ಬೆಂಗಳೂರು: ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ವಿದ್ಯುತ್ ದರ ಹೆಚ್ಚಳ ಮಾಡಿದರು. ಎಲ್ಲ ಕಾಯಿಪಲ್ಯೆ ದರ ಹೆಚ್ಚಳ ಆಗಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿದ್ದಾರೆ. ಆಗಸ್ಟ್ 1ರ ನಂತರ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದು ಹೇಳಿದರು.
ಪಿಎಸ್ ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದು, ದ್ವೇಷದ ರಾಜಕಾರಣ ಎಲ್ಲಿಗೆ ಹೋಗುತ್ತಿದೆ ಅನ್ನುವುದು ಗೊತ್ತಾಗುತ್ತಿಲ್ಲ. ಪಿಎಸ್ ಐ ಹಗರಣ ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶ ಮಾಡಿದ್ದೇವು.
ಇದನ್ನೂ ಓದಿ-ಟೊಮೊಟೊ ತುಂಬಿದ್ದ ಗೂಡ್ಸ್ ವಾಹನ ಕಳ್ಳತನ: ಖತರ್ನಾಕ್ ಗಂಡ-ಹೆಂಡತಿ ಅಂದರ್
ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ.ಈ ಹಗರಣದಲ್ಲಿ ಕಾಂಗ್ರೆಸ್ ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ಕೊರ್ಟ್‌ನಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್ ನವರು. ಗಾಂದೀಜಿಯನ್ನು ಹೆಚ್ಚು ದುರುಪಯೋಗ ಮಾಡಿ ಕೊಂಡವರು ಕಾಂಗ್ರೆಸ್ ನವರು. ಗಾಂಧಿಜಿ ಸ್ವಾತಂತ್ರ್ಯದ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಿ ಅಂತ ಹೇಳಿದ್ದರು. ಯಾಕೆಂದರೆ ಕಾಂಗ್ರೆಸ್ ನವರಿಗೆ ದೇಶ ಆಳಲು ಬರುವುದಿಲ್ಲ ಅಂತ. ಆದರೆ, ಇವರು ಗಾಂಧೀಜಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ-ಕುಗ್ಗಿದ ಬಿಜೆಪಿ ಉತ್ಸಾಹ: ಪ್ರತಿಭಟನೆಗೆ ಬಾರದ ಬೆಂಗಳೂರು ಶಾಸಕರು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.