ಕಾಂಗ್ರೆಸ್ ಪಕ್ಷ ಸೇರಿದ ಯು.ಬಿ. ಬಣಕಾರ್, ಶ್ರೀನಿವಾಸ್, ಮಲ್ಲಿಕಾರ್ಜುನ ರೋಣಿ

ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರು ಕಾಂಗ್ರೆಸ್  ಸಿದ್ಧಾಂತ, ನಾಯಕತ್ವವನ್ನು ಒಪ್ಪಿ ಪಕ್ಷ ಸೇರ್ಪಡೆಯಾದರು.

Written by - Zee Kannada News Desk | Last Updated : Nov 22, 2022, 12:56 AM IST
  • ಬಿ.ಸಿ ಪಾಟೀಲ್ ಆಪರೇಷನ್ ಕಮಲಕ್ಕೆ ಒಳಗಾದ ವ್ಯಕ್ತಿ.
  • ದುಡ್ಡಿನ ಆಸೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಆತ ಜನಪ್ರತಿನಿಧಿ ಆಗಲು ಯೋಗ್ಯರಲ್ಲ.
  • ಶ್ರೀನಿವಾಸ್ ಅವರದು ರಾಜಕೀಯ ಮನೆತನ. ಕೂಡ್ಲಿಗಿ ಯಲ್ಲಿ ಅವರ ತಂದೆ ನಾಯಕರಾಗಿದ್ದರು.
ಕಾಂಗ್ರೆಸ್ ಪಕ್ಷ ಸೇರಿದ ಯು.ಬಿ. ಬಣಕಾರ್, ಶ್ರೀನಿವಾಸ್, ಮಲ್ಲಿಕಾರ್ಜುನ ರೋಣಿ title=
Photo Courtsey: Twitter

ಬೆಂಗಳೂರು: ಹಿರೇಕೇರೂರು ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ತಮ್ಮ ಅಪಾರ ಬೆಂಬಲಿಗರು ಕಾಂಗ್ರೆಸ್  ಸಿದ್ಧಾಂತ, ನಾಯಕತ್ವವನ್ನು ಒಪ್ಪಿ ಪಕ್ಷ ಸೇರ್ಪಡೆಯಾದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಇತರ ನಾಯಕರು ಪಕ್ಷದ ಬಾವುಟ ಹಾಗೂ ಶಾಲು ನೀಡಿ ಈ ನಾಯಕರು ಹಾಗೂ ಅವರ ಬೆಂಬಲಿಗರನ್ನು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಇದನ್ನೂ ಓದಿ : ಜನರ ಬದುಕು ಹಸನಾಗಲು ಕುಮಾರಣ್ಣ ಮತ್ತೊಮ್ಮೆ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಈ ಸಂದರ್ಭದಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

ಬಹಳ ಜನ ಕಾಂಗ್ರೆಸ್ ಖಾಲಿಯಾಗಿರುವ ಮನೆ. ಅಲ್ಲಿಗೆ ಯಾರು ಹೋಗುತ್ತಾರೆ. ಡಿ.ಕೆ. ಶಿವಕುಮಾರ್ ಎಲ್ಲರನ್ನೂ ಕರೆಯುತ್ತಿದ್ದಾರೆ ಎಂದು ಕೆಲವು ಸ್ನೇಹಿತರು ಮಾತನಾಡುತ್ತಿದ್ದಾರೆ.

ನಮ್ಮ ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ. ಇದನ್ನು ಒಂದೇ ಬಾರಿ ಬಿಡುಗಡೆ ಮಾಡುವುದಿಲ್ಲ. ಇಂದು ಶುಭ ಮುಹೂರ್ತ, ಶುಭ ಗಳಿಗೆಯಲ್ಲಿ ಬೇರೆ ಪಕ್ಷದ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.

ಹಿರೇಕೆರೂರಿನ ಮಾಜಿ ಶಾಸಕರಾದ ಯು.ಬಿ ಬಣಕಾರ್ ಅವರು ಬಹಳ ದಿನದಿಂದ ಪಕ್ಷ ಸೇರ್ಪಡೆಯಾಗ ಬೇಕಿತ್ತು. ಅವರ ತಂದೆ ಕೂಡ ಜನರ ಸೇವೆ ಮಾಡಿದ್ದು, ಇಂದು ಅವರ ಮಗ ಬಿಜೆಪಿಯಲ್ಲಿ ಅಧಿಕಾರ ತ್ಯಾಗ ಮಾಡಿ ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಗೆ  ಅರ್ಜಿ ಹಾಕಿದ್ದರು.

