ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಮಹಿಳೆಯರ ಉಚಿತ ಬಸ್ ಪ್ರಯಾಣ ಆರಂಭವಾಗಿ ಬರೋಬ್ಬರಿ 1 ತಿಂಗಳ ಮೇಲಾಗಿದೆ. ಶಕ್ತಿ ಯೋಜನೆ ಜಾರಿಯಾದ ದಿನದಿಂದ ಇಲ್ಲಿವರೆಗೂ 19 ಕೋಟಿಗೂ ಅಧಿಕ ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಮಾಡಿದ್ದು, ಇವರ ಟಿಕೆಟ್ ಮೊತ್ತ 461 ಕೋಟಿ ರೂ. ದಾಟಿದೆ.
ಇಲ್ಲಿವರೆಗೂ ಎಲ್ಲಾ ನಿಗಮಗಳ ಬಸ್‍ಗಳಲ್ಲಿ ಒಟ್ಟು 19.39 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ದಿನೇ ದಿನೇ ಸಾರಿಗೆ ಬಸ್‍ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಕಳೆದ 34 ದಿನಗಳಲ್ಲಿ 19,39,39,266 ಮಹಿಳಾ ಪ್ರಯಾಣಿಕರು ಸಂಚಾರ ನಡೆಸಿದ್ದಾರೆ.
ಇದನ್ನೂ ಓದಿ: ಬೆತ್ತಲೆ ಮಾಡಿ ಯುವಕನ ಹಲ್ಲೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ವಿಡಿಯೋ ವೈರಲ್
ಶಕ್ತಿ ಯೋಜನೆಡಿ ಜುಲೈ 14ರಂದು ಪ್ರಯಾಣಿಸಿದ ಮಹಿಳಾ ಪ್ರಯಾಣಿಕರ ವಿವರ
KSRTC - 20,34,014
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 5,36,00,512 ರೂ.
ಬಿಎಂಟಿಸಿ- 21,71,974
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,75,57,842 ರೂ.
ವಾಯುವ್ಯ ಸಾರಿಗೆ- 15,87,967
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 3,82,98,877 ರೂ.
ಕಲ್ಯಾಣ ಕರ್ನಾಟಕ ಸಾರಿಗೆ - 9,32,339
ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 2,90,65,369 ರೂ.
ಒಟ್ಟು ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 67,26,294
ಶುಕ್ರವಾರದ ಒಟ್ಟು ಮಹಿಳೆಯರ ಪ್ರಯಾಣದ ಮೌಲ್ಯ- 14,85,22,600 ರೂ.
ಜೂನ್ 11ರಿಂದ ಜುಲೈ 14ರವರೆಗೂ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ- 19,39,39,266
ಒಟ್ಟು ಮಹಿಳಾ ಪ್ರಯಾಣಿಕರ ಪ್ರಯಾಣದ ಮೌಲ್ಯ- 461,11,44,579 ರೂ. ಆಗಿದೆ.
ಕಾಂಗ್ರೆಸ್ ಸರ್ಕಾರದ ‘ಶಕ್ತಿ’ ಯೋಜನೆ
ರಾಜ್ಯ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದಂತೆ, ಅಧಿಕಾರಕ್ಕೆ ಬಂದ 1 ತಿಂಗಳೊಳಗೆ ಮೊದಲ ಗ್ಯಾರಂಟಿಯಾಗಿ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ‘ಶಕ್ತಿ’ ಯೋಜನೆಗೆ ಚಾಲನೆ ನೀಡಿತು. ಜೂನ್ 11ರಂದು ಈ ಯೋಜನೆ ರಾಜ್ಯದಾದ್ಯಂತ ಆರಂಭವಾಗಿದ್ದು, ಮೊದಲ ದಿನವೇ ಲಕ್ಷಾಂತರ ಮಹಿಳೆಯರು ಉಚಿತ ಪ್ರಯಾಣ ಮಾಡಿ ಯೋಜನೆಯ ಸವಲತ್ತು ಪಡೆದುಕೊಂಡಿದ್ದರು.
ಇದನ್ನೂ ಓದಿ: ನೀವು ಅಭಿವೃದ್ದಿ ಮಾಡುತ್ತೇವೆ ಎನ್ನುವುದು ಮುಂದೆ ತಿಳಿಯಲಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.