R Ashok: ವಕ್ಫ್ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
Channapatna bypoll: ಕುತಂತ್ರದಿಂದ ನಿಖಿಲ್ ಅವರನ್ನು ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ, ರಾಮನಗರದಲ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಸೋಲಿಸಿದರು. ಇವತ್ತು ಡಿಸಿಎಂ ಹುದ್ದೆಯಲ್ಲಿರುವ ವ್ಯಕ್ತಿ ನಿಖಿಲ್ ಅವರನ್ನು ಕಂದ, ಶಿಶು ಎಂದು ಕರೆಯುತ್ತಿದ್ದಾರೆ. ಆ ಶಿಶುವನ್ನು ಕುತಂತ್ರದಿಂದ ಸೋಲಿಸಿದ್ದು ಯಾರು? ಅಭಿಮನ್ಯು ಕೂಡ ಶಿಶುವೇ ಅಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
Waqf property issue: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು.
ನಾಲೆಗಾಗಿ ಜಮೀನು ನೀಡಿದ ರೈತನಿಗೆ ಅನ್ಯಾಯ
ಸೂಕ್ತ ಪರಿಹಾರ ಕೊಡದೆ ಅಧಿಕಾರಿಗಳ ಕಳ್ಳಾಟ
ನಾಲೆಯನ್ನೆ ಮುಚ್ಚುವ ಎಚ್ಚರಿಕೆ ಕೊಟ್ಟ ರೈತ
ಹೇಮಾವತಿ ನೀರಾವರಿ ನಿಗಮದಿಂದ ಕಳ್ಳಾಟ
ಕೆ.ಆರ್. ಪೇಟೆ ತಾಲೂಕಿನ ಸಿಂಧಘಟ್ಟ ಗ್ರಾಮದ ರೈತ
ಸಿಂಧಘಟ್ಟದ ಗ್ರಾಮದ ರೈತ ಪುಟ್ಟರಾಜು ಎಚ್ಚರಿಕೆ
ವಕ್ಫ್ ಕಾನೂನು ದೇಶಕ್ಕೆ ಮಾರಕವಾಗಿದ್ದು, ರೈತರಿಗೆ, ಹಿಂದೂಗಳಿಗೆ ಭೀತಿ ಹುಟ್ಟಿದೆ. ಒಮ್ಮೆ ವಕ್ಫ್ ಆಸ್ತಿಯೆಂದು ಹಕ್ಕು ಸ್ಥಾಪಿಸಿದರೆ ಅದನ್ನು ಸಾಮಾನ್ಯ ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಾಧ್ಯವಿಲ್ಲ, ಟ್ರಿಬ್ಯುನಲ್ನಲ್ಲೇ ಪ್ರಶ್ನಿಸಬೇಕು. ಹಾಗಾಗಿ ವಕ್ಫ್ ಕಾನೂನು ಸಂವಿಧಾನ ವಿರೋಧಿ ಕಾನೂನು ಆಗಿದೆ ಎಂದು ಸಂಸದ ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಉಪಚುನಾವಣೆಯಲ್ಲಿ ಜಿದ್ದಾಜಿದ್ದಿನ ಕಣ ಎಂದ್ರೆ ಅದು ಚನ್ನಪಟ್ಟಣ ಕ್ಷೇತ್ರ ತಮ್ಮ ಮಗನನ್ನು ಶತಾಯ ಗತಾಯ ಗೆಲ್ಲಿಸಿಕೊಳ್ಳು ಪಣ ತೊಟ್ಟಿದ್ದು, ಚನ್ನಪಟ್ಟಣ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದ್ದಾರೆ.. ಎಸ್ ಎಂ ಹಳ್ಳಿ ಗ್ರಾಮದಲ್ಲಿ ಕೇಂದ್ರ ಸಚಿವರಾದ ಎಚ್ಡಿ ಕುಮಾರಸ್ವಾಮಿ ಬೃಹತ್ ಪ್ರಚಾರ ಸಭೆ ನಡೆಸಿದ್ರು.. ನಿಖಿಲ್ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದ್ರು..
ವಕ್ಫ್ ಭೂಮಿ ವಿವಾದ ಹಾಗೂ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ.
ವಿಜಯಪುರದಲ್ಲಿ ವಕ್ಪ್ ಬೋರ್ಡ್ನಿಂದ ಆಸ್ತಿ ವಿವಾದ
ಇಂದಿನಿಂದ ಯತ್ನಾಳ್ ಅಹೋರಾತ್ರಿ ಧರಣಿ ಸತ್ಯಾಗ್ರಹ
ಹೋರಾಟ ನಡೆಸಲಿರೋ ಸ್ಥಳ ವೀಕ್ಷಣೆ ಮಾಡಿದ ಯತ್ನಾಳ್
ಡಿಸಿ ಕಚೇರಿ ಆವರಣದ ಹೊರ ಭಾಗ ಹಾಗೂ ಆವರಣದ
ಒಳ ಭಾಗದಲ್ಲಿ ಪರಿಶೀಲನೆ ನಡೆಸಿದ ಶಾಸಕ ಯತ್ನಾಳ್
ಕನ್ನಡ ಚಿತ್ರರಂಗದ ನಿರ್ದೇಶಕ ಗುರುಪ್ರಸಾದ್ ಅವರು ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ನೆಲಮಂಗಲ ಸಮೀಪದ ಮಾದನಾಯಕನಹಳ್ಳಿಯ ಅಪಾರ್ಮೆಂಟ್ ನಲ್ಲಿ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದರು. ನಿನ್ನೆ ಸಂಜೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ವಿಧಿ-ವಿಧಾನ ನೆರವೇರಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.