ಚನ್ನಪಟ್ಟಣ : ಉಪಚುನಾವಣೆಯಲ್ಲಿ ಚನ್ನಪಟ್ಟಣ ಜನರು ಸಿ.ಪಿ.ಯೋಗೇಶ್ವರ್ ಅವರನ್ನು ಆಶೀರ್ವದಿಸಿ ಬೆಂಬಲಿಸುವ ನಂಬಿಕೆಯಿದೆ. ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಮಟ್ಟದ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣದ ಉಪಚುನಾವಣೆಯಲ್ಲಿ ಜೆಡಿಎಸ್ ನವರು ಯಾರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುತ್ತಾರೆ ಎನ್ನುವುದು ಮುಖ್ಯವಲ್ಲ. ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷದಲ್ಲಿದ್ದು, ಎರಡು ಬಾರಿ ಶಾಸಕರಾಗಿದ್ದರು. ಬಿಜೆಪಿ ಹಾಗೂ ಎನ್ ಡಿ ಎ ನಿಂದ ಅವರಿಗೆ ಅನ್ಯಾಯವಾದ ಕಾರಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ ಎಂದು ಸಿಎಂ ಹೇಳಿದ್ದಾರೆ.
ಇದನ್ನೂ ಓದಿ : ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ ಸರ್ಕಾರ : ಗಾಯಗೊಂಡವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ
ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನೊಪ್ಪಿ ಮರಳಿ ಬಂದಿರುವ ಯೋಗೇಶ್ವರ್ ನ್ನು ಇಡೀ ಕಾಂಗ್ರೆಸ್ ಪಕ್ಷ ಸ್ವಾಗತಿಸಿದೆ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ. ಜೆಡಿಎಸ್ ಬಿಜೆಪಿಯವರು ಚನ್ನಪಟ್ಟಣ ಕ್ಷೇತ್ರಕ್ಕೆ ಯಾರನ್ನೇ ನಿಲ್ಲಿಸಿದರೂ ಕಾಂಗ್ರೆಸ್ ನ ಅಭ್ಯರ್ಥಿಯೇ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ನಿಮಿತ್ತ ಚನ್ನಪಟ್ಟಣ ತಹಶೀಲ್ದಾರ್ ಕಚೇರಿಯಲ್ಲಿ ಪಕ್ಷದ ಅಭ್ಯರ್ಥಿಯಾದ ಸಿ ಪಿ ಯೋಗೇಶ್ವರ್ ರವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು.
ಇದನ್ನೂ ಓದಿ : ಬೆಂಗಳೂರನ್ನು ಬಿಟ್ಟಬಿಡದೇ ಕಾಡುತ್ತಿರುವ ವರುಣ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.