ಬೆಂಗಳೂರು: ವಿವಿಧ ರಾಜ್ಯಗಳ ಒಟ್ಟು ಎಂಟು ಸ್ಥಾನಗಳಿಗಾಗಿ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಅದು ಕಾದು ನೋಡುವ ತಂತ್ರವನ್ನು ಅನುಸರಿಸಿದೆ.
ಈಗಾಗಲೇ ಉತ್ತರ ಪ್ರದೇಶ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಬಿಹಾರ, ಗುಜರಾತ್, ರಾಜಸ್ಥಾನದ ಅಭ್ಯರ್ಥಿಗಳ ಪ್ರಕಟಿಸಿರುವ ಬಿಜೆಪಿಯು, ಕರ್ನಾಟಕದಲ್ಲಿ ತಾನು ಗೆಲ್ಲಬಹುದಾದ ಒಂದು ಸ್ಥಾನಕ್ಕಾಗಿ ಅಭ್ಯರ್ಥಿಯನ್ನು ಘೋಷಿಸಬೇಕಾಗಿತ್ತು. ಆದರೆ ಕಾಂಗ್ರೆಸ್ ಇದುವರೆಗೂ ತನ್ನ ಅಂತಿಮ ತಿರ್ಮಾನ ತೆಗೆದುಕೊಳ್ಳದೆ ಇರುವುದರಿಂದಾಗಿ ಕಾಂಗ್ರೆಸ್ ನಡೆ ಮೇರೆಗೆ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಘೋಷಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.