ಖ್ಯಾತ ಬಹುಭಾಷಾ ನಟಿ ನಯನತಾರಾ ಮತ್ತು ನಿರ್ಮಾಪಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಮಹಾಬಲಿಪುರಂನಲ್ಲಿ ತಮ್ಮ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಸ್ವತಃ ವಿಘ್ನೇಶ್ ಶಿವನ್ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ವಿವಾಹ ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರರಂಗದ ಗಣ್ಯರು, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಜೋಡಿಗೆ ಶುಭಾಶಯ ಕೋರಿದ್ದಾರೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿಗೆ ಸೋಷಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.
ಈ ಸ್ಟಾರ್ ದಂಪತಿ 2015ರಲ್ಲಿ ಡೇಟಿಂಗ್ ಪ್ರಾರಂಭಿಸಿದ್ದರು.‘ನಾನು ರೌಡಿ ಧಾನ್’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಈ ಜೋಡಿ ಪ್ರೀತಿಸಲು ಶುರು ಮಾಡಿತ್ತು. ಪ್ರಶಸ್ತಿ ಸಮಾರಂಭವೊಂದರಲ್ಲಿ ತಾವಿಬ್ಬರೂ ಶೀಘ್ರವೇ ಮದುವೆಯಾಗುತ್ತೇವೆಂದು ದೃಢಪಡಿದ್ದರು.