ಮುಂಬೈ: ಮೈತ್ರಿ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಇದರಿಂದ ಬೇಸರಗೊಂಡು ಜೆಡಿಎಸ್ನ ಮೂವರು ಕಾಂಗ್ರೆಸ್ನ 11 ಶಾಸಕರು ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.
ಮುಂಬೈ ಹೋಟೆಲ್ನಲ್ಲಿ ಸುದ್ದಿಸಂಸ್ಥೆ ಎಎನ್ಐ ಜೊತೆಗೆ ಮಾತನಾಡಿದ ಕೆ.ಆರ್. ಪೇಟೆ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರಿಂದ ಅಸಮಾಧಾನಗೊಂಡು ತಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.
JDS leader Narayan Gowda, in Mumbai: We've resigned from MLA post due to lack of development in the state. Karnataka CM travelled abroad without consultation with MLAs, no work was progressing in the state. We will stay here for 2 days and then we will return. pic.twitter.com/oV3zGhNkpa
— ANI (@ANI) July 9, 2019
ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಶಾಸಕರೆಲ್ಲ ಬಿಜೆಪಿ ಸೇರುವ ಬಗ್ಗೆ ಪ್ರತಿಕ್ರಿಯಿಸಿದ ನಾರಾಯಣ ಗೌಡ, ನಾವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇವೆ. ಆದರೆ ಪಕ್ಷಕ್ಕೆ ರಾಜೀನಾಮೆ ನೀಡಿಲ್ಲ ಎಂದರು. ಇದೇ ಸಂದರ್ಭದಲ್ಲಿ ಮುಂಬೈನಲ್ಲಿ ವಾಸ್ತವ್ಯ ಹೂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಒಂದೆರಡು ದಿನಗಳಲ್ಲಿ ಕರ್ನಾಟಕಕ್ಕೆ ವಾಪಸ್ ಆಗುವುದಾಗಿ ತಿಳಿಸಿದರು.