ಉಪಚುನಾವಣೆಯಲ್ಲಿ ಸುಮಲತಾ ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸವಿದೆ: ಶ್ರೀರಾಮುಲು

ಉಪಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಅರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

Last Updated : Nov 20, 2019, 11:45 AM IST
ಉಪಚುನಾವಣೆಯಲ್ಲಿ ಸುಮಲತಾ ಬಿಜೆಪಿಯನ್ನು ಬೆಂಬಲಿಸುವ ವಿಶ್ವಾಸವಿದೆ: ಶ್ರೀರಾಮುಲು title=
File Image

ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ (Sumalatha Amabareesh) ಉಪಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಬೆಂಬಲ ಸೂಚಿಸಲಿದ್ದಾರೆ ಎಂಬ ಬಗ್ಗೆ ಕುತೂಹಲ ಮನೆಮಾಡಿದೆ. ಏತನ್ಮಧ್ಯೆ, ಉಪಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರ(KR Pet Assembly constituency)ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ(Narayana Gowda)ರನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು(B. Sriramulu) ತಿಳಿಸಿದ್ದಾರೆ.

ಮಂಗಳವಾರ ಮಂಡ್ಯದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಶ್ರೀರಾಮುಲು, ಪಕ್ಷದ ವರಿಷ್ಠರು ಸುಮಲತಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಮತ್ತು ಗೃಹ ಸಚಿವ ಅಮಿತ್ ಶಾ(Amit Shah) ಸಹ ಸುಮಲತಾ ಅವರ ಬೆಂಬಲವನ್ನು ಕೋರಿದ್ದಾರೆ. ಸುಮಲತಾ ಅವರು ಬಹುಭಾಷಾ ನಟಿ ಮತ್ತು ಸಂಸದೆ. ಅವರಿಗೆ ಯಾರನ್ನು ಬೆಂಬಲಿಸಬೇಕು, ಯಾರಿಗೆ ಸಹಕಾರ ನೀಡಬಾರದು ಎಂಬುದರ ಅರಿವಿದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸುಮಲತಾ ತಮ್ಮ ಪಕ್ಷಕ್ಕೆ ಬೆಂಬಲ ನೀಡಲಿದ್ದಾರೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೆ.ಆರ್. ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇಲೆ ಚಪ್ಪಲಿ ಎಸೆದು ಅಕ್ರೋಶ

ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಶ್ರೀರಾಮುಲು(Sriramulu) ಪಕ್ಷದ ಅಭ್ಯರ್ಥಿ ನಾರಾಯಂಗೌಡರ ಪರವಾಗಿ ಕೆ.ಆರ್ ಪೇಟೆಯಲ್ಲಿ ಎರಡು ದಿನಗಳ ಕಾಲ ಪ್ರಚಾರ ಮಾಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಅವರಿಗೆ ತಿರುಗೇಟು ನೀಡಿದ ಶ್ರೀರಾಮುಲು, ನಮ್ಮ ಸರ್ಕಾರ ಸುಭದ್ರವಾಗಿದೆ. ಮುಂದಿನ ಮೂರು ವರ್ಷ ನಮ್ಮದೇ ಸರ್ಕಾರ ಇರುತ್ತದೆ ಎಂಬ ಸಂದೇಶ ರವಾನಿಸಿದರು.

ಇದನ್ನೂ ಓದಿ: ಸಚಿವ ಶ್ರೀರಾಮುಲು ಸವಾಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ...!

ಗಮನಾರ್ಹವಾಗಿ, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸ್ಥಳೀಯ ನಾಯಕ ಚೆಲುವರಾಯಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಸುಮಲತಾ ಪರವಾಗಿ ಕೆಲಸ ಮಾಡಿದ್ದರು. ಉಪಚುನಾವಣೆ ಘೋಷಣೆ ಬಳಿಕ ಕೆ.ಆರ್. ಪೇಟೆ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಕೆ.ಬಿ ಚಂದ್ರಶೇಖರ್​ ಸುಮಲತಾ ಅವರ ಬೆಂಬಲ ಕೋರಿದ್ದರು. ಇದೀಗ ಬಿಜೆಪಿ ನಾಯಕರೂ ಸಹ ಮಂಡ್ಯ ಸಂಸದರ ಬೆಂಬಲ ಕೋರಿದ್ದು, ಸುಮಲತಾ ಯಾರಿಗೆ ತಮ್ಮ ಬೆಂಬಲ ಸೂಚಿಸಲಿದ್ದಾರೆ ಎಂಬುದು ಕುತೂಹಲ ಹೆಚ್ಚಿಸಿದೆ.

Trending News