100 ದಿನಗಳ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 60,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದ ಆಗಿದ್ದು, 30,000 ಹೊಸ ಉದ್ಯೋಗಗಳು ಸೃಷ್ಟಿಯಾಗಲಿವೆ.20ಕ್ಕೂ ಹೆಚ್ಚು ಸಾಂಭಾವ್ಯ ಹೂಡಿಕೆದಾರರ ಜತೆ ಮಾತುಕತೆ ನಡೆಯುತ್ತಿದ್ದು, ಇದು ಸಫಲವಾದರೆ ರಾಜ್ಯಕ್ಕೆ 1,00,000 ಕೋಟಿ ರೂಪಾಯಿ ಬಂಡವಾಳ ಹರಿದು ಬರಲಿದೆ.

ಸಿಂಗಾಪುರ ಮತ್ತು ಸೌದಿ ಅರೇಬಿಯಾದಂತಹ ಜಾಗತಿಕ ಹೂಡಿಕೆ ಕೇಂದ್ರಗಳಿಗೆ ಪ್ರತಿಸ್ಪರ್ಧಿಯಾಗಿ ಕರ್ನಾಟಕದ ಹೂಡಿಕೆ ಉತ್ತೇಜನಾ ಸಂಸ್ಥೆ (ಐಪಿಎ)ಗೆ ಯೋಜನೆ ಸಿದ್ಧಪಡಿಸುತ್ತಿದ್ದೇವೆ.ಹೊಸ ಕೈಗಾರಿಕಾ ನೀತಿ ರಚಿಸಲು ನಮ್ಮ ಸರ್ಕಾರ ಮುಂದಾಗಿದ್ದು, ಎಲೆಕ್ಟ್ರಿಕ್ ವೆಹಿಕಲ್ ಮತ್ತು ವೇರ್‌ಹೌಸಿಂಗ್ ಮತ್ತು ಲಾಜಿಸ್ಟಿಕ್ಸ್ ವಲಯಗಳಿಗೆ ಈಗಾಗಲೇ ಕರಡು ರೂಪುಗೊಂಡಿವೆ ಎಂದು ಹೇಳಿದರು.

ಇದನ್ನೂ ಓದಿ: ಬಿಡದಿ ನಿತ್ಯಾನಂದ ಸ್ಬಾಮಿ ವಿರುದ್ಧ ಪ್ರಕರಣದ ಕುರಿತಂತೆ ರಾಜ್ಯ ಪೊಲೀಸರಿಗೆ ಸ್ಟಷ್ಟನೆ ಕೇಳಿದ ಇಂಟರ್ ಪೊಲ್

ಬೆಂಗಳೂರು ಸಮೀಪ 2000 ಎಕರೆ ಪ್ರದೇಶದಲ್ಲಿ ‘ನಾಲೆಡ್ಜ್‌ -ಹೆಲ್ತ್‌- ಇನ್ನೋವೇಶನ್ ಅಂಡ್ ರಿಸರ್ಜ್ ಸಿಟಿ’ ಸ್ಥಾಪಿಸುವ ಉದ್ದೇಶವಿದೆ.ಇಲ್ಲಿ ವಿಶ್ವದರ್ಜೆಯ ವಿಶ್ವವಿದ್ಯಾಲಯ, ಆಸ್ಪತ್ರೆ, ಸಂಶೋಧನಾ ಕೇಂದ್ರಗಳಿರಲಿವೆ. ಈ ಯೋಜನೆ ಬೆಂಗಳೂರಿನ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಮತ್ತಷ್ಟು ಬೆಳಗಲಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಬೆಳವಣಿಗೆಗೆ ಉತ್ತೇಜಿಸಲು 9 ಆದ್ಯತಾ ವಲಯಗಳಲ್ಲಿ ‘ವಿಷನ್ ಗ್ರೂಪ್’ ರಚಿಸುತ್ತೇವೆ.ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿಗಳು ಭರದಿಂದ ಸಾಗಿದ್ದು, ಈ ನಿಲ್ದಾಣವನ್ನು 2024ರ ಏಪ್ರಿಲ್ ವೇಳೆಗೆ ಉದ್ಘಾಟನೆ ಮಾಡಲು ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ.ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವನಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಈ ವರ್ಷದ ಬಜೆಟ್ ನ್ಲಲಿ ವಿಜಯಪುರಕ್ಕೆ ಉತ್ಪಾದನೆ ಆಧರಿತ ಕೈಗಾರಿಕಾ ಕ್ಲಸ್ಟರ್ ಘೋಷಿಸಲಾಗಿದೆ ಎಂದು ಹೇಳಿದರು.

ಬಬಲೇಶ್ವರ ಮತ್ತು ತಿಕೋಟಾ ಪಟ್ಟಣಗಳಿಗೆ ಈಗಿನ ಅಗತ್ಯಕ್ಕೆ ತಕ್ಕಂತೆ 'ನಗರ ಕುಡಿಯುವ ನೀರು ಯೋಜನೆ'ಯನ್ನು ಮಂಜೂರು ಮಾಡಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News