ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಸಂಸ್ಥೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡುವಂತೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ನಿಯೋಗ ಭೇಟಿ ಮಾಡಿತು. pic.twitter.com/RWzAMaY1VO
— CM of Karnataka (@CMofKarnataka) August 27, 2018
ಟೊಯೋಟ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕಿಟೋ ತಚಿಬಾನ ಹಾಗೂ ನಿರ್ದೇಶಕ ಮತ್ತು ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ಆಗಸ್ಟ್ 27ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಈ ಮಾತನ್ನು ಹೇಳಿದರು.
ವಾಹನಗಳ ಮೇಲಿನ ತೆರಿಗೆ ವೆಚ್ಚ ಶೇ. 43 ರಷ್ಟು ಹೆಚ್ಚಿಸಲಾಗಿದ್ದು, ಜಿ ಎಸ್ ಟಿ ಕಡಿಮೆ ಮಾಡಿಸುವಂತೆ ಸಂಸ್ಥೆಯ ನಿರ್ದೇಶಕರು ಮನವಿ ಮಾಡಿದರು. ಈ ಬಗ್ಗೆ ಮನವಿಯನ್ನು ಸಲ್ಲಿಸಿದಲ್ಲಿ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸುವುದಾಗಿ ಸಿಎಂ ಕುಮಾರಸ್ವಾಮಿ ಭರವಸೆ ನೀಡಿದರು.
Akito Tachibana, Managing Director, and Shekar Viswanathan, Vice Chairman of Toyota Kirloskar Motor Pvt Ltd today met Chief Minister HD Kumaraswamy and held a discussion. #CSR pic.twitter.com/cVpvywlAje
— CM of Karnataka (@CMofKarnataka) August 27, 2018