ರಾಜ್ಯ ಸರ್ಕಾರ ಕೂಡಲೇ ಬಡವರಿಗೆ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಲಿ-ಸಿದ್ಧರಾಮಯ್ಯ

ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ರಾಜ್ಯದ ಬಹುಪಾಲು ಜನ ದುಡಿಮೆಯಿಲ್ಲದೆ ಅಗತ್ಯ ವಸ್ತುಗಳ ಖರೀದಿಗೂ ಪರದಾಡುವಂತಾಗಿದೆ. ಹಿಂದಿನ ಸರ್ಕಾರ ಸಾಲ ಮಾಡಿಟ್ಟು ಹೋಗಿದೆ ಎಂಬ ಹುಸಿ ಸಬೂಬು ನೀಡದೆ ರಾಜ್ಯ ಸರ್ಕಾರ ಕೂಡಲೇ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

Last Updated : May 13, 2021, 04:06 PM IST
  • ಕೊರೊನಾ (Covid19) ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ.
  • ರಾಜ್ಯದಲ್ಲಿ ಈಗಿನ ಶೇಕಡಾ 55 ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ.
  • ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30 ರಷ್ಟಿತ್ತು.
ರಾಜ್ಯ ಸರ್ಕಾರ ಕೂಡಲೇ ಬಡವರಿಗೆ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಲಿ-ಸಿದ್ಧರಾಮಯ್ಯ  title=
file photo

ಬೆಂಗಳೂರು: ಕೊರೊನಾ ಲಾಕ್‌ಡೌನ್ ಪರಿಣಾಮವಾಗಿ ರಾಜ್ಯದ ಬಹುಪಾಲು ಜನ ದುಡಿಮೆಯಿಲ್ಲದೆ ಅಗತ್ಯ ವಸ್ತುಗಳ ಖರೀದಿಗೂ ಪರದಾಡುವಂತಾಗಿದೆ. ಹಿಂದಿನ ಸರ್ಕಾರ ಸಾಲ ಮಾಡಿಟ್ಟು ಹೋಗಿದೆ ಎಂಬ ಹುಸಿ ಸಬೂಬು ನೀಡದೆ ರಾಜ್ಯ ಸರ್ಕಾರ ಕೂಡಲೇ ಆಹಾರ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಕೊರೊನಾ (Covid19) ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಈಗಿನ ಶೇಕಡಾ 55 ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ.ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30 ರಷ್ಟಿತ್ತು. 

ಇದನ್ನೂ ಓದಿ: Oxygen: ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ನಮಗೇಕೆ ಆಮ್ಲಜನಕ ಕೊಡ್ತಿಲ್ಲ-ಕುಮಾರಸ್ವಾಮಿ ಆಕ್ರೋಶ

ರಾಜ್ಯ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು. 

ಜಿಲ್ಲೆಗಳಲ್ಲಿ ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣ ವ್ಯವಸ್ಥೆಯ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿಕೊಡಬೇಕು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ನಡೆಸುವಂತೆ ತಾಕೀತು ಮಾಡಬೇಕು. 

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳಲು ಕಾರಣ. 

ಇದನ್ನೂ ಓದಿ: ಹರಿಯುವ ನೀರಲ್ಲಿ ಕರೋನಾ ಹರಡುತ್ತಾ..? ತಜ್ಞರ ಉತ್ತರ ಏನು..?

ಕಳೆದ ಒಂದೆರಡು ತಿಂಗಳ ಅವಧಿಯಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆ, ಪರೀಕ್ಷೆ ಇಲ್ಲದೆ ಕರ್ನಾಟಕಕ್ಕೆ ಬಂದಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ರಾಜಧಾನಿಯಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತರರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ಕೂಡಾ ನಿರ್ಬಂಧಿಸಬೇಕು. 

ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 25 ಅಮಾಯಕರನ್ನು ಬಲಿತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿಲ್ಲ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News