'ಕರ್ನಾಟಕ ಭಾರತ ಗೌರವ ಕಾಶಿ ದರ್ಶನ'ದ  ಸಹಾಯ ಧನ  7500 ರೂ.ಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

ಕರ್ನಾಟಕ ಭಾರತ ಗೌರವ ಕಾಶಿ ದರ್ಶನ'ದ  ಸಹಾಯ ಧನ  7500 ರೂ.ಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಕುರಿತಾಗಿ ಪ್ರತಿಕಾ ಪ್ರಕಟಣೆ ನೀಡಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ  ಕರ್ನಾಟಕ ಭಾರತ ಗೌರವ ಕಾಶಿ ದರ್ಶನಕ್ಕೆ ಹಲವು ಮಹತ್ವದ ನಿರ್ಧಾರಗಳನ್ನು ಘೋಷಿಸಿದ್ದಾರೆ.

Written by - Bhavya Sunil Bangera | Edited by - Manjunath N | Last Updated : Aug 9, 2023, 09:57 PM IST
  • ಈ ಯೋಜನೆ ಅಡಿಯಲ್ಲಿ ಸದರಿ ಪ್ಯಾಕೇಜ್ ಗೆ ಈ ಹಿಂದೆ ನಿಗದಿ ಮಾಡಲಾಗಿದ್ದ ಸರ್ಕಾರದಿಂದ ನೀಡಲಾಗುವ ಸಹಾಯ ಧನ ರೂ.5000/- ಗಳ ಮೊತ್ತವನ್ನು ರೂ.7500/- ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ.
  • 3. ಸದರಿ ಪ್ಯಾಕೇಜ್ ಯೋಜನೆಯಲ್ಲಿ ಹೊಸದಾಗಿ LHB ಕೋಚ್ ಗಳನ್ನು ಅಳವಡಿಸಲಾಗಿದ್ದು,
  • ಇದರಲ್ಲಿ ಸುಸಜ್ಜಿತವಾದ ಅಡುಗೆ ಮನೆ ಹಾಗೂ ಇಬ್ಬರು ವೈದ್ಯರು ಸಹ ಯಾತ್ರಾರ್ಥಿಗಳ ಜೊತೆಯಲ್ಲಿ ಸೇವಾ ನಿರತರಾಗಿರುತ್ತಾರೆ.
  'ಕರ್ನಾಟಕ ಭಾರತ ಗೌರವ ಕಾಶಿ ದರ್ಶನ'ದ  ಸಹಾಯ ಧನ  7500 ರೂ.ಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ title=

ಬೆಂಗಳೂರು: ಕರ್ನಾಟಕ ಭಾರತ ಗೌರವ ಕಾಶಿ ದರ್ಶನ'ದ  ಸಹಾಯ ಧನ  7500 ರೂ.ಗೆ ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಕುರಿತಾಗಿ ಪ್ರತಿಕಾ ಪ್ರಕಟಣೆ ನೀಡಿರುವ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ  ಕರ್ನಾಟಕ ಭಾರತ ಗೌರವ ಕಾಶಿ ದರ್ಶನಕ್ಕೆ ಹಲವು ಮಹತ್ವದ ನಿರ್ಧಾರಗಳನ್ನು ಘೋಷಿಸಿದ್ದಾರೆ.

ಅದರಲ್ಲಿ ಅವರ ಮಹತ್ವದ ಘೋಷಣೆಗಳು ಹೀಗಿವೆ...

1.    ಕರ್ನಾಟಕ ಭಾರತ ಗೌರವ ಕಾಶಿ ದರ್ಶನ'' ರೈಲು ಯಾತ್ರೆಯ ಮೂಲಕ ತೆರಳುವ ಪುಣ್ಯ ಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್-ರಾಜ್ ಕ್ಷೇತ್ರಗಳ ಪ್ಯಾಕೇಜ್ ಯಾತ್ರೆಯಲ್ಲಿ ಈ ಬಾರಿ ಬಿಹಾರದ ಗಯಾ ಕ್ಷೇತ್ರದ ದರ್ಶನ ಸೇರ್ಪಡೆಗೊಳಿಸಿ, 8 ದಿನಗಳ ಪ್ರವಾಸವನ್ನು 9 ದಿನಗಳಿಗೆ ಹೆಚ್ಚಿಸಲಾಗಿದೆ. 

