Hindu Temple Vandalised In Canada: ಕೆನಡಾದಲ್ಲಿ ಮತ್ತೊಮ್ಮೆ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದ್ದು, ದೇವಾಲಯದ ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ. ಈ ಬಾರಿ ಒಂಟಾರಿಯೊದ ವಿಂಡ್ಸರ್ನಲ್ಲಿರುವ ಹಿಂದೂ ದೇವಾಲಯವನ್ನು ಟಾರ್ಗೆಟ್ ಮಾಡಲಾಗಿದೆ. ವಿಂಡ್ಸರ್ ಪೊಲೀಸರು ವಿಧ್ವಂಸಕ ಕೃತ್ಯವನ್ನು 'ದ್ವೇಷದ ಘಟನೆ' ಎಂದು ತನಿಖೆ ಆರಂಭಿಸಿದ್ದಾರೆ, ಪೊಲೀಸರು ಇಬ್ಬರು ಶಂಕಿತರನ್ನು ಹುಡುಕುತ್ತಿದ್ದಾರೆ.
ಇದನ್ನೂ ಓದಿ: ಹನುಮ ಜಯಂತಿ ಆಚರಣೆ, ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಪೊಲೀಸರ ಹೈ ಅಲರ್ಟ್ ..!
ವಿಂಡ್ಸರ್ ಪೊಲೀಸರು ಹೊರಡಿಸಿದ ಹೇಳಿಕೆಯಲ್ಲಿ, “ಏಪ್ರಿಲ್ 5, 2023 ರಂದು, ದ್ವೇಷ-ಪ್ರೇರಿತ ವಿಧ್ವಂಸಕತೆ ಘಟನೆ ನಡೆದ ಬಳಿಕ, ಅಧಿಕಾರಿಗಳನ್ನು ನಾರ್ತ್’ವೇ ಅವೆನ್ಯೂದ 1700 ಬ್ಲಾಕ್’ನಲ್ಲಿರುವ ಹಿಂದೂ ದೇವಾಲಯಕ್ಕೆ ಕಳುಹಿಸಲಾಯಿತು. ಕಟ್ಟಡದ ಹೊರ ಗೋಡೆಯ ಮೇಲೆ ಕಪ್ಪು ಬಣ್ಣದಲ್ಲಿ ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ಬರಹವನ್ನು ಬರೆಯಲಾಗಿದೆ. ಇದನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ”.
ಮಧ್ಯರಾತ್ರಿ 12 ಗಂಟೆ (ಸ್ಥಳೀಯ ಕಾಲಮಾನ) ಸುಮಾರಿಗೆ ಇಬ್ಬರು ಶಂಕಿತರು ಕಟ್ಟಡದ ಗೋಡೆಯನ್ನು ಧ್ವಂಸ ಮಾಡುತ್ತಿರುವುದನ್ನು ಸಿಸಿಟಿವಿ ದೃಶ್ಯಗಳ ಮೂಲಕ ಪೊಲೀಸರು ತಿಳಿದುಕೊಂಡಿದ್ದಾರೆ. ಮತ್ತೊಬ್ಬ ವ್ಯಕ್ತಿ ಹೊರಗೆ ಕಾವಲು ಕಾಯುತ್ತಿರುವುದು ಕೂಡ ಈ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಈ ಹಿಂದೆಯೂ ಹಿಂದೂ ದೇವಾಲಯಗಳ ಮೇಲೆ ದಾಳಿ!
ಕೆನಡಾದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿರುವುದು ಮತ್ತು ಅದರ ಗೋಡೆಗಳ ಮೇಲೆ ಭಾರತಿ ವಿರೋಧಿ ಘೋಷಣೆಗಳನ್ನು ಬರೆಯುವುದು ಇದೇ ಮೊದಲಲ್ಲ. ಫೆಬ್ರವರಿಯಲ್ಲಿ, ಕೆನಡಾದ ಮಿಸ್ಸಿಸೌಗಾದಲ್ಲಿ ರಾಮ ಮಂದಿರವನ್ನು ಧ್ವಂಸಗೊಳಿಸಲಾಗಿತ್ತು. ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿತ್ತು. ಟೊರೊಂಟೊದಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ದೇವಾಲಯದ ಅಪವಿತ್ರತೆಯನ್ನು ಖಂಡಿಸಿದ್ದರು. ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಮತ್ತು ದುಷ್ಕರ್ಮಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ: "ತಾಜ್ ಮಹಲ್ ಪ್ರೀತಿಯ ಸಂಕೇತವಲ್ಲ"ಎಂದು ವಿವಾದಾತ್ಕಕ ಹೇಳಿಕೆ ನೀಡಿದ ಬಿಜೆಪಿ ಶಾಸಕ
ಜನವರಿಯಲ್ಲಿ, ಬ್ರಾಂಪ್ಟನ್’ನಲ್ಲಿರುವ ಹಿಂದೂ ದೇವಾಲಯವನ್ನು ಭಾರತ ವಿರೋಧಿ ಗೀಚುಬರಹದಿಂದ ವಿರೂಪಗೊಳಿಸಲಾಯಿತು. ಇದು ಭಾರತೀಯ ಸಮುದಾಯದಲ್ಲಿ ಆಕ್ರೋಶವನ್ನು ಹುಟ್ಟುಹಾಕಿತ್ತು. ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಗೌರಿ ಶಂಕರ ದೇವಾಲಯದ ಧ್ವಂಸವನ್ನು ಖಂಡಿಸಿದ್ದು, ಈ ಕೃತ್ಯವು ಕೆನಡಾದಲ್ಲಿರುವ ಭಾರತೀಯ ಸಮುದಾಯದ ಭಾವನೆಗಳಿಗೆ ತೀವ್ರ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. ಬ್ರಾಂಪ್ಟನ್ ಮೇಯರ್ ಪ್ಯಾಟ್ರಿಕ್ ಬ್ರೌನ್ ಕೂಡ ದೇವಾಲಯದ ಧ್ವಂಸವನ್ನು ಖಂಡಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.