ಬೆಂಗಳೂರು: ಟಿಪ್ಪು ಎಂದರೆ ಸಿದ್ದರಾಮಯ್ಯನವರಿಗೆ ಮೈಮೇಲೆ ಬಂದು ಬಿಡುತ್ತೆ ಎಂದು ಆರ್.ಆಶೋಕ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ಧರಾಮಯ್ಯ 'ಟಿಪ್ಪು ಸುಲ್ತಾನ್ ಎಂದಾಗ ಮೊದಲು ಮೈಮೇಲೆ ಬಂದದ್ದು ಬಿಜೆಪಿ ನಾಯಕರಿಗೆ.ಹತ್ತು ವರ್ಷಗಳ ಹಿಂದೆ ಈ ರೀತಿ ಮೈಮೇಲೆ ಬಂದಾಗಲೇ ಅಂದಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಡಾ.ಶೇಖ್ ಅಲಿ ಅವರಿಂದ 425 ಪುಟಗಳ ಪುಸ್ತಕ ಬರೆಸಿ ಸರ್ಕಾರದಿಂದಲೇ ಪ್ರಕಟಿಸಿದ್ದು" ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಟಿಪ್ಪು ಸುಲ್ತಾನ್ ಎಂದ ಕೂಡಲೇ ಉರಿದುಬೀಳುವ ಬಿಜೆಪಿ ನಾಯಕರೆಲ್ಲರೂ ಮೊದಲು ಅವರ ಸರ್ಕಾರವೇ ಟಿಪ್ಪು ಬಗ್ಗೆ ಬರೆಸಿ, ಪ್ರಕಟಿಸಿದ್ದ ಪುಸ್ತಕ ಮತ್ತು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಸಚಿವ ಗೋವಿಂದ ಕಾರಜೋಳ ಅವರು ಟಿಪ್ಪುವನ್ನು ಹಾಡಿ ಹೊಗಳಿದ ಮುನ್ನುಡಿಯನ್ನು ಓದಬೇಕು' ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ : Maharashtra Political Crisis : ಉದ್ಧವ್ ಠಾಕ್ರೆಗೆ ಓಪನ್ ಚಾಲೆಂಜ್ ಹಾಕಿದ ಏಕನಾಥ್ ಶಿಂಧೆ!
It was @BJP4Karnataka leaders who were consumed by #TipuSultan first. 10 years back when they were consumed by Tipu Sultan, the then CM @JagadishShettar had released a 425 page book on Tipu Sultan which was written by Dr Shekh Ali.@RAshokaBJP#ಪಠ್ಯಪರಿಷ್ಕರಣೆ pic.twitter.com/hjrRSSfy3t
— Siddaramaiah (@siddaramaiah) June 23, 2022
"ಟಿಪ್ಪುವಿನ ರಾಷ್ಟ್ರೀಯ ರಾಜ್ಯದ ಕಲ್ಪನೆ, ಸಮರ ಕಲೆ, ಸುಧಾರಣೆಯ ಹುರುಪು, ಟಿಪ್ಪುವನ್ನು ಎಣೆಯಿಲ್ಲದ ನಾಯಕನನ್ನಾಗಿ ಮಾಡಿದೆ’’ ಎಂದು ತಾವೇ ಪ್ರಕಟಿಸಿದ್ದ ಪುಸ್ತಕದಲ್ಲಿ ಹಾಡಿ ಹೊಗಳಿದವರು ಆಗಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಸಚಿವ ಗೋವಿಂದ ಕಾರಜೋಳ ಅವರು. ಆಗ ತಾವೆಲ್ಲಿ ಅಡಗಿ ಕೂತಿದ್ದಿರಿ ಅಶೋಕ್ ಅವರೇ? ಎಂದು ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.