2. ಈ ಯೋಜನೆ ಅಡಿಯಲ್ಲಿ ಸದರಿ ಪ್ಯಾಕೇಜ್ ಗೆ ಈ ಹಿಂದೆ  ನಿಗದಿ ಮಾಡಲಾಗಿದ್ದ ಸರ್ಕಾರದಿಂದ ನೀಡಲಾಗುವ ಸಹಾಯ ಧನ  ರೂ.5000/- ಗಳ ಮೊತ್ತವನ್ನು ರೂ.7500/- ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ.

3. ಸದರಿ ಪ್ಯಾಕೇಜ್ ಯೋಜನೆಯಲ್ಲಿ ಹೊಸದಾಗಿ LHB ಕೋಚ್ ಗಳನ್ನು ಅಳವಡಿಸಲಾಗಿದ್ದು, ಇದರಲ್ಲಿ ಸುಸಜ್ಜಿತವಾದ ಅಡುಗೆ ಮನೆ ಹಾಗೂ ಇಬ್ಬರು ವೈದ್ಯರು ಸಹ ಯಾತ್ರಾರ್ಥಿಗಳ ಜೊತೆಯಲ್ಲಿ ಸೇವಾ ನಿರತರಾಗಿರುತ್ತಾರೆ.  

4.     ಆಗಸ್ಟ್ ಮಾಹೆಯಲ್ಲಿ ಹೊರಡಲಿರುವ 5ನೇ ಟ್ರಿಪ್ ದಿನಾಂಕ 29.08.2023 ರಂದು ನಿರ್ಗಮನವಾಗಿ ದಿನಾಂಕ 06.09.2023 ರಂದು ಆಗಮನ  ಅಂತೆಯೇ ಸೆಪ್ಟೆಂಬರ್ ಮಾಹೆಯಲ್ಲಿ ಹೊರಡಲಿರುವ 6ನೇ ಟ್ರಿಪ್ ದಿನಾಂಕ 23.09.2023 ರಂದು ನಿರ್ಗಮನ, ದಿನಾಂಕ 02.10.2023 ರಂದು ಆಗಮನವಿರುತ್ತದೆ.

ಇದನ್ನೂ ಓದಿ: ದೇಶದ ಮುಂದಿನ ಪ್ರಧಾನಿ ಮೋದಿಯಾಗಲ್ಲ, ಮಹಿಳೆ ಎಂದು ಅಚ್ಚರಿಯ ಭವಿಷ್ಯ ನುಡಿದ ಕಾಲಜ್ಞಾನಿ..!

5. ಸದರಿ ಯಾತ್ರೆಗೆ ತುಮಕೂರಿನಲ್ಲಿ ಬೋರ್ಡಿಂಗ್ ಮತ್ತು ಡಿ-ಬೋರ್ಡಿಂಗ್ ವ್ಯವಸ್ಥೆಯನ್ನು ಹೊಸದಾಗಿ ಕಲ್ಪಿಸಲಾಗಿರುತ್ತದೆ.

6. ಅಯೋಧ್ಯೆಗೆ ಭೇಟಿ ನೀಡುವ ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಭವನ ವಸತಿ ಸಂಕೀರ್ಣ ನಿರ್ಮಾಣ ಮಾಡಲು ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿಯವರಿಗೆ ಸುಮಾರು 5 ಎಕರೆ ಭೂಮಿ ಮಂಜೂರು ಮಾಡುವಂತೆ ಪತ್ರ ಬರೆದು ಕೋರಲಾಗುವುದು  ಹಾಗೂ  ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆರವರು ಸಮನ್ವಯ ಸಾಧಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

7.ರಾಜ್ಯದ ದೇವಸ್ಥಾನಗಳ ಪೂಜಾ ಕಾರ್ಯ ಇತ್ಯಾದಿಗಳ ಕೆಲಸಕ್ಕೆಂದು ಸರ್ಕಾರ ಬಿಡುಗಡೆ ಮಾಡುವ ʼತಸ್ತಿಕ್ʼ ಹಣವನ್ನು ನೇರವಾಗಿ ಅರ್ಚಕರ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಸೂಚನೆ ನೀಡಲಾಗಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News