ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವೇತನ ಮಂಜೂರು ಮಾಡಲು ಸಿಎಂ ಸೂಚನೆ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು  ಸೂಚಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ.

Last Updated : Jun 13, 2019, 07:57 AM IST
ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವೇತನ ಮಂಜೂರು ಮಾಡಲು ಸಿಎಂ ಸೂಚನೆ title=

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡಲು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಬುಧವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಿಷಯಗಳ ಪರಿಶೀಲನೆಯ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ರಾಜ್ಯದ 55 ಲಕ್ಷ ವಿದ್ಯಾರ್ಥಿಗಳ ಪೈಕಿ ಈಗಾಗಲೇ 51 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಸೀಡಿಂಗ್ ಕಾರ್ಯ ಪೂರ್ಣಗೊಂಡಿದ್ದು, ಇನ್ನುಳಿದ 4 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಕಾರ್ಯವನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳು, ಸಿಇಒಗಳು ಕಡ್ಡಾಯವಾಗಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಆಹಾರದ ಗುಣಮಟ್ಟ, ಸ್ವಚ್ಛತೆ, ವಿದ್ಯಾರ್ಥಿಗಳಿಗೆ ನೀಡುವ ಸೌಲಭ್ಯ ಹಾಗೂ ಮೂಲಸೌಕರ್ಯಗಳ ಬಗ್ಗೆ  ಪರಿಶೀಲನೆ ನಡೆಸಬೇಕು. ಕೆಲವು ಹಾಸ್ಟೆಲ್ ಗಳಲ್ಲಿ ಅನಧಿಕೃತವಾಗಿ ಕೆಲವರು ಉಳಿದುಕೊಂಡಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಎಚ್ಚರಿಕೆ ನೀಡಿದರು.

ಎಸ್.ಸಿ.ಎಸ್. ಪಿ. / ಟಿ ಎಸ್ ಪಿ ಯೋಜನೆಗಳಡಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸಲು ಇದೇ ವೇಳೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

Trending News