ರಾಜ್ಯಸಭಾ ಚುನಾವಣೆ: ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

 ರಾಜ್ಯಸಭೆಯ ಚುನಾವಣೆಗೆ  ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ ಎಂಟು ಅಭ್ಯರ್ಥಿಗಳ ಪೈಕಿ, ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ.

Written by - Prashobh Devanahalli | Edited by - Manjunath N | Last Updated : Feb 16, 2024, 05:13 PM IST
  • ಫೆಬ್ರವರಿ 20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
  • ಎಂಟು ಅಭ್ಯರ್ಥಿಗಳ ಪೈಕಿ, ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ.
ರಾಜ್ಯಸಭಾ ಚುನಾವಣೆ: ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ title=
ಸಾಂಧರ್ಭಿಕ ಚಿತ್ರ

ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ  ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ ಎಂಟು ಅಭ್ಯರ್ಥಿಗಳ ಪೈಕಿ, ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಂಡಿದೆ.

ಪಕ್ಷೇತರ ಅಭ್ಯರ್ಥಿಗಳಾದ ಡಾ. ಕೆ.ಪದ್ಮರಾಜನ್ ಹಾಗೂ ಮಲ್ಲಿಕಾರ್ಜುನ ಕೆಂಗನೂರು ಅವರುಗಳ ನಾಮಪತ್ರಗಳು ತಿರಸ್ಕೃತಗೊಂಡಿರುವ ಅಭ್ಯರ್ಥಿಗಳು.

ಇದನ್ನೂ ಓದಿ: ಗೋ ಹತ್ಯೆ, ಜಾನುವಾರುಗಳ ರಕ್ಷಣೆಗೆ ಬಜೆಟ್‌ನಲ್ಲಿ ಯಾವುದೇ ಯೋಜನೆ ಇಲ್ಲ : ಶಾಸಕ ಪ್ರಭು ಚವ್ಹಾಣ್ 

ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ನಾರಾಯಣಸಾ.ಕೆ ಭಾಂಡಗೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಅಜಯ್ ಮಕನ್, ಜಿ.ಸಿ. ಚಂದ್ರಶೇಖರ್ ಮತ್ತು ಡಾ. ಸೈಯದ್ ನಾಸೀರ್ ಹುಸೇನ್ ಹಾಗೂ ಜನತಾದಳ (ಜಾತ್ಯಾತೀತ) ಪಕ್ಷದ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರ ನಾಮಪತ್ರಗಳು ಮಾನ್ಯಗೊಂಡಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಬಜೆಟ್ ರಾಜ್ಯದ ವಿನಾಶಕ್ಕೆ ಬುನಾದಿ ಹಾಕಿದ್ದಾರೆ : ಹೆಚ್‌ಡಿಕೆ 

ಫೆಬ್ರವರಿ 20 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ರಾಜ್ಯಸಭೆಯ ಚುನಾವಣೆಗೆ ಮತದಾನ ಫೆಬ್ರವರಿ 27 ರಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ:106 ರಲ್ಲಿ ನಡೆಯಲಿದ್ದು, ಸಂಜೆ 5.00 ಗಂಟೆಗೆ ಮತ ಎಣಿಕೆ ಕಾರ್ಯ ಕೊಠಡಿ ಸಂಖ್ಯೆ: 106ರಲ್ಲಿ ನಡೆಲಿದೆ ಎಂದು ಪ್ರಕಟಣೆ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News