ಬೆಂಗಳೂರು: ಟೊಮೇಟೊ, ತರಕಾರಿ ಸೇರಿದಂತೆ ಅಗತ್ಯವಸ್ತುಗಳು ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದಾರೆ. ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 3 ರೂ.ಗೆ ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಹಾಲಿನ ದರ ಹೆಚ್ಚಳದಿಂದ ಸಂಗ್ರಹವಾಗುವ ಹಣವನ್ನು ರೈತರಿಗೆ ವರ್ಗಾವಣೆ ಮಾಡುವುದಾಗಿ ಸರ್ಕಾರ ತಿಳಿಸಿದೆ.
ಇದನ್ನೂ ಓದಿ: ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಜನರ ಜೀವನ ದುಸ್ತರವಾಗಿದೆ: ಬಸವರಾಜ ಬೊಮ್ಮಾಯಿ
ರಾಜ್ಯ ಸರ್ಕಾರದಿಂದ ಪ್ರತಿ ಲೀಟರ್ ಹಾಲಿಗೆ 3 ರೂ. ಏರಿಕೆ ಹಿನ್ನೆಲೆ ಜನಸಾಮಾನ್ಯರ ಬಾಯಿ ಸುಡಲಿದ್ಯಾ ಟೀ-ಕಾಫಿ ಅನ್ನೋ ಪ್ರಶ್ನೆ ಮೂಡಿದೆ. ಈಗಾಗಲೇ ಬೆಲೆ ಏರಿಕೆಯ ಬಿಸಿ ಹೋಟೆಲ್ ಉತ್ಪನ್ನಗಳಿಗೂ ತಟ್ಟಿದ್ದು, ಆಹಾರ ಪದಾರ್ಥಗಳ ಬೆಲೆ ಏರಿಕೆ ಕಂಡಿದೆ. ಇದೀಗ ಊಟ-ತಿಂಡಿ ಬಳಿಕ ಟೀ-ಕಾಫಿ ಸರದಿ ಬಂದಿದೆ.
ಶೀಘ್ರದಲ್ಲೇ ಹೊಟೇಲ್ನಲ್ಲಿ ಟೀ-ಕಾಫಿ ಬೆಲೆ ಹೆಚ್ಚಳ ಸಾಧ್ಯತೆಯಾಗಲಿದೆ ಎಂದು ಬೆಂಗಳೂರು ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಹೇಳಿದ್ದಾರೆ. ‘ಆಗಸ್ಟ್ 1ರಿಂದ ಹಾಲಿನ ದರ ಪ್ರತಿ ಲೀಟರ್ಗೆ 3 ರೂ. ಏರಿಕೆಯಾಗಲಿದೆ. ಕಾಫಿ ಪೌಡರ್ನ ಬೆಲೆಯು ಹೆಚ್ಚಾಗಿದ್ದು, ಕೆಜಿಗೆ 80 ರೂ. ಇದೆ. ಹೀಗಾಗಿ ಗ್ರಾಹಕರಿಗೆ ಹೊರೆಯಾಗದಂತೆ ಕಾಫಿ-ಟೀ ಬೆಲೆ ಏರಿಕೆ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ: ನಾವೆಲ್ಲ ಬಡ್ಡಿ ಮಕ್ಕಳು : ಮುಖ್ಯಮಂತ್ರಿ ಚಂದ್ರು
ಬೆಲೆ ಏರಿಕೆಯಿಂದ ಹೋಟೆಲ್ ನಡೆಸುವವರು ಸಂಕಷ್ಟಕ್ಕೆ ಸಿಲುಕಿದ್ದು, ಬೆಲೆ ಏರಿಕೆ ಏರಿಕೆ ಅನಿವಾರ್ಯವಾಗಿದೆ. ಹೀಗಾಗಿ ಈ ಬಗ್ಗೆ ಜುಲೈ 25ರಂದು ಹೋಟೆಲ್ ಮಾಲೀಕರ ಜೊತೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಪಿ.ಸಿ.ರಾವ್ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.