ಶಿರೂರಿನಲ್ಲಿ ಗುಡ್ಡ ಕುಸಿತ; ರಕ್ಷಣಾ ಕಾರ್ಯ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು

ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿಗಳ ಕಾರ್ಯಕ್ಷಮತೆಗೆ ನಿಜಕ್ಕೂ ಶ್ಲಾಘನೀಯ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

1 /5

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.

2 /5

ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು, ಅಗತ್ಯ ತಂತ್ರಜ್ಞಾನದ ನೆರವು ಪಡೆಯುವಂತೆ ಸೂಚಿಸಿದ್ದೇನೆ.  

3 /5

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ.

4 /5

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆ ಇದೆ. ಹೀಗಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಿಬ್ಬಂದಿಗಳು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಕೆ ನೀಡಿದ್ದೇನೆ.  

5 /5

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಹಲವು ದಿನಗಳಿಂದ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಸ್ಥಳದಲ್ಲಿ ನಿಂತು ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.