ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ: ಸಿಎಂಗೆ ಯಡಿಯೂರಪ್ಪ ಸವಾಲು

ಕುಮಾರಸ್ವಾಮಿ ಅವರಿಗೆ ಧೈರ್ಯವಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

Last Updated : Jun 5, 2018, 08:20 PM IST
ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ: ಸಿಎಂಗೆ ಯಡಿಯೂರಪ್ಪ ಸವಾಲು title=

ಮೈಸೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತವರ ಟೀಂ ಏನಾಗುತ್ತೆ ಅನ್ನೋದು ಇನ್ನು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ. ಕುಮಾರಸ್ವಾಮಿ ಅವರಿಗೆ ಧೈರ್ಯವಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ, ಯಾರು ಹೆಚ್ಚು ಸ್ಥಾನ ಗೆಲ್ಲುತ್ತಾರೆ ನೋಡಿಯೇ ಬಿಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.

ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿ ಈಗ ನಾಟಕ ಮಾಡುತ್ತಿದ್ದಾರೆ. ಬಹುಮತ ಪಡೆಯುವಲ್ಲಿ ನಮ್ಮ ಪಕ್ಷ ವಿಫಲವಾಗಿದೆ. ಆದರೆ ಇನ್ನು ಕೆಲವೇ ತಿಂಗಳಲ್ಲಿ ಮತ್ತೆ ಚುನಾವಣೆ ನಡೆದೇ ನಡೆಯುತ್ತದೆ. ಬಿಜೆಪಿ 150 ಸ್ಥಾನಗಳನ್ನು ಗಳಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. 

ಯಡಿಯೂರಪ್ಪ ಅವರು ಮೂರು ದಿನ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹೆಲಿಕಾಪ್ಟರ್ ಓಡಾಟಕ್ಕೆ ಲಕ್ಷಗಟ್ಟಲೇ ಹಣ ಖರ್ಚು ಮಾಡಿದ್ದಾರೆ ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಹೆಲಿಕ್ಯಾಪ್ಟರ್ ನಲ್ಲಿ ಪ್ರಯಾನಿಸಿದ್ದರ ಬಗ್ಗೆ ನನಗೆ ಯಾಕೆ ಕೇಳುತ್ತೀರಿ? ಈಮಾತನ್ನು ನಿಮ್ಮ ಕಾರ್ಯದರ್ಶಿಗಳಿಗೆ ಕೇಳಿ. ಈ ಬಗ್ಗೆ ಬಹಿರಂಗ ಪತ್ರ ಬರೆಯುತ್ತೇನೆ ಎಂದು ಯಡಿಯೂರಪ್ಪ ಹೇಳಿದರು. 

Trending News