ಮೈಸೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ 3ನೇ ಹಂತದ ರಾಜ್ಯ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಇಂದು ಎರಡನೇ ದಿನದ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಬೆಳಗ್ಗೆ 8.30 ರಿಂದ 9.30ರ ವರೆಗೆ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿರುವ ರಾಹುಲ್, ಬೆಳಗ್ಗೆ 10ಗಂಟೆಗೆ ಮಹಾರಾಜ ಕಾಲೇಜು ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ನಲ್ಲಿ ಬೇಲೂರಿಗೆ ತಲುಪಲಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಶಾಸಕ ದಿ.ವೈ.ಎನ್ ರುದ್ರೇಶ್ ಗೌಡರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಲಿದ್ದಾರೆ. ಬಳಿಕ 11.45ಕ್ಕೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಗೆ ಭೇಟಿ ನೀಡಿ, ಮಧ್ಯಾಹ್ನ 1.30ಕ್ಕೆ ಪಾಂಡವಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ನಂತರ 2.30ಕ್ಕೆ ಮಂಡ್ಯಕ್ಕೆ ಆಗಮಿಸಿ ಪಕ್ಷದ ಕಾರ್ಯಕರ್ತರೊಂದಿಗೆ ಒಂದು ಗಂಟೆ ಕಾಲ ಸಮಾಲೋಚನೆ ನಡೆಸಲಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ಮತ್ತೆ ಮೈಸೂರಿಗೆ ಮರಳಲಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಪಕ್ಷದ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಸಂಜೆ 7ಗಂಟೆ ಸುಮಾರಿಗೆ ಮಂಡಕ್ಕಳ್ಳಿ ವಿಮಾನ ನಿಲ್ದಾಣದಿದ ದೆಹಲಿಗೆ ತೆರಳಲಿದ್ದಾರೆ.
The fourth phase of Congress President @RahulGandhi's tour of Karnataka ends today. #JanaAashirwadaYatre pic.twitter.com/03iv4PYI7U
— Congress (@INCIndia) March 25, 2018