IND vs AUS: ಈ 5 ಆಟಗಾರರು ಟೀಂ ಇಂಡಿಯಾದಲ್ಲಿದ್ದರೆ ಆಸೀಸ್ ವಿರುದ್ಧ ಏಕದಿನ ಸರಣಿ ಗೆಲ್ಲೋದು ಖಂಡಿತ!

ODI Series, IND vs AUS: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ODIಗಳ ಸರಣಿಯು ಮಾರ್ಚ್ 17 ರಿಂದ ಪ್ರಾರಂಭವಾಗಲಿದೆ. ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಭಾರತ ಸುಲಭವಾಗಿ ಗೆದ್ದುಕೊಂಡಿತು. ಆದರೆ, ಮೂರನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಉತ್ತಮವಾಗಿ ಬೌಲಿಂಗ್ ಮಾಡಿದ ಆಧಾರದ ಮೇಲೆ ತಂಡವು ಗೆಲ್ಲಲು ಸಾಧ್ಯವಾಯಿತು. ಈ ವರ್ಷ ಅಕ್ಟೋಬರ್-ನವೆಂಬರ್‌ನಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್‌ಗೆ ಸಂಬಂಧಿಸಿದಂತೆ ಎರಡೂ ತಂಡಗಳಿಗೆ ಈ ಸರಣಿಯು ಅತ್ಯಂತ ಮಹತ್ವದ್ದಾಗಿದೆ. ಈ ಸರಣಿಯಲ್ಲಿ ಭಾರತದ 5 ಆಟಗಾರರು ಆಸ್ಟ್ರೇಲಿಯಾ ತಂಡವನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಬಲ್ಲರು ಎಂದು ಹೇಳಲಾಗುತ್ತಿದೆ.

1 /5

ಅಕ್ಷರ್ ಪಟೇಲ್ ತಮ್ಮ ಆಲ್ ರೌಂಡ್ ಪ್ರದರ್ಶನದಿಂದ ಎಲ್ಲರನ್ನೂ ಆಕರ್ಷಿಸುತ್ತಿದ್ದಾರೆ. ಆದರೆ, ಟೆಸ್ಟ್ ಸರಣಿಯಲ್ಲಿ ಅವರ ಬೌಲಿಂಗ್ ಉತ್ತಮವಾಗಿರಲಿಲ್ಲ. ಆದರೆ ಅವರ ಬ್ಯಾಟಿಂಗ್ ಪ್ರಭಾವ ಬೀರಿತ್ತು. ಏಕದಿನಗಳಲ್ಲಿ ಅಕ್ಷರ್ ಭಾರತಕ್ಕಾಗಿ 49 ಪಂದ್ಯಗಳನ್ನು ಆಡಿದ್ದಾರೆ., ಅದರಲ್ಲಿ 56 ವಿಕೆಟ್’ಗಳನ್ನು ಪಡೆದಿದ್ದಾರೆ. ಜೊತೆಗೆ ಬ್ಯಾಟಿಂಗ್’ನಲ್ಲಿ. 381 ರನ್‌ ಕಲೆಹಾಕಿದ್ದಾರೆ.

2 /5

ಮೊಹಮ್ಮದ್ ಶಮಿ, ಟೀಂ ಇಂಡಿಯಾದ ಅತ್ಯುತ್ತಮ ವೇಗದ ಬೌಲರ್‌ಗಳಲ್ಲಿ ಒಬ್ಬರು. ಜಸ್ಪ್ರೀತ್ ಬುಮ್ರಾ ಗಾಯಗೊಂಡ ನಂತರ, ಅವರು ತಂಡದ ಬೌಲಿಂಗ್‌ನ ಹೆಚ್ಚಿನ ಜವಾಬ್ದಾರಿಯನ್ನು ಹೊಂದಿದ್ದಾರೆ. ಅದರಂತೆಯೇ ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಶಮಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದರು. ಅವರು ಆಡಿದ 3 ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.

3 /5

ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಟಿ20 ಪಂದ್ಯದಲ್ಲಿ ಶತಕ ಬಾರಿಸಿದ ಕೊಹ್ಲಿ ಮತ್ತೆ ಹಿಂತಿರುಗಿ ನೋಡಿಲ್ಲ. ಕೊಹ್ಲಿ ಬ್ಯಾಟ್‌ನಿಂದ ನಿರಂತರವಾಗಿ ರನ್’ಗಳ ಸುರಿಮಳೆ ಹರಿದುಬರುತ್ತಿದೆ. ಈ ವರ್ಷ ಏಕದಿನ ಪಂದ್ಯಗಳಲ್ಲಿ ಕೊಹ್ಲಿ 2 ಶತಕ ಸಿಡಿಸಿದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ವಿರುದ್ಧವೂ ಕೊಹ್ಲಿ ಬ್ಯಾಟ್ ಕೆಲಸ ಮಾಡುವ ನಿರೀಕ್ಷೆಯಿದೆ.

4 /5

23ರ ಹರೆಯದ ಶುಭ್ಮನ್ ಗಿಲ್ ಭಾರತದ ಎಲ್ಲಾ ಮೂರು ಮಾದರಿಗಳಲ್ಲಿ ಶತಕ ಬಾರಿಸಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇದು ಮಾತ್ರವಲ್ಲದೆ, ಏಕದಿನದಲ್ಲಿ ಗಿಲ್ ಭಾರತಕ್ಕಾಗಿ 21 ಪಂದ್ಯಗಳನ್ನು ಆಡಿದ್ದು, 4 ಶತಕ ಮತ್ತು 5 ಅರ್ಧ ಶತಕಗಳನ್ನು ಒಳಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಲ್ಲಿ ಗಿಲ್‌ಗೆ ಅವಕಾಶ ಸಿಕ್ಕಿದ್ದು ಅದ್ಭುತವಾಗಿ ಬಳಸಿಕೊಂಡಿದ್ದಾರೆ.

5 /5

ಭಾರತದ ಪರ ODI ಕ್ರಿಕೆಟ್‌ನಲ್ಲಿ ಇಶಾನ್ ಕಿಶನ್ ಅವರ ವೃತ್ತಿಜೀವನವು ಹೇಳಿಕೊಳ್ಳುವ ರೀತಿಯಲ್ಲಿಲ್ಲ. ಆದರೆ ಅವರ ಕಡಿಮೆ ವೃತ್ತಿಜೀವನದಲ್ಲಿ ದಂತಕಥೆ ಬ್ಯಾಟ್ಸ್‌ಮನ್‌ಗಳ ದಾಖಲೆಯನ್ನು ಸರಿಗಟ್ಟಿದ್ದಾರೆ. ಕಿಶನ್ 2022 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 210 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು, ODI ಕ್ರಿಕೆಟ್ ಇತಿಹಾಸದಲ್ಲಿ ವೇಗದ ದ್ವಿಶತಕವನ್ನು ಗಳಿಸಿದರು. ಅವರು 13 ಏಕದಿನ ಪಂದ್ಯಗಳಲ್ಲಿ 3 ಅರ್ಧಶತಕಗಳನ್ನು ಸಹ ಹೊಂದಿದ್ದಾರೆ.