ಲೋಕಸಭಾ ಚುನಾವಣೆ: ಧಾರವಾಡ, ದಾವಣಗೆರೆ ಕ್ಷೇತ್ರಗಳಿಗೆ 'ಕೈ' ಅಭ್ಯರ್ಥಿ ಘೋಷಣೆ

ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ವಿಳಂಬವಾದ ಕಾರಣ ಅಸಮಾಧಾನಗೊಂಡಿದ್ದ ವಿನಯ್ ಕುಲಕರ್ಣಿ ಬುಧವಾರ ಪಕ್ಷೇತರ ಅಭ್ಯರ್ಥಿಯಾಗಿ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸುವುದಾಗಿ ಘೋಷಿಸಿದ್ದರು.  

Last Updated : Apr 3, 2019, 07:36 AM IST
ಲೋಕಸಭಾ ಚುನಾವಣೆ: ಧಾರವಾಡ, ದಾವಣಗೆರೆ ಕ್ಷೇತ್ರಗಳಿಗೆ 'ಕೈ' ಅಭ್ಯರ್ಥಿ ಘೋಷಣೆ title=

ಬೆಂಗಳೂರು: 2019ರ ಲೋಕಸಭಾ ಚುನಾವಣೆಗೆ ಧಾರವಾಡ, ದಾವಣಗೆರೆ ಕ್ಷೇತ್ರಗಳಿಗೆ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. 

ಮಂಗಳವಾರ ರಾತ್ರಿ ಧಾರವಾಡ, ದಾವಣಗೆರೆ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಧಾರವಾಡ ಕ್ಷೇತ್ರದಿಂದ ವಿನಯ್ ಕುಲಕರ್ಣಿ ಅವರಿಗೆ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಹೆಚ್.ಪಿ. ಮಂಜಪ್ಪ ಅವರಿಗೆ ಟಿಕೆಟ್ ನೀಡಿದೆ.

ಭಾರೀ ಕುತೂಹಲ ಮೂಡಿಸಿದ್ದ ಧಾರವಾಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಪಡೆಯುವಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಯಶಸ್ವಿಯಾಗಿದ್ದಾರೆ. 2014ರ ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದ ಬಿಜೆಪಿಯ ಪ್ರಹ್ಲಾದ್ ಜೋಶಿ ಹಾಗೂ ಕಾಂಗ್ರೆಸ್ ಪಕ್ಷದ ವಿನಯ್ ಕುಲಕರ್ಣಿ ಈ ಚುನಾವಣೆಯಲ್ಲಿ ಮತ್ತೆ ಸೆಣಸಲಿದ್ದಾರೆ.

ಧಾರವಾಡ ಲೋಕಸಭಾ ವ್ಯಾಪ್ತಿಗೆ ಒಳಪಡುವ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್‌ ಶಾಸಕರಿದ್ದಾರೆ. ಇನ್ನುಳಿದ ಧಾರವಾಡದ ಐದು, ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಶಾಸಕರಿದ್ದಾರೆ. ಅಷ್ಟೇ ಅಲ್ಲದೇ ಅಲ್ಪಸಂಖ್ಯಾತರು ಹೆಚ್ಚಾಗಿದ್ದು, ಸಹಜವಾಗಿಯೇ ಉಭಯ ಪಕ್ಷಗಳ ನಡುವೇ ತೀವ್ರ ಪೈಪೋಟಿ ಇದೆ.

Trending News