ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜೂನ್ 16 ರಿಂದ ಆರಂಭಗೊಳ್ಳಲಿದೆ. ಮೊದಲು ಜೂನ್ 15 ರಂದು ನಿಗದಿಯಾಗಿತ್ತು. ಆದರೆ ಕೆಲವೊಂದು ಗೊಂದಲದ ಹಿನ್ನಲೆಯಲ್ಲಿ ಒಂದು ದಿನ ಮುಂದೂಡಲಾಗಿದೆ.
ಗೃಹ ಲಕ್ಷ್ಮೀ ಯೋಜನೆ ಯಿಂದ ರಾಜ್ಯದ 75% ದಿಂದ 78% ಕುಟುಂಬಗಳು ಇದರಿಂದ ಲಾಭ ಪಡೆಯಲಿವೆ. ಗೃಹ ಲಕ್ಷ್ಮೀ ಯೋಜನೆಗೆ 30 ಸಾವಿರ ಕೋಟಿ ಅನುದಾನ ಬೇಕಿದೆ. ಕಾರ್ಯಕ್ರಮ ಬೆಳಗಾವಿ ಯಲ್ಲಿ ನಡೆದಿದ್ದು, ಆಗಸ್ಟ್
17 ಅಥವಾ 18 ರಂದು ಉದ್ಘಾಟನೆ ನಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಇದನ್ನೂ ಓದಿ:Dog Facts: ನಾಯಿಗಳು ಟೈರ್ ಅಥವಾ ಕಂಬದ ಮೇಲೆ ಏಕೆ ಮೂತ್ರ ವಿಸರ್ಜಿಸುತ್ತವೆ? 99% ಜನರಿಗೆ ಉತ್ತರ ತಿಳಿದಿಲ್ಲ!
ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವವರು ಗಮನಿಸಬೇಕಾದ ಅಂಶಗಳು ಇವು
*ಅರ್ಜಿಯನ್ನು ಆನ್ ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಸಲ್ಲಿಕೆ ಮಾಡಬಹುದಾಗಿದೆ ಎಂದು ತಿಳಿಸಿದರು.
*ಶುಕ್ರವಾರ ಮಧ್ಯಾಹ್ಮ 1.30 ಗೆ ಅರ್ಜಿ ಸಲ್ಲಿಕೆಗೆ ಸಿಗಲಿದೆ ಚಾಲನೆ
*ಅರ್ಜಿ ಸಲ್ಲಿಕೆಗೆ ಎಸ್ ಎಂ ಎಸ್ ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ ಅಟೋ ಜನರೇಟೆಡ್ ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
*ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿದೆ.
*ಮಂಜೂರಾತಿಯ ನಂತರ ಡಿಬಿಟಿ ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ
*ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗಿಲ್ಲ,ಬದಲಾಗಿ ಸಂಪೂರ್ಣ ಉಚಿತವಾಗಿದೆ.
*ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ
*ಅರ್ಜಿದಾರರು ಗೊಂದಲ ಇದ್ದರೆ 1902 ಕರೆ ಮಾಡಿ ಮಾಹಿತಿ ಪಡೆಯಬಹುದು.
ಇದನ್ನೂ ಓದಿ: ಅಧಿಕಾರ ದುರ್ಬಳಿಕೆ : ಬಿಬಿಎಂಪಿ ಅಧಿಕಾರಿಗಳ ಜೊತೆ ಕಾಂಗ್ರೆಸ್ ನ ಸುರ್ಜೆವಾಲಾ ಮೀಟಿಂಗ್!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.