ಮಧುಮೇಹದಿಂದ ಬಹಳುತ್ತಿರುವವರು ತಮ್ಮ ನಿತ್ಯದ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸುವುದರಿಂದ ಅದನ್ನು ನಿಯಂತ್ರಿಸಬಹುದು ಎಂದು ಹೇಳಬಹುದು.
ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಮಧುಮೇಹದಿಂದ ಬಹಳುತ್ತಿರುವವರು ತಮ್ಮ ನಿತ್ಯದ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇರಿಸುವುದರಿಂದ ಅದನ್ನು ನಿಯಂತ್ರಿಸಬಹುದು ಎಂದು ಹೇಳಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಅವಕಾಡೊ ಹಣ್ಣು: ಅವಕಾಡೊ ಹಣ್ಣು ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳನ್ನು ಹೊಂದಿದೆ, ಇದು ಮುಖ್ಯವಾಗಿ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ.
ಸೊಪ್ಪು-ತರಕಾರಿಗಳು : ಪ್ರತಿದಿನ ಹೆಚ್ಚು ಫೈಬರ್ ಭರಿತ ಹಸಿರು ಸೊಪ್ಪು ಮತ್ತು ತರಕಾರಿಗಳನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಮೊಟ್ಟೆ: ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ 2 ಮೊಟ್ಟೆಗಳನ್ನು ಸೇರಿಸಿಕೊಳ್ಳಬಹುದು. ಏಕೆಂದರೆ ಅವುಗಳಲ್ಲಿನ ಕೊಬ್ಬು ಮತ್ತು ಪ್ರೋಟೀನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಮೊಸರು: ನಿಮ್ಮ ದೈನಂದಿನ ಆಹಾರದಲ್ಲಿ ಮೊಸರು ಮತ್ತು ಮಜ್ಜಿಗೆಯಂತಹ ಆಹಾರಗಳನ್ನು ಸೇರಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾಗುತ್ತದೆ. ಮಧುಮೇಹವನ್ನು ನಿಯಂತ್ರಿಸಲು ಸಹ ಇದು ಪ್ರಯೋಜನಕಾರಿ ಎಂದು ಹೇಳಲಾಗುತ್ತಿದೆ.
ಕಿತ್ತಳೆ : ಕಿತ್ತಳೆಯಂತಹ ಸಿಟ್ರಸ್ ಹಣ್ಣುಗಳನ್ನು ಪ್ರತಿದಿನ ಸೇವಿಸುವುದರಿಂದ ಚರ್ಮವು ಸುಧಾರಿಸುತ್ತದೆ ಮತ್ತು ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಹೇಳಲಾಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.