ಚಾಮರಾಜನಗರ: ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ಶುಕ್ರವಾರ ತಡರಾತ್ರಿವರೆಗೆ ನಡೆದಿದ್ದು, ಬರೋಬ್ಬರಿ 2 ಕೋಟಿ ರೂ. ಸಂಗ್ರಹವಾಗಿದೆ.
ಇದನ್ನೂ ಓದಿ: Textbook Revision Row: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಇಂದು ಬೃಹತ್ ಪ್ರತಿಭಟನೆ
ಶುಕ್ರವಾರ ಬೆಳಗ್ಗೆಯಿಂದ ತಡರಾತ್ರಿವರೆಗೂ ಎಣಿಕೆ ಕಾರ್ಯ ನಡೆದಿದ್ದು, ಕೇವಲ 35 ದಿನಗಳಲ್ಲಿ 2,03,25,354 ನಗದು ಸಂಗ್ರಹವಾಗಿದೆ. ಇದರೊಟ್ಟಿಗೆ ಚಿನ್ನ, ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಮಹದೇಶ್ವರನಿಗೆ ಅರ್ಪಿಸಿದ್ದಾರೆ.
ಇದನ್ನೂ ಓದಿ: ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಧಾರ್ಮಿಕ ಸ್ಥಳ, ಪಬ್ & ರೆಸ್ಟೋರೆಂಟ್ಗಳಲ್ಲಿ ಧ್ವನಿವರ್ಧಕ ಬ್ಯಾನ್: ಹೈಕೋರ್ಟ್
ದಿನನಿತ್ಯದ ವಿವಿಧ ಸೇವಗಳನ್ನು ಹೊರತುಪಡಿಸಿ ಹುಂಡಿಯಲ್ಲೇ 2 ಕೋಟಿ ರೂ. ಆದಾಯ ಬಂದಿದ್ದು, ಕೊರೊನಾ ಬಳಿಕ ಭಕ್ತಸಾಗರವೇ ಬೆಟ್ಟಕ್ಕೆ ಹರಿದುಬರುತ್ತಿದೆ. ವಾರಾಂತ್ಯ ಹಾಗೂ ಸೋಮವಾರದಂದು ಚಿನ್ನದ ರಥ ಸೇವೆ ಮಾಡಲು ಕಿಕ್ಕೇರಿದು ಜರನು ಸೇರುತ್ತಿದ್ದಾರೆ. ತಿರುಪತಿ ಮಾದರಿಯಲ್ಲೇ ಹೆಚ್ಚಿನ ಸಂಖ್ಯೆಯ ಭಕ್ತರು ವಾರಾಂತ್ಯದಲ್ಲಿ ಬೆಟ್ಟಕ್ಕೆ ಹರಿದುಬರುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.