ಬೆಂಗಳೂರು: ಮಾರುತಿ ಮಾನ್ಪಡೆ ಅವರ ಸಾವಿಗೆ ನಾನು ಮತ್ತು ಡಿ.ಕೆ.ಶಿವಕುಮಾರ್ ಕಾರಣ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹೇಳಿರುವುದು ಬಾಲಿಶತನದ ಹೇಳಿಕೆ ಎಂದು ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಹಾಗಿದ್ದರೆ ದೇಶದಲ್ಲಿ ಒಂದು ಕಾಲು ಲಕ್ಷ ಜನ ಕೊರೊನಾಕ್ಕೆ ಬಲಿಯಾಗಿದ್ದಾರಲ್ಲಾ ಅದಕ್ಕೆ ಯಾರು ಹೊಣೆ ಎಂದು ಹೇಳುವಿರಾ ಸದಾನಂದ ಗೌಡರೇ? ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿ ಹೋಗಿರುವ ಸರ್ಕಾರ- ಸಿದ್ಧರಾಮಯ್ಯ ವಾಗ್ದಾಳಿ
ಕೊರೊನಾ ವಿರುದ್ಧ ಹೋರಾಡಬೇಕಾಗಿದ್ದ ಕೇಂದ್ರ ಸರ್ಕಾರ ಅವಕಾಶವನ್ನು ದುರ್ಬಳಕೆ ಮಾಡಿಕೊಂಡು ಜನವಿರೋಧಿ ಕಾನೂನುಗಳನ್ನು ಜಾರಿಗೆ ತಂದದ್ದೇ ಮಾನ್ಪಡೆಯವರೂ ಸೇರಿದಂತೆ ಅನೇಕ ಹೋರಾಟಗಾರರ ಸಾವಿಗೆ ಕಾರಣ ಎಂದು ಹೇಳಿದರು.
.@DVSadanandGowda has made a childish remark by saying that Shri. @DKShivakumar & I are responsible for the death of Shri. Maruti Manpade.
Then who is responsible for the death of more than 1.5 lakh Indians due to Covid19, @DVSadanandGowda avare?
2/3
— Siddaramaiah (@siddaramaiah) October 27, 2020
ಮುನಿರತ್ನ ತನಗೆ ಅನುದಾನ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷ ತೊರೆದದ್ದು ಎಂದು ಸುಳ್ಳು ಹೇಳುತ್ತಿದ್ದಾರೆ. ನನ್ನ ಅಧಿಕಾರಾವಧಿಯಲ್ಲಿ ಆರ್.ಆರ್ ನಗರ ಕ್ಷೇತ್ರಕ್ಕೆ ರೂ.2,000 ಕೋಟಿಗೂ ಅಧಿಕ ಅನುದಾನ ನೀಡಿದ್ದೆ, ಇಂದು ಕ್ಷೇತ್ರದಲ್ಲಿ ಏನಾದರೂ ಅಭಿವೃದ್ಧಿ ಕಾರ್ಯಗಳಾಗಿದ್ದರೆ ಅದಕ್ಕೆ ನಮ್ಮ ಸರ್ಕಾರ ಕಾರಣ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯಕ್ಕೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ 'ಧಮ್ ನಿಮಗಿದೆಯೇ ಕಟೀಲ್ ಅವರೇ? -ಸಿದ್ಧು ಪ್ರಶ್ನೆ
ಕೆ.ಆರ್ ಪೇಟೆಯಲ್ಲಿ ಹಣ ಹಂಚಿ ಗೆದ್ದಂತೆ ಶಿರಾ ಮತ್ತು ಆರ್.ಆರ್ ನಗರದಲ್ಲೂ ಹಣ ಹಂಚಿ ಸುಲಭದಲ್ಲಿ ಗೆಲ್ಲಬಹುದು ಎಂಬುದು ಬಿಜೆಪಿಯವರ ಲೆಕ್ಕಾಚಾರ. ಆದರೆ ಇಲ್ಲಿನ ಜನ ಹಣದ ಆಮಿಷಕ್ಕೆ ಒಳಗಾಗದೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.