ನಾನು ಪಕ್ಷದ ಹಿರಿಯ ನಾಯಕರು ಹಾಗೂ ಕೋಳಿವಾಡ ಅವರು, ಡಿ.ಆರ್. ಪಾಟೀಲ್ ಸೇರಿದಂತೆ ಆ ಭಾಗದ ಪಕ್ಷದ ಮುಖಂಡರ ಜತೆ ಚರ್ಚೆ ಮಾಡಿದ್ದೇನೆ. ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ನಾಯಕರು ಇವರ ಸೇರ್ಪಡೆಗೆ ಒಮ್ಮತದ ಒಪ್ಪಿಗೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಇಂದು ಅವರಿಗೆ ತುಂಬು ಹೃದಯದ ಸ್ವಾಗತ ಬಯಸುತ್ತೇನೆ. ಬಣಕಾರ್ ಅವರ ಜತೆ ಮಂಜಣ್ಣ, ಶಿವರಾಜ್ ಹರಿಜನ್, ಮಹೇಂದ್ರ, ಹೇಮಣ್ಣ, ಷನ್ಮುಗಯ್ಯ ಅವರು ಸೇರಿದಂತೆ ಹಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇನೆ.

ಇನ್ನು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಹಿರಿಯ ನಾಯಕರ ಎನ್. ಟಿ ಬೊಮ್ಮಣ್ಣ ಅವರ ಪುತ್ರ ಡಾ. ಶ್ರೀನಿವಾಸ್ ಅವರು ಕೂಡ ನೂರಾರು ಬೆಂಬಲಿಗೆರೊಂದಿಗೆ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ಅವರ ಜತೆ ಎನ್. ಟಿ ತಮ್ಮಣ್ಣ, ಪಂಪಾಪತಿ, ಎಂ. ಪಿ ಚಂದ್ರಣ್ಣ, ಬಸವರಾಜ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. 

ಇನ್ನು ವಿಜಯಪುರದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ರೋಣಿ ಅವರು  ಪಕ್ಷ ಸೇರ್ಪಡೆ ಆಗುತ್ತಿದ್ದಾರೆ. ನಮ್ಮ ಪಕ್ಷದ ನಾಯಕರು, ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿ ಇವರುಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ.

ಈ ನಾಯಕರೆಲ್ಲರೂ ಪಕ್ಷದ ಸಿದ್ಧಾಂತ ಒಪ್ಪಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವನ್ನು ಒಪ್ಪಿ, ಯಾವುದೇ ಷರತ್ತು ಇಲ್ಲದೇ ಪಕ್ಷ ಸೇರ್ಪಡೆಯಾಗುತ್ತಿದ್ದಾರೆ.

ಈ ಸಂದರ್ಭದಲ್ಲಿ ಈ ಎಲ್ಲಾ ನಾಯಕರಿಗೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಪರವಾಗಿ ಪಕ್ಷಕ್ಕೆ ತುಂಬು ಹೃದಯದಿಂದ ಸ್ವಾಗತ ಮಾಡಿಕೊಳ್ಳುತ್ತಿದ್ದೇವೆ.'

ಯು.ಬಿ ಬಣಕಾರ್ ಅವರ ಮಾತುಗಳು:

ಸಾಮಾನ್ಯ ಕಾರ್ಯಕರ್ತನಾಗಿ ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಇದಕ್ಕೆ ಅವಕಾಶ ಮಾಡಿ ಕೊಟ್ಟ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ, ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ.

