ಬೆಂಗಳೂರು: ಟೀಕಿಸುವ ಭರದಲ್ಲಿ ವೈಯಕ್ತಿಕವಾಗಿ ನಿಂದನೆ ಮಾಡಿದ ಬಳಿಕ ಕ್ಷಮೆಯಾಚಿಸಿದ ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರ ನಡೆಯನ್ನು ಸಿಎಂ ಸಿದ್ದರಾಮಯ್ಯನವರು ಸ್ವಾಗತಿಸಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ಅವರು, ʼರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆʼ ಎಂದು ಹೇಳಿದ್ದಾರೆ.
ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ಅರವಿಂದ ಬೆಲ್ಲದ್ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ನಟ ದರ್ಶನ್ಗೆ ಬಿಡುತ್ತಿಲ್ಲ ಆರೋಗ್ಯ ಸಮಸ್ಯೆ
ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ ಅಂತಾ ಹೇಳಿದ್ದಾರೆ.
ಮೊದಲ ಬಾರಿಗೆ ಅರವಿಂದ್ ಬೆಲ್ಲದ್ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಅರವಿಂದ್ ಅವರ ತಂದೆ ಚಂದ್ರಕಾಂತ್ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ ಅಂತಾ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ: ಸಿಎಂ ವಿರುದ್ಧ ಏಕವಚನ ಪದ ಬಳಕೆ, ಪತ್ರದ ಮೂಲಕ ಕ್ಷಮೆಯಾಚಿಸಿದ ಅರವಿಂದ್ ಬೆಲ್ಲದ
ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.