ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಸ್ಥಾನದ ಬಳಿ ಕೋವಿಡ್ ನಿರ್ಬಂಧದ ನಡುವೆಯೂ ಸುಮಾರು 30 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ.
ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಸ್ಥಾನದ ಬಳಿ ಕೋವಿಡ್ ನಿರ್ಬಂಧದ ನಡುವೆಯೂ ಸುಮಾರು 30 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ. ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಲ್ಲ. ಮಹಾರಾಷ್ಟ್ರ, ಆಂಧ್ರ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಇದು ಕೊವಿಡ್ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.
ಕೊಪ್ಪಳದ ಹುಲಿಗಿಯ ಹುಲಿಗೆಮ್ಮ ದೇವಸ್ಥಾನದ ಬಳಿ ಕೋವಿಡ್ ನಿರ್ಬಂಧದ ನಡುವೆಯೂ ಸುಮಾರು 30 ಸಾವಿರಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನಕ್ಕೆ ಆಗಮಿಸಿದ್ದಾರೆ.
ಹುಣ್ಣಿಮೆ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರು ಬರುತ್ತಿದ್ದಾರೆ. ದೇವಸ್ಥಾನದ 200 ಮೀಟರ್ ವ್ಯಾಪ್ತಿವರೆಗೂ ಭಕ್ತರಿಗೆ ದರ್ಶನಕ್ಕೆ ನಿಷೇಧವಿದ್ದರೂ ಅಡ್ಡದಾರಿಯಿಂದ ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದೆ.
ಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರ ಕಾಪಾಡಿಲ್ಲ. ಮಹಾರಾಷ್ಟ್ರ, ಆಂಧ್ರ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಇದು ಕೊವಿಡ್ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.
ತುಂಗಾಭದ್ರ ನದಿಯಲ್ಲಿ ಸ್ನಾನ ಮಾಡಿ, ಹುಲಿಗೆಮ್ಮ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಿದ್ದಾರೆ. ದೇವಸ್ಥಾನದ ಬಳಿ ಭಕ್ತರು ಹೋಗದಂತೆ ತಡೆಯಲು ಪೊಲೀಸರು ಹರಸಾಹಸ ಪಡುವಂತಾಗಿದೆ.
ಭಕ್ತರನ್ನು ತಡೆಯಲು ದೇವಸ್ಥಾನದಿಂದ 200 ಮೀಟರ್ ಬಳಿ ಗೇಟ್ ಬಂದ್ ಮಾಡಲಾಗಿದ್ದು, ದೇವಾಲಯದ ಒಳಗೆ ಹಿನ್ನೆಲೆ ಗೇಟ್ ಬಳಿ ನಮಸ್ಕರಿಸಿ ಭಕ್ತರು ತೆರಳುತ್ತಿದ್ದಾರೆ.