COVID-19 ಚಿಕಿತ್ಸೆಗೆ ನೀಡುವ ಖಾಸಗಿ ಆಸ್ಪತ್ರೆಗಳು ಗುಣಮಟ್ಟ ಕಾಪಾಡಬೇಕು: ಸಿದ್ದರಾಮಯ್ಯ ಅಗ್ರಹ

ಕೊರೊನಾ ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ.

Last Updated : Jun 30, 2020, 02:59 PM IST
COVID-19 ಚಿಕಿತ್ಸೆಗೆ ನೀಡುವ ಖಾಸಗಿ ಆಸ್ಪತ್ರೆಗಳು ಗುಣಮಟ್ಟ ಕಾಪಾಡಬೇಕು: ಸಿದ್ದರಾಮಯ್ಯ ಅಗ್ರಹ title=

ಬೆಂಗಳೂರು: ರಾಜ್ಯದಲ್ಲಿ COVID 19 ವ್ಯಾಪಕವಾಗಿ ಹೆಚ್ಚುತ್ತಿದ್ದು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವ್ಯವಸ್ಥೆ ಮಾಡುತ್ತಿರುವುದು ಸ್ವಾಗತಾರ್ಹ, ಆದರೆ ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನೋಡಿಕೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿಗಳೂ ಆದ ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮೊದಲ ಟ್ವೀಟ್ ನಲ್ಲಿ "ಖಾಸಗಿ ಆಸ್ಪತ್ರೆಗಳಲ್ಲಿ  ಕರೋನಾವೈರಸ್ (Coronavirus) ಚಿಕಿತ್ಸೆಗೆ  ಅವಕಾಶ ಸ್ವಾಗತಾರ್ಹ‌ ಕ್ರಮ. ಚಿಕಿತ್ಸಾ ಶುಲ್ಕ ಕಡಿಮೆ ಮಾಡಲು ಒಪ್ಪಿರುವ ಖಾಸಗಿಯವರು ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನಿಗಾ ಇಡಬೇಕು. ಸೋಂಕಿತರಿಗೆ ನೀಡುತ್ತಿರುವ ಔಷಧಿ ಮತ್ತು ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಸಂಪೂರ್ಣ ಮಾಹಿತಿಯನ್ನು ಮೊದಲೇ ನೀಡಬೇಕು" ಎಂದು ಒತ್ತಾಯಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ 35 ವರ್ಷಗಳ ಬಳಿಕ ಸಿದ್ದರಾಮಯ್ಯ ಸೈಕಲ್ ಸವಾರಿ, ಸಿದ್ದು ಸ್ಪೀಡಿಗೆ ಸುಸ್ತಾದ ಇತರರು

ಇನ್ನೊಂದು ಟ್ವೀಟ್ ನಲ್ಲಿ "ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ದ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ,‌ ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಡಲಾಗುತ್ತಿದೆ. @BSYBJP ಅವರೇ ಇದು ಅನ್ಯಾಯ ಅಲ್ಲವೇ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ "ಕೊರೊನಾ  ಕೋವಿಡ್-19 (COVID-19)  ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ. @CMofKarnataka ಅವರೇ ಈ ಕಡೆ‌ಗಮನ ಹರಿಸಿ" ಎಂದು ಸಲಹೆ ನೀಡಿದ್ದಾರೆ.

ಘೋಷಿಸಿರುವ ಪ್ಯಾಕೇಜ್‌ಗೆ ಶೀಘ್ರವೇ ಹಣ ಬಿಡುಗಡೆ ಮಾಡುವಂತೆ ಸಿದ್ದರಾಮಯ್ಯ ಒತ್ತಾಯ

ಮಗದೊಂದು ಟ್ವೀಟ್ ನಲ್ಲಿ "ಕೊರೊನಾ ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳ ಹಿನ್ನೆಲೆಯಲ್ಲಿ ಇದರ ಮೇಲೆ ನಿಗಾ ಇಡಲು @CMofKarnataka ಅವರು ತಕ್ಷಣ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸಬೇಕು. ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಇದರಲ್ಲಿ ಸೇರಿಸಿಕೊಳ್ಳಬಹುದು" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
 

Trending News