Health Benefits of Ajwain: ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದರೆ ಪ್ರತಿದಿನ ಎರಡು ಚಮಚದಷ್ಟು ಓಂ ಕಾಳುಗಳನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿ ಬೆಳಗ್ಗೆ ಸೋಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಇದರಿಂದ ಕೆಲವೇ ದಿನಗಳಲ್ಲಿ ನಿಮ್ಮ ಬಿಳಿ ಕೂದಲಿನ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
Health Benefits of Ajwain: ನಿಯಮಿತವಾಗಿ ಓಂ ಕಾಳು ಸೇವಿಸುವುದರಿಂದ ನೀವು ಹಲವಾರು ಆರೋಗ್ಯರ ಪ್ರಯೋಜನಗಳನ್ನು ಪಡೆಯಬಹುದು. ಓಂ ಕಾಳಿನಲ್ಲಿ ಸಾಕಷ್ಟು ಪೋಷಕಾಂಶಗಳಿವೆ. ಇದು ಆಹಾರದ ಪರಿಮಳ ಮತ್ತು ರುಚಿ ಹೆಚ್ಚಿಸುತ್ತದೆ. ಅಜೀರ್ಣ ಸಮಸ್ಯೆಯನ್ನು ನಿವಾರಿಸಲು ಜೀರಿಗೆ ಬದಲು ಓಂ ಕಾಳುಗಳನ್ನು ಬಳಸಬಹುದು. ಓಂ ಕಾಳುಗಳ ಮತ್ತಷ್ಟು ಅದ್ಭುತ ಆರೋಗ್ಯ ಪ್ರಯೋಜನಗಳ ಇಲ್ಲಿದೆ ಮಾಹಿತಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
ಜೀರಿಗೆಯೊಂದಿಗೆ ಓಂ ಕಾಳನ್ನು ಹುರಿದು ನೀರಿನಲ್ಲಿ ಬೇಯಿಸಿ ಸೋಸಿ, ಅದಕ್ಕೆ ಸಕ್ಕರೆ ಬೆರೆಸಿ ಕುಡಿದರೆ ನೈಸರ್ಗಿಕವಾಗಿಯೇ ಅಸಿಡಿಟಿ ಸಮಸ್ಯೆಯು ಕಡಿಮೆಯಾಗುತ್ತದೆ. ಓಂ ಕಾಳು ರಕ್ತವನ್ನು ಶುದ್ಧೀಕರಣಗೊಳಿಸಿ, ದೇಹದಲ್ಲಿ ರಕ್ತ ಸಂಚಲನವನ್ನು ಹೆಚ್ಚಿಸುತ್ತದೆ.
ಓಂ ಕಾಳು ಹೊಟ್ಟೆ, ಕರುಳು ಮತ್ತು ಹುಣ್ಣಿನಂತಹ ಸಮಸ್ಯೆಗಳನ್ನು ಗುಣಪಡಿಸುತ್ತದೆ. ಇವು ಆಮ್ಲೀಯತೆ, ಗ್ಯಾಸ್ ಮತ್ತು ಅಜೀರ್ಣಕ್ಕೆ ಚಿಕಿತ್ಸೆ ನೀಡಲು ಸಹಕಾರಿಯಾಗಿವೆ. ಜೀರ್ಣಕಾರಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ನೀವು ಅರ್ಧ ಟೀ ಚಮಚ ಓಂ ಕಾಳು ಜಗಿದು ರಸವನ್ನು ನುಂಗಬೇಕು ಅಥವಾ ನೀರಿನೊಂದಿಗೆ ಕುದಿಸಿ ಕುಡಿಯಬಹುದು.
ಓಂಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಇದ್ದು, ಇದು ದೇಹದಲ್ಲಿ ಅನಗತ್ಯವಾಗಿ ಶೇಖರಣೆಯಾಗಿರುವ ಕೊಬ್ಬನ್ನು ತೆಗೆಯಲು ಸಹಾಯ ಮಾಡುತ್ತದೆ. ಓಂ ಕಾಳುಗಳಲ್ಲಿ ಉರಿಯೂತ ಶಮನ ಮಾಡುವ ಗುಣಗಳಿವೆ. ಆರ್ಥ್ರೈಟಿಸ್‌ನಿಂದ ಉಂಟಾಗಿರುವ ಮೂಳೆಗಳ ಊತವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.
ಹೊಟ್ಟೆ ನೋವಿನಿಂದ ಮುಕ್ತಿ ನೀಡಲು ಓಂ ಕಾಳುಗಳು ಸಹಾಯ ಮಾಡುತ್ತದೆ. ಜೀರ್ಣವಾಗದ ಆಹಾರವು ಮಲವಿಸರ್ಜನೆಯ ಮೂಲಕ ದೇಹದಿಂದ ಹೊರ ಹೋಗದಿದ್ದಾಗ ಹೊಟ್ಟೆಯ ಸಮಸ್ಯೆಗಳು ಬರಬಹುದು. ಓಂ ಕಾಳುಗಳನ್ನು ಜಗಿದು ತಿನ್ನುವುದರಿಂದ ಈ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.
ಬಿಳಿ ಕೂದಲಿನ ಸಮಸ್ಯೆ ಎದುರಿಸುತ್ತಿದ್ದರೆ ಪ್ರತಿದಿನ ಎರಡು ಚಮಚದಷ್ಟು ಓಂ ಕಾಳುಗಳನ್ನು ನೀರಿನಲ್ಲಿ ರಾತ್ರಿಯಿಡೀ ನೆನೆಸಿ ಬೆಳಗ್ಗೆ ಸೋಸಿ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ಇದರಿಂದ ಕೆಲವೇ ದಿನಗಳಲ್ಲಿ ನಿಮ್ಮ ಬಿಳಿ ಕೂದಲಿನ ಸಮಸ್ಯೆಯಿಂದ ಮುಕ್ತಿ ದೊರೆಯುತ್ತದೆ.