ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಕೋಪದಲ್ಲಿ ಎಲ್ಲರೆದುರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿದ ಘಟನೆ ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಮೈಸೂರು-ಕೊಡಗು ಜಿಲ್ಲೆಗಳ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ, HAL ನಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ತೆರಳುತ್ತಿದ್ದ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತ ಮೊಬೈಲ್ ನೀಡಲು ಮುಂದಾಗಿದ್ದಾರೆ. ಈ ವೇಳೆ ಕುಪಿತರಾದ ಸಿದ್ದು ನಾನು ಮಾತನಾಡುವುದಿಲ್ಲ ಹೋಗು ಎಂದು ಆತನ ಕೆನ್ನೆಗೆ ಬಾರಿಸಿದ್ದಾರೆ.
ಸಿದ್ದರಾಮಯ್ಯ ಕಪಾಳಮೋಕ್ಷ ಮಾಡಿದ್ದು, ಮಾಧ್ಯಮಗಳ ಕ್ಯಾಮರ ಕಣ್ಣಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.
#WATCH: Congress leader and Karnataka's former Chief Minister Siddaramaiah slaps his aide outside Mysuru Airport. pic.twitter.com/hhC0t5vm8Q
— ANI (@ANI) September 4, 2019