ಕನ್ನಡ ಚಿತ್ರರಂಗದ ರೆಬಲ್ ಸ್ಟಾರ್ ಎಂದೇ ಹೆಸರಾದ ಮಂಡ್ಯದ ಗಂಡು ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಚಿತ್ರರಂಗ ಮತ್ತು ರಾಜಕೀಯ ರಂಗದ ನೂರಾರು ಗಣ್ಯರು ಅಂಬರೀಶ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ತೀವ್ರ ಎದೆನೋವು ಹಾಗು ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಅಂಬರೀಶ್(66) ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಇವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ನಡೆಯಲಿದೆ. ಇದೇ ಸಂದರ್ಭದಲ್ಲಿ ಚಿತ್ರರಂಗ ಮತ್ತು ರಾಜಕೀಯ ರಂಗದ ಅನೇಕ ಗಣ್ಯರು ಅಂಬಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ತಮ್ಮ ನೆಚ್ಚಿನ ಅಣ್ಣ, ಚಿತ್ರರಂಗದ ರೆಬಲ್ ಸ್ಟಾರ್ ಅಂಬರೀಶ್ ಅಂತಿಮ ದರ್ಶನದಲ್ಲಿ ಪಾಲ್ಗೊಂಡು ಕಂಬನಿ ಮಿಡಿದ ಚಿತ್ರರಂಗ
ಅಂತಿಮ ನಾನಾ ಸಲ್ಲಿಸಲು ಆಗಮಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಮಾತನಾಡುತ್ತಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.
ಮಂಡ್ಯದ ಗಂಡು ಅಂಬರೀಶ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತವರ ಪತ್ನಿ ಚನ್ನಮ್ಮ.
ಅಂಬಿ ಅಂತಿಮ ನಮನದಲ್ಲಿ ಭಾಗವಹಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ
ಅಂಬಿ ಅಂತಿಮ ನಮನದಲ್ಲಿ ಭಾಗವಹಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸುಮಲತಾ ಅವರಿಗೆ ಸಾಂತ್ವನ ಹೇಳಿದರು.
ಅಂಬರೀಶ್ ಗೆ ಅಂತಿಮ ನಮನ ಸಲ್ಲಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಅಂಬರೀಶ್ ಗೆ ಅಂತಿಮ ನಮನ ಸಲ್ಲಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಅಂಬರೀಶ್ ಪತ್ನಿ ಸುಮಲತಾ ಅವರಿಗೆ ಸಾಂತ್ವನ ಹೇಳುತ್ತಿರುವ ಹಿರಿಯ ನಟಿ ಜಯಂತಿ.