ಬೆಂಗಳೂರು: ಕೆಎಂಎಫ್ಗೆ ಸಂಬಂಧಿಕರನ್ನು ನೇಮಿಸುವ ಬದಲು ಸಚಿವ ಸಂಪುಟ ರಚನೆ ಮಾಡಿದ್ದರೆ ಪ್ರವಾಹ ಪರಿಸ್ಥಿತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎದುರಿಸಬಹುದಿತ್ತಲ್ಲವೇ ಏಕಚಕ್ರಾಧಿಪತಿ ಯಡಿಯೂರಪ್ಪನವರೇ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಲಾತಾಣದ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.
ಕೆಎಂಎಫ್ಗೆ ಸಂಬಂಧಿಕರನ್ನು ನೇಮಿಸುವ ಬದಲು ಸಚಿವ ಸಂಪುಟ ರಚನೆ ಮಾಡಿದ್ದರೆ ಪ್ರವಾಹ ಪರಿಸ್ಥಿತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಎದುರಿಸಬಹುದಿತ್ತಲ್ಲವೇ ಏಕಚಕ್ರಾಧಿಪತಿಗಳೇ?@BSYBJP ಅವರೇ, ಸಂಪುಟ ಸದಸ್ಯರ ಅನುಮೋದನೆಗೆ ಸಮಯವಿಲ್ಲದ ನಿಮ್ಮ ಹೈಕಮಾಂಡ್, ಕೆಎಂಎಫ್ಗೆ ಸದಸ್ಯರ ನೇಮಕಕ್ಕೆ ಆದ್ಯತೆ ನೀಡಲು ಹೇಳಿತ್ತೇ? pic.twitter.com/hfME8PhNUd
— Siddaramaiah (@siddaramaiah) August 9, 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸೋದರ ಸಂಬಂದಿಯನ್ನು ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಸಂಪುಟ ಸದಸ್ಯರ ಅನುಮೋದನೆಗೆ ಸಮಯವಿಲ್ಲದ ನಿಮ್ಮ ಹೈಕಮಾಂಡ್, ಕೆಎಂಎಫ್ಗೆ ಸದಸ್ಯರ ನೇಮಕಕ್ಕೆ ಆದ್ಯತೆ ನೀಡಲು ಹೇಳಿತ್ತೇ? ಎಂದು ಲೇವಡಿ ಮಾಡಿದ್ದಾರೆ.