National Investigation Agency released photographs : ಮಾರ್ಚ್ 1 ರಂದು ಬೆಂಗಳೂರಿನ ಬ್ರುಕ್ ಫಿಲ್ಡ್ ನಲ್ಲಿಯ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ರಾಷ್ಟ್ರೀಯ ತನಿಖಾ ದಳವು ತನಿಖೆ ಆರಂಭಿಸಿದ್ದು, ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ, ಆರೋಪಿಯ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.
ಇದನ್ನು ಓದಿ : ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಎಐ ಮೂಲಸೌಕರ್ಯ, ಸ್ಟಾರ್ಟ್‌ಅಪ್‌ಗಳಿಗೆ 10,372 ಕೋಟಿ ಹೂಡಿಕೆ
ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ ಆರೋಪಿಯ ಭಾವಚಿತ್ರಗಳನ್ನು ಬಿಡುಗಡೆ ಮಾಡಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾದ ಟಿ-ಶರ್ಟ್, ಜೀನ್ಸ್ ಪ್ಯಾಂಟ್, ತಲೆಗೆ ಕ್ಯಾಪ್ ಮತ್ತು ಮುಖಕ್ಕೆ ಮಾಸ್ಕ್ ಹಾಕಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಶಂಕಿತನ ಸುಳಿದ ಲಭಿಸಿದ ಕೂಡಲೇ 08029510900, 8904241100 ಹಾಗೂ ಇ-ಮೇಲ್ ವಿಳಾಸ info.blr.nia@gov.in ಮಾಹಿತಿ ನೀಡಬಹುದು ಎಂದು ಅಧಿಕಾರಿಗಳು ಕೋರಿದ್ದಾರೆ.
ಈ ಕುರಿತು ಸಾರ್ವಜನಿಕ ಪ್ರಕರಣೆ ಹೊರಡಿಸಿರುವ NIA, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು .
NIA seeks citizen cooperation in identifying the suspect linked to the #RameswaramCafeBlastCase. 📞 Call 08029510900, 8904241100 or email to info.blr.nia@gov.in with any information. Your identity will remain confidential. #BengaluruCafeBlast pic.twitter.com/ISTXBZrwDK
— NIA India (@NIA_India) March 9, 2024
ಇದನ್ನು ಓದಿ : ಅರುಣಾಚಲ ಪ್ರದೇಶದಲ್ಲಿ ವಿಶ್ವದ ಅತಿ ಉದ್ದದ ದ್ವಿ-ಪಥ ಸುರಂಗಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ
ಬಿಎಂಟಿಸಿ ಬಸ್ ನಲ್ಲಿ ಓಡಾಟ ನಡೆಸಿರುವ ಎರಡು ವಿಡಿಯೋಗಳನ್ನು ಶುಕ್ರವಾರ NIA, ಬಿಡುಗಡೆ ಮಾಡಿತ್ತು. ಬಸ್ ನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಆಧಾರದಲ್ಲಿ ಆರೋಪಿಯ ವಿಡಿಯೋ ಬಿಡುಗಡೆ ಮಾಡಲಾಗಿದ್ದು, ಆರೋಪಿಯ ಕುರಿತು ಸುಳಿವು ನೀಡಿದವರಿಗೆ 10 ಲಕ್ಷ ರೂ ಬಹುಮಾನ ನೀಡುವುದಾಗಿ ಘೋಷಿಸಲಾಗಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.