ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ರೈತರಿಗಿಲ್ಲಿವೆ ವಿವಿಧ ಸೌಲಭ್ಯಗಳು...!

ಧಾರವಾಡ ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ಹಾಗೂ ರೈತ ಉತ್ಪಾದಕ ಸಂಘದ ರೈತರಿಗೆ ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2020-21 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.

Last Updated : Jul 1, 2020, 09:43 PM IST
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ರೈತರಿಗಿಲ್ಲಿವೆ ವಿವಿಧ ಸೌಲಭ್ಯಗಳು...! title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಧಾರವಾಡ ಜಿಲ್ಲೆಯ ತೋಟಗಾರಿಕೆ ಬೆಳೆಗಾರರಿಗೆ ಹಾಗೂ ರೈತ ಉತ್ಪಾದಕ ಸಂಘದ ರೈತರಿಗೆ ಧಾರವಾಡ ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ 2020-21 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.

ಆಸಕ್ತ ರೈತರು ಸಣ್ಣ ನರ್ಸರಿ ಸ್ಥಾಪನೆ, ಹಣ್ಣು (ಬಾಳೆ, ಮಾವು), ಹೂ (ಗುಲಾಬಿ, ಸುಗಂಧರಾಜ, ಗ್ಲ್ಯಾಡಿಯೋಲಸ್, ಆಸ್ಟರ್, ಚೆಂಡು ಹೂ, ಸೇವಂತಿಗೆ), ತರಕಾರಿಗಳ ಪ್ರದೇಶ ವಿಸ್ತರಣೆ, ನೀರು ಸಂಗ್ರಹಣಾ ಘಟಕಗಳು, ಸಂರಕ್ಷಿತ ಬೇಸಾಯದಡಿ (ಹಸಿರುಮನೆ, ನೆರಳುಪರದೆ, ಪ್ಲಾಸ್ಟಿಕ ಮಲ್ಚಿಂಗ್), ಯಾಂತ್ರೀಕರಣ ಘಟಕದಡಿ 20 PTOHP ಸಾಮಥ್ರ್ಯಕ್ಕಿಂತ ಕಡಿಮೆಯ ಟ್ರ್ಯಾಕ್ಟರ್, ಕೊಯ್ಲೋತ್ತರ ನಿರ್ವಹಣೆ ಅಡಿ ಪ್ಯಾಕ್‍ಹೌಸ್, ಈರುಳ್ಳಿ ಶೇಖರಣಾ ಘಟಕ ಮತ್ತು ತೋಟಗಾರಿಕೆ ಉತ್ಪನ್ನಗಳ ಮಾರುಕಟ್ಟೆಗಾಗಿ ತಳ್ಳುವ ಗಾಡಿ ಘಟಕಗಳಿಗೆ ಸಹಾಯಧನ ಸೌಲಭ್ಯಗಳಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಮತ್ತು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ಸಂಪರ್ಕಿಸಿ, ಜುಲೈ.15, 2020 ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ತೋಟಗಾರಿಕೆ ಇಲಾಖೆಯ (ಜಿ.ಪಂ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Trending News