ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ ಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ.
ಸಿಎಂ ವಿರುದ್ಧ ಹರಿಪ್ರಸಾದ್ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, 'ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ' ಎಂದರು.
ಇದನ್ನೂ ಓದಿ- ಚುನಾವಣೆ ಮುಗಿದರೂ ನಾಯಕ ನಿಲ್ಲದೆ ಬಿಜೆಪಿ ಹತಾಶೆ ಸ್ಥಿತಿಗೆ ತಲುಪಿದೆ: ಎಂಬಿ ಪಾಟೀಲ್
ಪಕ್ಷದ ಹಿರಿಯ ನಾಯಕರಾಗಿರುವ ಎಮ್ಎಲ್ಸಿ ಬಿ.ಕೆ. ಹರಿಪ್ರಸಾದ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ ಎಂದು ಸಚಿವ ಎಂ.ಬಿ. ಪಾಟೀಲ ಪ್ರತಿಪಾದಿಸಿದರು.
ಇದನ್ನೂ ಓದಿ- ಮೈಸೂರು ಕಾಗದ ಕಾರ್ಖಾನೆ ಪುನಾರಂಭಕ್ಕೆ ಮುಂದಾದ ಸಚಿವ ಎಂ ಬಿ ಪಾಟೀಲ
ಇದೇ ಸಂದರ್ಭದಲ್ಲಿ ಕಾಂಗ್ರೆಸ್ಸಿನಲ್ಲಿ ಯಾವ ಅಂತಃಕಲಹವೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.