Health Tips: ಈ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ಕಬ್ಬಿನ ಜ್ಯೂಸ್‌ ಸೇವಿಸಬೇಡಿ

Sugarcane Juice: ಅಜೀರ್ಣ ಸಮಸ್ಯೆಯನ್ನು ಹೊಂದಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

Sugarcane Juice: ಬೇಸಿಗೆಯಲ್ಲಿ ಬಹುತೇಕರು ಮಜ್ಜಿಗೆ, ನಿಂಬೆ ಮತ್ತು ಕಬ್ಬಿನ ಜ್ಯೂಸ್ ಸೇವಿಸುತ್ತಾರೆ. ಕಬ್ಬಿನ ಜ್ಯೂಸ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಕಾರ್ಬೋಹೈಡ್ರೇಟ್‌ಗಳು, ಕ್ಯಾಲ್ಸಿಯಂ, ಕಬ್ಬಿಣ, ಸತು, ಮೆಗ್ನೀಸಿಯಂ, ಪೊಟ್ಯಾಸಿಯಂನಂತಹ ಅನೇಕ ಪೋಷಕಾಂಶಗಳಿಂದ ಕಬ್ಬಿನ ಜ್ಯೂಸ್‌ ಸಮೃದ್ಧವಾಗಿದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ಮೂಳೆಗಳನ್ನು ಆರೋಗ್ಯವಾಗಿಡುತ್ತದೆ ಮತ್ತು ಮೂತ್ರಪಿಂಡಗಳನ್ನು ಆರೋಗ್ಯವಾಗಿರಿಸುತ್ತದೆ. ಹಲವಾರು ಆರೋಗ್ಯಕರ ಪ್ರಯೋಜನ ಹೊಂದಿರುವ ಕಬ್ಬಿನ ಜ್ಯೂಸ್‌ ಅನ್ನು ಕೆಲವರು ಅಪ್ಪಿತಪ್ಪಿಯೂ ಸೇವಿಸಬಾರದು. ಇದು ಹಲವಾರು ಆರೋಗ್ಯಕರ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಯಾರು ಕಬ್ಬಿನ ಜ್ಯೂಸ್‌ ಸೇವಿಸಬಾರದು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

1 /5

ನಿದ್ರಾಹೀನತೆಯಿಂದ ಬಳಲುತ್ತಿರುವವರು ಕಬ್ಬಿನ ಜ್ಯೂಸ್‌ ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ನಿದ್ರೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಈ ಕಾರಣದಿಂದ ನಿದ್ರಾಹೀನತೆ ಮತ್ತು ಒತ್ತಡದ ಸಮಸ್ಯೆಗಳನ್ನು ಎದುರಿಸಬಹುದು.

2 /5

ಮಧುಮೇಹ ಇರುವವರು ಕಬ್ಬಿನ ಜ್ಯೂಸ್ ಕುಡಿಯಬಾರದು. ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುತ್ತದೆ. ಈ ಕಾರಣದಿಂದ ಇದು ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ. ಕಬ್ಬಿನ ರಸದಲ್ಲಿ ಸಕ್ಕರೆ ಅಂಶ ಹೆಚ್ಚಾಗಿರುತ್ತದೆ. 240 ಮಿಲಿ ಕಬ್ಬಿನ ರಸದಲ್ಲಿ ಸುಮಾರು 50 ಗ್ರಾಂ ಸಕ್ಕರೆ ಇರುತ್ತದೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಪ್ರಮಾಣ ವೇಗವಾಗಿ ಹೆಚ್ಚುತ್ತದೆ.

3 /5

ಅಧಿಕ ತೂಕದಿಂದ ಬಳಲುತ್ತಿರುವವರು ಕಬ್ಬಿನ ರಸವನ್ನು ಕುಡಿಯಬಾರದು. ಇದು ಹೆಚ್ಚಿನ ಕ್ಯಾಲೋರಿ ಅಂಶವನ್ನು ಹೊಂದಿದ್ದು, ಇದರ ಸೇವನೆಯಿಂದ ತೂಕ ಹೆಚ್ಚಾಗಬಹುದು. ಹೆಚ್ಚಿನ ಸಕ್ಕರೆ ಅಂಶದಿಂದ ದೇಹದ ಕೊಬ್ಬು ಕೂಡ ಹೆಚ್ಚಾಗುತ್ತದೆ. ತೂಕ ಇಳಿಸಿಕೊಳ್ಳಲು ಪ್ರಯತ್ನಿಸುವವರು ಕಬ್ಬಿನ ರಸವನ್ನು ಕುಡಿಯಲೇಬಾರದು.

4 /5

ಅಜೀರ್ಣ ಸಮಸ್ಯೆಯನ್ನು ಹೊಂದಿರುವವರು ಕಬ್ಬಿನ ರಸವನ್ನು ಸೇವಿಸಬಾರದು. ಇದರಲ್ಲಿರುವ ಪೋಲಿಕೋಸನಾಲ್ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಇದರಿಂದ ಹೊಟ್ಟೆನೋವು, ವಾಂತಿ, ಭೇದಿ ಮುಂತಾದ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ.

5 /5

ಶೀತ & ಕೆಮ್ಮು ಇರುವವರು ಸಹ ಕಬ್ಬಿನ ರಸವನ್ನು ಕುಡಿಯಬಾರದು. ಇದರ ಸೇವನೆಯಿಂದ ನೆಗಡಿ ಮತ್ತು ಕೆಮ್ಮಿನ ಸಮಸ್ಯೆ ಮತ್ತಷ್ಟು ಹೆಚ್ಚುತ್ತದೆ. ಇದನ್ನು ಸೇವಿಸುವುದರಿಂದ ಗಂಟಲು ನೋವು ಮತ್ತು ತಲೆನೋವು ಕೂಡ ಬರುತ್ತದೆ.