ನಾನು ಕಳೆದ 30 ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಹಲವು ಸ್ಥಾನಗಳಲ್ಲಿ ಕೆಲಸ ಮಾಡಿದ್ದೇನೆ. 2018ರಲ್ಲಿ ಬಿ.ಸಿ ಪಾಟೀಲ್ ಅವರು ಈ ಎಲ್ಲಾ ನಾಯಕರ ಬೆಂಬಲದಿಂದ ಗೆದ್ದಿದ್ದರು. ಆದರೆ ಅಧಿಕಾರ ಆಸೆಗೆ ಪಕ್ಷ ತೊರೆದರು. ಅದೇ ಹಿರೇಕೆರೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ. ನನ್ನ ಗುರಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ನಿಮ್ಮ ಪ್ರೀತಿ, ವಿಶ್ವಾಸ, ನಂಬಿಕೆಗೆ ಧಕ್ಕೆ ಬಾರದಂತೆ ಕೆಲಸ ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳುತ್ತೇನೆ.'

ಇದನ್ನೂ ಓದಿ : ಕಾಂತಾರ ಸಿನಿಮಾ ಸ್ಪೂರ್ತಿದಾಯಕವಾಗಿದೆ ಎಂದ ಕಮಲ್ ಹಾಸನ್

ಸಿದ್ದರಾಮಯ್ಯ ಅವರ ಮಾತುಗಳು:

ಕಾಂಗ್ರೆಸ್ ಪಕ್ಷ ಸಿದ್ಧಾಂತ, ನಾಯಕತ್ವ ನಂಬಿ ಬಿಜೆಪಿ, ಜೆಡಿಎಸ್ ತೊರೆದು, ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ.

ಬಣಕಾರ್ ಅವರು ಬಿಜೆಪಿ ತೊರೆದು ಬೇಷರತ್ತಾಗಿ ಪಕ್ಷ ಸೇರುತ್ತಿದ್ದಾರೆ. ಈ ಸಂದರ್ಭದಲ್ಲಿ ನಾನು ಅವರನ್ನು ಸ್ವಾಗತಿಸಿ ಶುಭವಾಗಲಿ ಎಂದು ಹಾರೈಸುತ್ತೇನೆ.

ಡಾ. ಶ್ರೀನಿವಾಸ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇವರು ಬೇಷರತ್ತಾಗಿ ಕಾಂಗ್ರೆಸ್ ಸೇರುತ್ತಿದ್ದಾರೆ. ನಾನು ಅವರನ್ನು ಸ್ವಾಗತಿಸುತ್ತೇನೆ. ಮಲ್ಲಿಕಾರ್ಜುನ ರೊಣಿ ಅವರು ನಮ್ಮ ಪಕ್ಷದಲ್ಲೇ ಇದ್ದವರು. ಅವರು ಕಳೆದ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷೇತ್ರವಾಗಿ ಸ್ಪರ್ಧೆ ಮಾಡಿದ್ದರು. ಈಗ ಮತ್ತೆ ಕಾಂಗ್ರೆಸ್ ಸೇರುತ್ತಿದ್ದಾರೆ. ಅವರನ್ನು ಹಾರ್ದಿಕವಾಗಿ ಸ್ವಾಗತ ಮಾಡುತ್ತಿದ್ದೇನೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ಆಪರೇಶನ್ ಕಮಲ ಮೂಲಕ ಶಾಸಕರಿಗೆ ಕೋಟ್ಯಂತರ ರೂಪಾಯಿ ಕೊಟ್ಟು ಪಕ್ಷಕ್ಕೆ ಕರೆದುಕೊಂಡು ಅಧಿಕಾರ ಹಿಡಿದರು. ಮೂರು ವರ್ಷಗಳಿಂದ ಅಧಿಕಾರದಲ್ಲಿ ಇರುವ ಬಿಜೆಪಿ ಸರ್ಕಾರ ಲೂಟಿ ಹೊಡೆಯುವುದು ಸುಳ್ಳು ಹೇಳುವುದು ಇವರ ಸಾಧನೆ. ಈ ಸರ್ಕಾರವನ್ನು 40% ಸರ್ಕಾರ ಎಂದು ಹೆಸರು ಪಡೆದಿದೆ. ಹಣ ನೀಡದೆ ಈ ಸರ್ಕಾರದಲ್ಲಿ ಯಾವುದೇ ಕೆಲಸ, ನೇಮಕಾತಿ, ವರ್ಗಾವಣೆ ಆಗುವುದಿಲ್ಲ. ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಮಂತ್ರಿಗಳು ಲೂಟಿಗೆ ಇಳಿದಿದ್ದು, ರಾಜ್ಯ ಹಾಳು ಮಾಡುತ್ತಿದ್ದಾರೆ. 

