Actor Darshan bail : 131 ದಿನಗಳ ಬಳಿಕ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈ ಕೋರ್ಟ್ ಆದೇಶ ನೀಡಿದೆ. ದರ್ಶನ್ ಆಚೆ ಬಂದಮೇಲೆ ಅಪ್ಪಿ-ತಪ್ಪಿಯೂ ಈ ತಪ್ಪುಗಳನ್ನು ಮಾಡಬಾರದು.
ಮಧ್ಯಂತರ ಜಾಮೀನು ಅಥವಾ ನಿರೀಕ್ಷಣಾ ಜಾಮೀನು ಮಂಜೂರಾತಿ ಕಾನೂನು ಪ್ರಕ್ರಿಯೆಗಳಲ್ಲಿ ಸಿಲುಕಿರುವ ವ್ಯಕ್ತಿಗಳಿಗೆ ಅಲ್ಪಾವಧಿಯ ತಾತ್ಕಾಲಿಕ ಪರಿಹಾರವಾಗಿದೆ. ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬಹುದು.
ಈ ಜಾಮೀನನ್ನು ತಾತ್ಕಾಲಿಕ ಮತ್ತು ಅಲ್ಪಾವಧಿಗೆ ನೀಡಲಾಗುತ್ತದೆ. ಅಲ್ಲದೆ, ಜಾಮೀನು ಅವಧಿ ಮುಗಿದ ನಂತರ ಆರೋಪಿಯನ್ನು ವಾರಂಟ್ ಇಲ್ಲದೆ ಕಸ್ಟಡಿಗೆ ತೆಗೆದುಕೊಳ್ಳಲಾಗುವುದು.
ಸಧ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.
ಕೋರ್ಟ್ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡುವ ವೇಳೆ ಕೆಲವು ಷರತ್ತುಗಳನ್ನು ಸಹ ವಿಧಿಸಿದೆ.
ಹೈಕೋರ್ಟ್ ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು ಎಂದು ಉಲ್ಲೇಖಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ..
ಹೈಕೋರ್ಟ್ ಕೂಡ ಜಾಮೀನು ಸಿಕ್ಕ ಒಂದು ವಾರದಲ್ಲಿ ಚಿಕಿತ್ಸೆಯ ಬಗ್ಗೆ ವಿವರ ನೀಡುವಂತೆ ಸೂಚಿಸಿದೆ.
ದರ್ಶನ್ ಯಾವುದೇ ಕಾರಣಕ್ಕೆ ವಿದೇಶ ಪ್ರಯಾಣ ಮಾಡುವಂತಿಲ್ಲ. ಅದಕ್ಕಾಗಿಯೇ ನ್ಯಾಯಾಲಯ ಪಾಸ್‌ಪೋರ್ಟ್ ವಶಕ್ಕೆ ನೀಡುವಂತೆ ಸೂಚಿಸಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷ್ಯ ನಾಶ ಪಡಿಸಲು ಅಥವಾ ಸಾಕ್ಷಿಗಳನ್ನು ಬೆದರಿಸುವ ಯತ್ನ ಮಾಡಬಾರದರು.
ಮೃತ ರೇಣುಕಸ್ವಾಮಿ ಕುಟುಂಬಕ್ಕೆ ಯಾವುದೇ ಆಮೀಷವೊಡ್ಡಬಾರದು.
ಈ ನಿಯಮಗಳು ನಟ ದರ್ಶನ್‌ಗೆ ಅಷ್ಟೇ ಅಲ್ಲ, ಜಾಮೀನು ಪಡೆದು ಹೊರಗೆ ಬರುವ ಎಲ್ಲಾ ವಿಚಾರಣಾಧೀನ ಕೈದಿಗಳಿಗೆ ಅನ್ವಯವಾಗುತ್ತದೆ..