ಆರೋಗ್ಯಕರವಾಗಿರಲು, ಈ ಋತುವಿನಲ್ಲಿ ತಿನ್ನುವ ತರಕಾರಿಗಳ ಬಗ್ಗೆ ಬಹಳ ಜಾಗರೂಕರಾಗಿರಬೇಕು. ತಜ್ಞರ ಪ್ರಕಾರ ಆಯ್ದ ಕೆಲವು ತರಕಾರಿಗಳನ್ನು ಸೇವಿಸುವುದು ಒಳ್ಳೆಯದು.
ಬೆಂಗಳೂರು : ಮಳೆಗಾಲ ಎಂದರೆ ಎಲ್ಲರಿಗೂ ಇಷ್ಟ. ಮಳೆಗಾಲ ಬಂತೆಂದರೆ ಸಾಕು ನಾನಾ ತರಹದ ಪದಾರ್ಥಗಳನ್ನು ತಿನ್ನಲು ಮನಸ್ಸು ಚಡಪಡಿಸತೊಡಗುತ್ತದೆ. ಆದರೆ ಮಳೆಗಾಲವು ಅನೇಕ ರೋಗಗಳನ್ನು ಕೂಡಾ ಹೊತ್ತು ತರುತ್ತದೆ ಅನ್ನುವುದನ್ನೂ ಮರೆಯುವಂತಿಲ್ಲ. ಆರೋಗ್ಯಕರವಾಗಿರಲು, ಈ ಋತುವಿನಲ್ಲಿ ತಿನ್ನುವ ತರಕಾರಿಗಳ ಬಗ್ಗೆ ಬಹಳ ಜಾಗರೂಕರಾಗಿರಬೇಕು. ತಜ್ಞರ ಪ್ರಕಾರ ಆಯ್ದ ಕೆಲವು ತರಕಾರಿಗಳನ್ನು ಸೇವಿಸುವುದು ಒಳ್ಳೆಯದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮಳೆಗಾಲದಲ್ಲಿ ಸೋರೆಕಾಯಿ ತಿನ್ನುವುದು ಒಳ್ಳೆಯದು. ಇದು ಜೀರ್ಣಕ್ರಿಯೆಯನ್ನು ಉತ್ತಮವಾಗಿಡುತ್ತದೆ. ಸೋರೆಕಾಯಿಯಲ್ಲಿ ಕಬ್ಬಿಣ, ವಿಟಮಿನ್ ಬಿ ಮತ್ತು ಸಿ ಸಮೃದ್ಧವಾಗಿದೆ. ಇದು ಮಳೆಗಾಲದಲ್ಲಿ ದೇಹವನ್ನು ಸೋಂಕಿನಿಂದ ರಕ್ಷಿಸುತ್ತದೆ.
ಹಾಗಲಕಾಯಿ ತಿನ್ನುವುದು ಮಳೆಗಾಲದಲ್ಲಿ ಹೆಚ್ಚು ಪ್ರಯೋಜನಕಾರಿ. ವಿಟಮಿನ್ ಸಿ ಸಮೃದ್ಧವಾಗಿರುವ ಹಾಗಲಕಾಯಿಯು ಪ್ರತಿ ಋತುವಿನಲ್ಲಿ ದೇಹವನ್ನು ಫಿಟ್ ಆಗಿ ಇಡುತ್ತದೆ. ಇದರಲ್ಲಿರುವ ಆಂಟಿವೈರಲ್ ಗುಣಲಕ್ಷಣಗಳು ಮಳೆಯಿಂದ ಉಂಟಾಗುವ ಸೋಂಕುಗಳಿಂದ ರಕ್ಷಿಸುತ್ತದೆ.
ಆಲೂಗಡ್ಡೆ, ಸಿಹಿ ಗೆಣಸುಗಳಂತಹ ಗೆಡ್ಡೆಗಳನ್ನು ಮಳೆಗಾಲದಲ್ಲಿ ತಿನುವುದು ಉತ್ತಮ ಎಂದು ಹೇಳಲಾಗುತ್ತದೆ. ಇದು ಆರೋಗ್ಯಕ್ಕೆ ಯಾವುದೇ ಹಾನಿ ಉಂಟು ಮಾಡುವುದಿಲ್ಲ. ಮಳೆಗಾಲದಲ್ಲಿ ಗಡ್ಡೆಯು ದೇಹದಲ್ಲಿ ಬೆಳೆಯುವ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ. ಈ ಋತುವಿನಲ್ಲಿ ಯಾವುದೇ ಹಿಂಜರಿಕೆಯಿಲ್ಲದೆ ಗೆಡ್ಡೆಗಳನ್ನು ಸೇವಿಸಬಹುದು.
ಮಳೆಗಾಲದಲ್ಲಿ ಬೆಂಡೆಕಾಯಿ ತಿನ್ನುವುದು ತುಂಬಾ ಪ್ರಯೋಜನಕಾರಿ. ಈ ಕಾರಣದಿಂದಾಗಿ, ದೇಹದ ಕೊಲೆಸ್ಟ್ರಾಲ್ ನಿಯಂತ್ರಣದಲ್ಲಿ ಉಳಿಯುತ್ತದೆ. ಇದಲ್ಲದೆ, ಬೆಂಡೆಕಾಯಿ ಸೇವನೆಯಿಂದ ಕಣ್ಣುಗಳಿಗೆ ಸಂಬಂಧಿಸಿದ ಎಲ್ಲಾ ರೀತಿಯ ಸಮಸ್ಯೆಗಳು ದೂರವಾಗುತ್ತದೆ. ಇದರಿಂದ ಮೂಳೆಗಳು ಗಟ್ಟಿಯಾಗಿರುತ್ತವೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.