ಮತ್ತೊಂದೆಡೆ ದ್ವೇಷದ ರಾಜಕಾರಣ ಮಾಡಿ ಸಮಾಜದಲ್ಲಿ ಸಾಮರಸ್ಯ ನಾಶ ಮಾಡುತ್ತಿದ್ದಾರೆ. ಜನ ಭಯದಿಂದ ಬದುಕುವ ಸ್ಥಿತಿ ನಿರ್ಮಾಣವಾಗಿದೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯ ನಾಶವಾಗಲಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕು.

ಬಣಕಾರ್ ಅವರು  ಹಿರೇಕೆರೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸುವುದು ಗುರಿ ಎಂದರು. ಅದೇ ರೀತಿ ನಾವೆಲ್ಲರೂ ಬಿಜೆಪಿ ಸೋಲಿಸಲು ಹೋರಾಡಬೇಕು. ಇಂತಹ ಕೆಟ್ಟ, ಕೋಮುವಾದಿ ಸರ್ಕಾರವನ್ನು ನಾವು ನೋಡಿರಲಿಲ್ಲ. ರಾಜ್ಯ, ಜನರು, ಸಂವಿಧಾನ, ಪ್ರಜಾಪ್ರಭುತ್ವ ಉಳಿಸಬೇಕಾದರೇ ಬಿಜೆಪಿ ಸೋಲಿಸಬೇಕು. ಹೀಗಾಗಿ ಹಿರೇಕೆರೂರು ಕ್ಷೇತ್ರದಲ್ಲಿ ಬಣಕಾರ್ ಅವರ ಆಗಮನದಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಿದ್ದು, ಪಕ್ಷ ಗೆಲ್ಲಿಸಲು ಶ್ರಮಿಸಿ. 

ಬಿ.ಸಿ ಪಾಟೀಲ್ ಆಪರೇಷನ್ ಕಮಲಕ್ಕೆ ಒಳಗಾದ ವ್ಯಕ್ತಿ. ದುಡ್ಡಿನ ಆಸೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಆತ ಜನಪ್ರತಿನಿಧಿ ಆಗಲು ಯೋಗ್ಯರಲ್ಲ. 

ಶ್ರೀನಿವಾಸ್ ಅವರದು ರಾಜಕೀಯ ಮನೆತನ. ಕೂಡ್ಲಿಗಿ ಯಲ್ಲಿ ಅವರ ತಂದೆ ನಾಯಕರಾಗಿದ್ದರು. ಅಲ್ಲಿಯೂ ಈ ಬಾರಿ ಕಾಂಗ್ರೆಸ್ ಗೆಲ್ಲಬೇಕು. ಕೋಮುವಾದಿ ಬಿಜೆಪಿ ಮಣಿಸಲು ಕಾಯಾ ವಾಚಾ ಮನಸಾ ಶ್ರಮಿಸಬೇಕು. 

ಮಲ್ಲಿಕಾರ್ಜುನ ರೊಣಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಇದ್ದವರು. ಈಗ ಮತ್ತೆ ಕಾಂಗ್ರೆಸ್ ಸೇರುತ್ತಿದ್ದಾರೆ. ಬಿಜಾಪುರದಲ್ಲಿ ಗಾಣಿಗ ಸಮಾಜ ರಾಜ್ಯ ಕಾರ್ಯಾಧ್ಯಕ್ಷರಾಗಿದ್ದಾರೆ. ಇವರ ಸೇರ್ಪಡೆಯಿಂದ ಪಕ್ಷಕ್ಕೆ ಶಕ್ತಿ ಹೆಚ್ಚಿದೆ. 

ಈ ಸಂದರ್ಭದಲ್ಲಿ ಈ ಎಲ್ಲಾ ನಾಯಕರು ಹಾಗೂ ಅವರ ಬೆಂಬಲಿಗರಿಗೆ ಸ್ವಾಗತ ಬಯಸುತ್ತೇನೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News