India vs South Africa T20 Series: 2022 ರ ಟಿ 20 ವಿಶ್ವಕಪ್‌ಗೆ ಮೊದಲು, ಟೀಮ್ ಇಂಡಿಯಾ ತಮ್ಮ ಸಿದ್ಧತೆಗಳನ್ನು ಪರಿಶೀಲಿಸಲು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ.
India vs South Africa T20 Series: ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ವಿಶ್ವದ ಅತ್ಯಂತ ಅಪಾಯಕಾರಿ ತಂಡವೆಂದು ಪರಿಗಣಿಸಲಾಗಿದೆ. 2022 ರ ಟಿ 20 ವಿಶ್ವಕಪ್‌ಗೆ ಮೊದಲು, ಟೀಮ್ ಇಂಡಿಯಾ ತಮ್ಮ ಸಿದ್ಧತೆಗಳನ್ನು ಪರಿಶೀಲಿಸಲು ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟಿ 20 ಪಂದ್ಯಗಳ ಸರಣಿಯನ್ನು ಆಡಲಿದೆ. ಇಂದು ನಾವು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ 5 ಭಾರತೀಯ ಆಟಗಾರರ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಭಾರತ ಕ್ರಿಕೆಟ್ ತಂಡದ ಹಿಟ್ ಮ್ಯಾನ್, ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ವಿರುದ್ಧ 13 ಪಂದ್ಯಗಳಲ್ಲಿ 362 ರನ್ ಗಳಿಸಿದ್ದಾರೆ.
ಸುರೇಶ್ ರೈನಾ ದಕ್ಷಿಣ ಆಫ್ರಿಕಾ ವಿರುದ್ಧ 12 ಪಂದ್ಯಗಳಲ್ಲಿ 339 ರನ್ ಗಳಿಸಿದ್ದು, ಇದರಲ್ಲಿ ಬಿರುಸಿನ ಶತಕವೂ ಸೇರಿದೆ. ಸುರೇಶ್ ರೈನಾ 15 ಆಗಸ್ಟ್ 2020 ರಂದು ಕ್ರಿಕೆಟ್‌ನಿಂದ ನಿವೃತ್ತರಾದರು.
ವಿಶ್ವದ ಅತ್ಯಂತ ಅಪಾಯಕಾರಿ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ, ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರರಾಗಿದ್ದಾರೆ. ಕೊಹ್ಲಿ ಆಫ್ರಿಕಾ ತಂಡದ ವಿರುದ್ಧ 10 ಪಂದ್ಯಗಳಲ್ಲಿ 254 ರನ್ ಗಳಿಸಿದ್ದಾರೆ.
ಶಿಖರ್ ಧವನ್ ಸದ್ಯ ಭಾರತ ಟಿ20 ತಂಡದ ಭಾಗವಾಗಿಲ್ಲ. ಧವನ್ ದಕ್ಷಿಣ ಆಫ್ರಿಕಾ ವಿರುದ್ಧ 10 ಪಂದ್ಯಗಳಲ್ಲಿ 233 ರನ್ ಗಳಿಸಿದ್ದಾರೆ.
ಇಶಾನ್ ಕಿಶನ್ ಬಹಳ ದಿನಗಳಿಂದ ಭಾರತ ತಂಡದಿಂದ ಹೊರಗುಳಿಯುತ್ತಿದ್ದಾರೆ. ಟಿ20 ವಿಶ್ವಕಪ್‌ನಲ್ಲೂ ಅವರಿಗೆ ಸ್ಥಾನ ಸಿಗಲಿಲ್ಲ. ಇಶಾನ್ ಕಿಶನ್ ದಕ್ಷಿಣ ಆಫ್ರಿಕಾ ವಿರುದ್ಧ 5 ಪಂದ್ಯಗಳಲ್ಲಿ 206 ರನ್ ಗಳಿಸಿದ್ದಾರೆ.